ಮಂಗಳೂರು | ಬಾಕಿ ಉಳಿಸಿದ ಕನಿಷ್ಟ ಕೂಲಿ ಪಾವತಿಗೆ ಆಗ್ರಹಿಸಿ ಬೀಡಿ ಡಿಪೊಗೆ ಮುತ್ತಿಗೆ

Date:

2018ರಿಂದ 2024ರ ವರೆಗಿನ ಬಾಕಿ ಉಳಿಸಿರುವ ಕನಿಷ್ಟ ವೇತನ, 2024ರಲ್ಲಿ ಹೆಚ್ಚಳಗೊಂಡಿರುವ ತುಟ್ಟಿಭತ್ಯೆ ಪಾವತಿಗೆ ಒತ್ತಾಯಿಸಿ ದ.ಕ ಮತ್ತು ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಶ್ರಯದಲ್ಲಿ ಟೆಲಿಫೋನ್ ಬೀಡಿ ಡಿಪೊಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

ಕುಪ್ಪೆಪದವು ಪ್ರದೇಶ ಬೀಡಿ ಕೆಲಸಗಾರರ ಸಂಘ, ಗುರುಪುರ, ಸುರತ್ಕಲ್ ಬೀಡಿ ಲೇಬರ್ ಯೂನಿಯನ್, ವಾಮಂಜೂರು ಪ್ರದೇಶ ಬೀಡಿ ಕೆಲಸಗಾರರ ಸಂಘ ಜಂಟಿಯಾಗಿ ಕೈಕಂಬದಲ್ಲಿರುವ ಬೆಳಿಗ್ಗೆ 10ಕ್ಕೆ ಆರಂಭಗೊಂಡ ಮುತ್ತಿಗೆ ಪ್ರತಿಭಟನೆ ಸುಮಾರು ಮೂರು ತಾಸು ಮುಂದುವರೆಯಿತು. ಐದುನೂರಕ್ಕೂ ಹೆಚ್ಚು ಮಹಿಳಾ ಬೀಡಿ ಕಾರ್ಮಿಕರು ಉರಿ ಬಿಸಿಲನ್ನೂ ಲೆಕ್ಕಿಸದೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

“2018ರಲ್ಲಿ ತ್ರಿಪಕ್ಷೀಯ ಮಾತುಕತೆಯ ಆಧಾರದಲ್ಲಿ ಸರ್ಕಾರ ನಲವತ್ತು ರೂಪಾಯಿ ಹೆಚ್ಚಿಸಿ ಕನಿಷ್ಟ ಕೂಲಿ ನಿಗದಿಗೊಳಿಸಿ ಆದೇಶ ಹೊರಡಿಸಿತ್ತು. ಮಾಲೀಕರು ಈ ಆದೇಶವನ್ನು ಜಾರಿಗೊಳಿಸದೆ ಕಾರ್ಮಿಕರನ್ನು ವಂಚಿಸುತ್ತ ಬಂದಿದ್ದಾರೆ. ಆ ತರುವಾಯ 2024ರಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾಲೀಕರ ಪರವಾಗಿ ಹಿಮ್ಮುಖವಾಗಿ ನಿಗದಿಗೊಳಿಸಿ ಕನಿಷ್ಟ ಕೂಲಿ ಕಡಿತಗೊಳಿಸಿ ಏಕಪಕ್ಷೀಯಾಗಿ ಆದೇಶ ಹೊರಡಿಸಲಾಯಿತು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾಲೀಕರ ಪರವಾಗಿ ಹಿಮ್ಮುಖವಾಗಿ ಹೊರಡಿಸಲಾದ ಆದೇಶವನ್ನೂ ಜಾರಿಗೊಳಿಸದೆ ಬೀಡಿ ಮಾಲೀಕರು ಕಾರ್ಮಿಕರ ಬಾಕಿ ವೇತನ ಪಾವತಿಸದಿರುವುದನ್ನು ವಿರೋಧಿಸಿ ವಾಮಂಜೂರಿನ ಬೀಡಿ ಸಂಘಗಳು ಹೋರಾಟವನ್ನು ತೀವ್ರಗೊಳಿಸಿದ್ದು, ಜಿಲ್ಲಾದ್ಯಂತ ಮಾಲೀಕರ ಡಿಪೊಗಳ ಮುಂಭಾಗ ಸರಣಿಯಾಗಿ ಪ್ರತಿಭಟನೆ ಮತ್ತು ಮುತ್ತಿಗೆಯಂತಹ ಹೋರಾಟಗಳನ್ನು ನಡೆಸುತ್ತಿವೆ. ಇಂದು ಕೈಕಂಬ, ಗುರುಪುರ, ವಾಮಂಜೂರು, ಕುಪ್ಪೆಪದವು ಪ್ರದೇಶದ ಬೀಡಿ ಕಾರ್ಮಿಕರ ಸಂಘಗಳು ಪ್ರತಿಭಟನೆ ನಡೆಸಿದವು.

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ವಿವಿಧ ಕಾರ್ಮಿಕ ಸಂಘಟನೆಗಳ ಪ್ರಮುಖರಾದ ವಸಂತ ಆಚಾರಿ, ಬಿ ಶೇಖರ್, ಮುನೀರ್ ಕಾಟಿಪಳ್ಳ, ಬಾಲಕೃಷ್ಣ ಶೆಟ್ಟಿ, ಸದಾಶಿವ ದಾಸ್, ಸೀತಾರಾಮ ಬೇರಿಂಜೆ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಬೀಡಿ ಕಾರ್ಮಿಕರ ಕೂಲಿ ಬಾಕಿ, ಸಿಐಟಿಯು ನಿಯೋಗದಿಂದ ಕಾರ್ಮಿಕ ಸಚಿವ ಸಂತೋಷ ಲಾಡ್ ಭೇಟಿ

ಸ್ಥಳೀಯ ಬೀಡಿ ವಾಮಂಜೂರರ ಸಂಘದ ಪದಾಧಿಕಾರಿಗಳಾದ ವಸಂತಿ ಕುಪ್ಪೆಪದವು, ನೋಣಯ್ಯ ಗೌಡ, ಯಶೋಧ ಮಳಲಿ, ಭವಾನಿ ವಾಮಂಜೂರು, ಹೊನ್ನಯ್ಯ ಅಮೀನ್ ವಾಮಂಜೂರು, ಕುಸುಮ ಕುಪ್ಪೆಪದವು, ವಾರಿಜ ಕುಪ್ಪೆಪದವು, ಅಶೋಕ ವಾಮಂಜೂರು ಸೇರಿದಂತೆ ಇತರರು ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದರು.

ನೋಣಯ್ಯ ಗೌಡ ಸ್ವಾಗತಿಸಿ, ವಸಂತಿ ಕುಪ್ಪೆಪದವು ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...