ಮಂಗಳೂರು | ದೋಷಯುಕ್ತ ಸ್ಕೂಟರ್ ಮಾರಾಟ; ಓಲಾ ಕಂಪೆನಿಗೆ ಭಾರೀ ದಂಡ ವಿಧಿಸಿದ ಗ್ರಾಹಕರ ನ್ಯಾಯಾಲಯ

Date:

ಮಂಗಳೂರಿನ ಸರ್ಕಾರಿ ಕಂಪೆನಿಯೊಂದರ ಉದ್ಯೋಗಿ ಖರೀದಿಸಿದ್ದ ಓಲಾ ಎಲೆಕ್ಟ್ರಿಕ್ ಸ್ಕೂಟರ್ ನಿರಂತರ ದೋಷ ತೋರಿದ ಹಿನ್ನೆಲೆಯಲ್ಲಿ, ಗ್ರಾಹಕರ ನ್ಯಾಯಾಲಯ ಓಲಾ ಎಲೆಕ್ಟ್ರಿಕ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಭಾರೀ ದಂಡ ವಿಧಿಸಿದೆ.

ಸರ್ಕಾರಿ ಉದ್ಯೋಗಿ ಉದಯ್ ಕುಮಾರ್ ಬಿ ಸಿ ಅವರು 1.17 ಲಕ್ಷ ರೂ ಪಾವತಿಸಿ ಓಲಾ ಸ್ಕೂಟರ್ ಖರೀದಿಸಿದ್ದರು. ಆದರೆ, ಖರೀದಿಸಿದ ಕೆಲವೇ ದಿನಗಳಲ್ಲಿ ಸ್ಕೂಟರ್ ರಸ್ತೆ ಮಧ್ಯದಲ್ಲಿ ಹಠಾತ್ತನೆ ನಿಲ್ಲುತ್ತಿತ್ತು. ಮೊದಲ ಬಾರಿಗೆ ದೂರು ದಾಖಲಿಸಿದಾಗ ಕಂಪೆನಿಯೇ ರಿಪೇರಿ ಮಾಡಿದರೂ, ಸಮಸ್ಯೆ ಮರುಕಳಿಸುತ್ತಲೇ ಇತ್ತು. ರಿಪೇರಿ ನೆಪದಲ್ಲಿ ಕಂಪೆನಿಯೇ ವಾಹನವನ್ನು ತನ್ನ ಬಳಿಯಲ್ಲಿಟ್ಟುಕೊಂಡರೂ ಶಾಶ್ವತ ಪರಿಹಾರ ನೀಡಲು ವಿಫಲವಾಯಿತು.

ಇದರಿಂದ ಬೇಸತ್ತ ಗ್ರಾಹಕರು ಕಾನೂನು ನೋಟಿಸ್‌ ನೀಡಿ ಬಳಿಕ ಗ್ರಾಹಕರ ಪರಿಹಾರ ಆಯೋಗವನ್ನು ಸಂಪರ್ಕಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯ, ಓಲಾ ಕಂಪೆನಿ ಸೇವಾನ್ಯೂನ್ಯತೆ ತೋರಿದೆ ಮತ್ತು ದೋಷಯುಕ್ತ ಉತ್ಪನ್ನ ಮಾರಾಟ ಮಾಡಿದೆ ಎಂದು ತೀರ್ಪು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಗಳೂರು | ಸಾಮಾಜಿಕ ಜವಾಬ್ದಾರಿ ಕವಿಗಳ ಆಶಯವಾಗಬೇಕು: ಬಹುಭಾಷಾ ಕವಿ ವಿಲ್ಸನ್ ಕಟೀಲ್

ಕಂಪೆನಿಯು 45 ದಿನಗಳಲ್ಲಿ ಸ್ಕೂಟರ್‌ನ್ನು ಸಂಚಾರ ಯೋಗ್ಯವಾಗಿ ರಿಪೇರಿ ಮಾಡಬೇಕು ಅದು ಸಾಧ್ಯವಾಗದಿದ್ದರೆ, 45 ದಿನಗಳಲ್ಲಿ ಶೇಕಡಾ 6ರಷ್ಟು ಬಡ್ಡಿಯೊಂದಿಗೆ 1.17 ಲಕ್ಷ ರೂ.ಗಳನ್ನು ಗ್ರಾಹಕರಿಗೆ ಮರುಪಾವತಿಸಬೇಕು. ಜೊತೆಗೆ, ಸೇವಾನ್ಯೂನ್ಯತೆಗೆ 10,000 ರೂ. ದಂಡ ಹಾಗೂ ಪ್ರಕರಣದ ವೆಚ್ಚವಾಗಿ 5,000 ರೂಗಳನ್ನು ಪಾವತಿಸಬೇಕು ಎಂದು ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...