ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ: ಪ್ರಮುಖ ಆರೋಪಿಯ ಬ್ಯಾಂಕ್ ಖಾತೆ ಸೀಜ್

Date:

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಓರ್ವನಾದ ಸೈಯದ್ ಯಾಸಿನ್ ಬ್ಯಾಂಕ್‌ ಖಾತೆಯನ್ನು ಸೀಜ್ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ

ಈ ಘಟನೆ ಸಂಬಂಧಿಸಿದಂತೆ ಇ.ಡಿ ಪಿಎಂಎಲ್‌ಎ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದೆ. 2022ರ ನ.19ರಂದು ಸಂಜೆ ಮಂಗಳೂರಿನ ಕಂಕನಾಡಿ ಸಮೀಪ ಸ್ಫೋಟ ಸಂಭವಿಸಿತ್ತು. ಕುಕ್ಕರ್ ಬಾಂಬ್‌ನ್ನು ಆಟೋ ರಿಕ್ಷಾದಲ್ಲಿ ಸಾಗಿಸುತ್ತಿದ್ದ ಆರೋಪಿ ಮಹಮ್ಮದ್ ಶಾರೀಕ್ ಗಂಭೀರವಾಗಿ ಗಾಯಗೊಂಡಿದ್ದ. ಆಟೋ ರಿಕ್ಷಾ ಚಾಲಕ ಕೂಡ ಈ ವೇಳೆ ಗಾಯಗೊಂಡಿದ್ದರು. ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಲಾಗಿತ್ತು.

ಇದನ್ನೂ ಓದಿ: ಧರ್ಮಸ್ಥಳ | ಸುಳ್ಳು ಹೇಳಿ ಸಿಕ್ಕಿಬಿದ್ದ ‘ಸುವರ್ಣ ನ್ಯೂಸ್‌’ ವರದಿಗಾರರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಭಯೋತ್ಪಾದಕರ ಗುರಿಯಾಗಿತ್ತು. ಆದರೆ ಅಲ್ಲಿಗೆ ಸಾಗಿಸುವ ಮೊದಲೇ ಬಾಂಬ್ ಸ್ಫೋಟಗೊಂಡಿತ್ತು. ಬಾಂಬ್ ಟೈಮರ್‌ನ್ನು 90 ನಿಮಿಷಗಳ ಬದಲಿಗೆ 9 ಸೆಕೆಂಡುಗಳಿಗೆ ಹೊಂದಿಸಿದ್ದು ಇದಕ್ಕೆ ಕಾರಣವಾಗಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿತ್ತು. ಇಡಿ ಕೂಡ ತನಿಖೆ ಆರಂಭಿಸಿತ್ತು. ಐಸಿಸ್‌ನ ಹ್ಯಾಂಡ್ಲರ್‌ಗಳಿಗೆ ಆನ್‌ಲೈನ್‌ನಲ್ಲಿ ಟೆಲಿಗ್ರಾಂ ಮೂಲಕ ತರಬೇತಿ ನೀಡಲಾಗುತ್ತಿತ್ತು. ಪ್ರಮುಖ ಆರೋಪಿ ಮಹಮದ್ ಶಾರೀಕ್ ಅಲಿಯಾಸ್ ಪ್ರೇಮ್ ರಾಜ್ ಇತರೆ ಆರೋಪಿಗಳಿಗೆ ಕ್ರಿಪ್ಟೋ ಕರೆನ್ಸಿ ಮೂಲಕ ಹಣ ವರ್ಗಾವಣೆ ಮಾಡುತ್ತಿದ್ದ.

ಇದನ್ನೂ ಓದಿ: ಧರ್ಮಸ್ಥಳ | ತಮ್ಮ ಮೇಲೆಯೇ ಹಲ್ಲೆಯಾಗಿದೆ ಎಂದು ಸುಳ್ಳು ವರದಿ: ಅಜಿತ್ ಹನುಮಕ್ಕನವರ್ ಸೇರಿ ‘ಸುವರ್ಣ ನ್ಯೂಸ್’ನ ಮೂವರ ವಿರುದ್ಧ ಎಫ್‌ಐಆರ್

ರೂ.2.68 ಲಕ್ಷ ಹಣವನ್ನು ಕ್ರಿಪ್ಟೋ ಕರೆನ್ಸಿ ಏಜೆಂಟ್‌ಗಳ ಮೂಲಕ ಶಾರೀಕ್ ತಲುಪಿಸಿದ್ದ. ಈ ಹಣದ ಮೂಲಕ ಆನ್ಲೈನ್‌ನಲ್ಲಿ ಐಇಡಿ ಬಾಂಬ್ ತಯಾರಿಕೆಗೆ ಬೇಕಾದ ಕಚ್ಚಾ ಸಾಮಾಗ್ರಿ ಖರೀದಿಸಲಾಗಿತ್ತು. ಕರ್ನಾಟಕದ ಮೈಸೂರು ಕೇರಳ ತಮಿಳುನಾಡಿನಲ್ಲೂ ಐಇಡಿ ಬಾಂಬ್ ಇಡಲು ಯೋಜನೆಯನ್ನು ರೂಪಿಸಲಾಗಿತ್ತು. ಪ್ರಮುಖ ಆರೋಪಿ ಮಾಜ್, ಮುನೀರ್ ಕ್ರಿಪ್ಟೋ ಕರೆನ್ಸಿಯನ್ನು ಏಜೆಂಟ್‌ರ ಮೂಲಕ ಮಹಮ್ಮದ್ ಶಾರೀಕ್‌ಗೆ ತಲುಪಿಸಿದ್ದ ಎಂದು ಜಾರಿ ನಿರ್ದೇಶನಲಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...