ಮಂಗಳೂರು | ಯುವಕ ಆತ್ಮಹತ್ಯೆ; ಮಹಿಳಾ ಅಧಿಕಾರಿಯಿಂದ ಲೈಂಗಿಕ ದುರುಪಯೋಗ – ಆರೋಪ

Date:

ಸಿಐಎಸ್‌ಎಫ್ ಮಹಿಳಾ ಅಧಿಕಾರಿಯೊಬ್ಬರು ತನ್ನನ್ನು ಲೈಂಗಿಕ ಚಟುವಟಿಕೆಗೆ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಘಟನೆ ನಡೆದಿದೆ. ಮೃತನನ್ನು ಉತ್ತರ ಪ್ರದೇಶದ ಮೂಲದ ಅಭಿಷೇಕ್ ಸಿಂಗ್‌ ಎಂದು ಗುರುತಿಸಲಾಗಿದೆ. ಆತ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಶರಣಾಗುವುದಕ್ಕೂ ಮುನ್ನ ಅಭಿಷೇಕ್ ಸಿಂಗ್ ವಿಡಿಯೋ ಮಾಡಿ, ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ತನ್ನ ಸಾವಿಗೆ ಸಿಐಎಸ್ಎಫ್ ಸಹಾಯಕ ಕಮಾಂಡೆಂಟ್ ಮೋನಿಕಾ ಸಿಹಾಗ್ ಅವರೇ ಕಾರಣವೆಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೋನಿಕಾ ಅವರು ನನ್ನನ್ನು ಮದುವೆಯಾಗುವುದಾಗಿ ನಂಬಿಸಿದ್ದರು. ನನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದರು. ಆದರೆ, ಆಕೆಗೆ ಈಗಾಗಲೇ ಮದುವೆಯಾಗಿದ್ದು, ನನಗೆ ವಂಚಿಸಿದ್ದಾರೆ. ನನ್ನೊಂದಿಗೆ ವಿವಾಹೇತರ ಸಂಬಂಧ ಬಳೆಸಿ, ಮೋಸ ಮಾಡಿದ್ದಾರೆ” ಎಂದು ಅಭಿಷೇಕ್ ಆರೋಪಿಸಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...