ಮಂಗಳೂರು | ಸಾಲದ ಆಮಿಷವೊಡ್ಡಿ 200 ಕೋಟಿ ರೂ. ವಂಚನೆ ಆರೋಪ: ರೋಹನ್ ಸಲ್ಡಾನಾ ಬಂಧನ

Date:


ಕೋಟ್ಯಂತರ ರೂಪಾಯಿ ಸಾಲ ನೀಡುವ ಆಮಿಷ ಒಡ್ಡಿ 200 ಕೋಟಿ ರೂಪಾಯಿಗಿಂತಲೂ ಅಧಿಕ ಹಣವನ್ನು ವಂಚಿಸಿದ ಆರೋಪದ ಮೇಲೆ ನಟೋರಿಯಸ್ ವಂಚಕ ರೋಹನ್ ಸಲ್ಡಾನಾ(45) ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ಜಪ್ಪಿನಮೊಗರು ನಿವಾಸಿಯಾಗಿರುವ ಈತ ತನ್ನ ಐಷಾರಾಮಿ ಜೀವನಶೈಲಿಯನ್ನೇ ಬಂಡವಾಳವಾಗಿಸಿಕೊಂಡು ವಂಚನೆ ಎಸಗುತ್ತಿದ್ದ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಜುಲೈ 17ರಂದು ಆತನ ಬಂಗಲೆಯಲ್ಲಿಯೇ ಬಂಧಿಸಿದ್ದಾರೆ.

ಶ್ರೀಮಂತ ವ್ಯಕ್ತಿಗಳು ಮತ್ತು ಉದ್ಯಮಿಗಳನ್ನು ಟಾರ್ಗೆಟ್ ಮಾಡಿ, ತಾನೊಬ್ಬ ದೊಡ್ಡ ಉದ್ಯಮಿ ಎಂದು ಬಿಂಬಿಸಿಕೊಳ್ಳುತ್ತಿದ್ದ ರೋಹನ್, ದೊಡ್ಡ ಮೊತ್ತದ ಸಾಲ ಅಥವಾ ಭೂಮಿ ವ್ಯವಹಾರದ ಆಸೆ ತೋರಿಸುವ ಮೂಲಕ ಅವರನ್ನು ಸಂಪರ್ಕಿಸಿ, ನಂಬಿಕೆ ಗಳಿಸುತ್ತಿದ್ದ. 50 ಕೋಟಿಯಿಂದ 100 ಕೋಟಿ ರೂಪಾಯಿಗಳವರೆಗೆ ಸಾಲ ನೀಡುವ ಭರವಸೆ ನೀಡುತ್ತಿದ್ದ. ಆದರೆ, ಸ್ಟಾಂಪ್ ಡ್ಯೂಟಿ ಮತ್ತು ಕಮಿಷನ್ ಹೆಸರಿನಲ್ಲಿ 5-10 ಕೋಟಿ ರೂಪಾಯಿಗಳನ್ನು ವಸೂಲಿ ಮಾಡಿ, ನಂತರ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗುತ್ತಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೋಹನ್ ತನ್ನ ಐಷಾರಾಮಿ ಬಂಗಲೆಯಲ್ಲಿ ವಿದೇಶಿ ಯುವತಿಯರೊಂದಿಗೆ ಪಾರ್ಟಿಗಳನ್ನು ಆಯೋಜಿಸುತ್ತಿದ್ದ ಮತ್ತು ತನ್ನ ಮನೆಯಲ್ಲಿ ಗುಪ್ತ ಕೋಣೆಯೊಂದನ್ನು(ಹೈಡ್ ಔಟ್ ರೂಮ್) ನಿರ್ಮಿಸಿಕೊಂಡಿದ್ದ. ಅದು ಬೆಡ್‌ರೂಮ್‌ನ ಕಬೋರ್ಡ್‌ನ ಹಿಂದೆ ರಹಸ್ಯ ಬಾಗಿಲಿನ ಮೂಲಕ ಸಂಪರ್ಕವಾಗಿತ್ತು. ಈ ಕೋಣೆಯಲ್ಲಿ ಆತ ಪೊಲೀಸರಿಂದ ಅಥವಾ ವಂಚನೆಗೊಳಗಾದವರಿಂದ ತಪ್ಪಿಸಿಕೊಳ್ಳುತ್ತಿದ್ದ. ಆತನ ಮನೆಯಲ್ಲಿ ದುಬಾರಿ ವಿದೇಶಿ ಮದ್ಯ, ಲಕ್ಷಾಂತರ ರೂಪಾಯಿ ಮೌಲ್ಯದ ಗಿಡಗಳು ಮತ್ತು ಐಷಾರಾಮಿ ವಸ್ತುಗಳಿದ್ದವು. ಇವುಗಳ ಮೂಲಕ ಶ್ರೀಮಂತನೆಂದು ಬಿಂಬಿಸಿಕೊಂಡು ವಿಶ್ವಾಸ ಗಳಿಸುತ್ತಿದ್ದ.

ಇದನ್ನೂ ಓದಿದ್ದೀರಾ? ಗೋಕರ್ಣದ ಗುಹೆಯ ಬದುಕಿಗೆ ಮನಸೋತಳೇ ರಷ್ಯಾದ ನೀನಾ ಕುಟಿನಾ

ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮತ್ತು ಎಸಿಪಿ ರವೀಶ್ ನಾಯಕ್ ನೇತೃತ್ವದ ತಂಡ ಗುರುವಾರ ತಡರಾತ್ರಿ ದಾಳಿ ನಡೆಸಿ ಆತನನ್ನು ಬಂಧಿಸಿದೆ. ಈತನ ವಿರುದ್ಧ ಇಬ್ಬರು ಉದ್ಯಮಿಗಳ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಕೇವಲ ಮೂರು ತಿಂಗಳಲ್ಲಿ 45 ಕೋಟಿ ರೂಪಾಯಿಗಳ ವ್ಯವಹಾರ ನಡೆಸಿರುವುದು ಪತ್ತೆಯಾಗಿದೆ. ರೋಹನ್ ದೇಶದ ಪ್ರಮುಖ ನಗರಗಳಲ್ಲಿ ಏಜೆಂಟ್‌ಗಳ ಮೂಲಕ ಈ ವಂಚನೆ ಜಾಲವನ್ನು ನಡೆಸುತ್ತಿದ್ದ ಎಂಬುದನ್ನು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...