ಮಂಗಳೂರು | ಸಿಟಿ ಬಸ್ ಚಾಲಕನ ಸಮಯಪ್ರಜ್ಞೆ; ಉಳಿಯಿತು ಬೈಕ್ ಸವಾರನ‌ ಜೀವ!

Date:

ಮಂಗಳೂರಿನ ನಂತೂರು ಸಮೀಪ ನಿನ್ನೆ ಸಂಜೆ ನಡೆದ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ. ಕೆಪಿಟಿಯಿಂದ ನಂತೂರು ಕಡೆಗೆ ಸಾಗುತ್ತಿದ್ದ 15 ನಂಬರ್ ರಾಜಲಕ್ಷ್ಮಿ ಬಸ್ಸನ್ನು ಮುಂದೆ ಹೋಗುತ್ತಿದ್ದ ಬೈಕ್‌ ಸವಾರ ಓವರ್ ಟೇಕ್ ಮಾಡುವ ಭರದಲ್ಲಿ ರಸ್ತೆಯ ಮೇಲಿನ ಹೊಂಡಕ್ಕೆ ಸಿಕ್ಕಿ ಬಿದ್ದಿದೆ.

ಅಪಘಾತ ಸಂಭವಿಸಬಹುದಾದ ಪರಿಸ್ಥಿತಿಯಲ್ಲಿ ಬಸ್ ಚಾಲಕ ಸಮಯಪ್ರಜ್ಞೆ ಮೆರೆದಿದ್ದು, ತಕ್ಷಣ ಬ್ರೇಕ್ ಹಾಕಿದ ಪರಿಣಾಮ ಸ್ಕೂಟರ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋಗಳು ಮತ್ತು ವರದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸಿವೆ.

ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳ ಸ್ಥಿತಿಗೆ ಜನರು ಆಕ್ರೋಶ ಹೊರಹಾಕುತ್ತಿದ್ದು, “ಹೆಚ್ಚುವರಿ ಜೀವಗಳು ಹೋಗಬೇಕೇ ಮತ್ತಷ್ಟು ಎಚ್ಚರಿಕೆಗಾಗಿ?” ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣಗಳಲ್ಲಿ ಮುಗಿಲು ಮುಟ್ಟುತ್ತಿದೆ. “ರಸ್ತೆಗಳ ಗುಂಡಿಗಳನ್ನು ಮುಚ್ಚುವುದು ನಿಮ್ಮ ಕರ್ತವ್ಯವಲ್ಲವೇ? ಕೇವಲ ಅಧಿಕಾರದ ಆಸೆಗೆ ಹೊಟ್ಟೆ ತುಂಬಿಸಿಕೊಂಡರೆ ಸಾಕಾ? ಜನರ ಜೀವಕ್ಕೆ ಬೆಲೆ ಇಲ್ಲವೇ?” ಎಂಬ ತೀವ್ರವಾಗಿ ಪ್ರಶ್ನಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...