ಮಂಗಳೂರು | ಕುಡಿತದ ಅಮಲಿನಲ್ಲಿ ಮಸೀದಿಗೆ ನುಗ್ಗಿದ್ದ ಭಿನ್ನಕೋಮಿನ ಯುವಕನ ಬಂಧನ

Date:

ಶುಕ್ರವಾರದ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಮಸೀದಿಯೊಂದಕ್ಕೆ ನುಗ್ಗಿದ್ದ ಭಿನ್ನಕೋಮಿನ ಯುವಕನೋರ್ವನನ್ನು ಮಂಗಳೂರು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಬಂಧಿತನನ್ನು ಹನುಮಂತ ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಕಾವೂರಿನಲ್ಲಿರುವ ಮಸೀದಿಯೊಳಗೆ ಬಂದು ಕೂತು, ಆಕ್ಷೇಪಾರ್ಹ ಪದಗಳನ್ನು ಉಲ್ಲೇಖಿಸಿದ್ದಕ್ಕಾಗಿ ಈತನನ್ನು ಬಂಧಿಸಿರುವುದಾಗಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

“ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮರಕಡ ಗ್ರಾಮದ ಮಿಲ್ಲತ್ ನಗರ ಮಸೀದಿಗೆ ಮಧ್ಯಾಹ್ನ ಒಂದು ಗಂಟೆಯ ಸುಮಾರಿಗೆ ಒಳ ಪ್ರವೇಶಿಸಿದ್ದಾನೆ. ಈ ವೇಳೆ ಮಸೀದಿಯಲ್ಲಿದ್ದರು ಆತನ ವಿಡಿಯೋವನ್ನು ಮಾಡಿಕೊಂಡಿದ್ದಾರೆ. ಕುಡಿದ ಸ್ಥಿತಿಯಲ್ಲಿದ್ದ ಯುವಕ, ಅಸಭ್ಯವಾಗಿ ಮಾತನಾಡಿದ್ದಾನೆ. ಆಕ್ಷೇಪಾರ್ಹ ಪದಗಳನ್ನು ಉಲ್ಲೇಖಿಸಿದ್ದಾರೆ ಎಂದು ಮಸೀದಿಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಹೀಗಾಗಿ, ಆತನನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ” ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ವಿಜಯನಗರ | ಹಂಪಿ‌ ವಿರೂಪಾಕ್ಷ ದೇವಸ್ಥಾನದಲ್ಲಿ ತುಂಡುಡುಗೆಗೆ ನಿಷೇಧ; ಭಕ್ತಿ ಭಾವ ಮೂಡಿಸಲು ಈ ಕ್ರಮ ಎಂದ ಜಿಲ್ಲಾಧಿಕಾರಿ!

ಬಂಧಿತ ಯುವಕ ಹನುಮಂತ, ಮೂಲತಃ ಬಾಗಲಕೋಟೆಯವರಾಗಿದ್ದು, ಕೂಲಿ ಕೆಲಸಕ್ಕೆಂದು 20 ದಿನಗಳ ಹಿಂದೆ ಮಂಗಳೂರಿಗೆ ಬಂದಿದ್ದ ಎಂದು ಪ್ರಾಥಮಿಕ ತನಿಖೆಯ ವೇಳೆ ತಿಳಿದುಬಂದಿದೆ. ಅಸಭ್ಯ ವರ್ತನೆಯ ಹಿನ್ನೆಲೆಯಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಐಪಿಸಿ ಸೆಕ್ಷನ್ 447(ಅತಿಕ್ರಮ ಪ್ರವೇಶ), 295(ಧಾರ್ಮಿಕ ಭಾವನೆ ಅಪವಿತ್ರ), 295(A-ಧಾರ್ಮಿಕ ಅಪರಾಧ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...