ಮಂಗಳೂರು | ತಂದೆ ಸೇದಿ ಎಸೆದ ಬೀಡಿ ನುಂಗಿ ಮಗು ಸಾವು

Date:

ತಂದೆ ಸೇದಿ ಬಿಸಾಕಿದ್ದ ಬೀಡಿಯ ತುಂಡನ್ನು ನುಂಗಿ ಹತ್ತು ತಿಂಗಳ ಮಗು ಸಾವನ್ನಪ್ಪಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.

ನಗರದ ಅಡ್ಯಾರ್‌ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು ಅನೀಶ್ ಕುಮಾರ್ ಮೃತಪಟ್ಟಿದೆ. ಶನಿವಾರ ಮಧ್ಯಾಹ್ನ ತಂದೆ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ಮಗು ನುಂಗಿ ಅಸ್ವಸ್ಥಗೊಂಡಿತ್ತು. ಕೂಡಲೇ ಮಗುವನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಇದನ್ನು ಓದೀದ್ದಿರಾ? ಮಂಗಳೂರು | ಜಿಲ್ಲೆಯಲ್ಲಿ ಕೆಲವರಿಂದ ಮಾತ್ರ ಶಾಂತಿ, ಸೌಹಾರ್ದತೆಗೆ ಧಕ್ಕೆ: ಜಯಕೃಷ್ಣ ಶೆಟ್ಟಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ಹೇಳಿದರೂ ಮತ್ತೆ ಬೀಡಿ ಸೇದಿ ಬಿಸಾಡಿದರ ಪರಿಣಾಮ ಮಗು ಪ್ರಾಣ ಕಳೆದುಕೊಂಡಿದೆ ಎಂದು ಮಗುವಿನ ತಾಯಿ ಲಕ್ಷ್ಮಿ ದೇವಿ ದೂರು ನೀಡಿದ್ದಾರೆ. ಈ ಸಂಬಂಧ ಮಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...