ಮಂಗಳೂರು | ರಹೀಂ ಅಂತಿಮ ಯಾತ್ರೆಯಲ್ಲಿ ಜನಸ್ತೋಮ; ಕೋಮು ಕೃತ್ಯದ ವಿರುದ್ಧ ಆಕ್ರೋಶ

Date:

ಮುಸ್ಲಿಂ ಯುವಕ ಅಬ್ದುಲ್ ರಹೀಂ ಅವರ ಬರ್ಬರವಾಗಿ ಹತ್ಯೆ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಆಕ್ರೋಶ ಭುಗಿಲೆದ್ದಿದೆ. ಮಂಗಳೂರು, ಬಂಟ್ವಾಳ, ಸುರತ್ಕಲ್‌ನಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಸುರತ್ಕಲ್‌ನಲ್ಲಿ ಬಸ್‌ಗೆ ಕಲ್ಲು ತೂರಾಟ ನಡೆಸಿರುವ ಘಟನೆ ವರದಿಯಾಗಿದೆ.

ಮಂಗಳವಾರ ಸಂಜೆ, ಬಂಟ್ವಾಳ ತಾಲೂಕಿನ ಇರಾ ಕೋಡಿ ಪ್ರದೇಶದಲ್ಲಿ ಅಬ್ದುಲ್ ರಹೀಂ ಅವರ ಮೃತದೇಹ ಪತ್ತೆಯಾಗಿತ್ತು. ಅವರನ್ನು ಕೋಮುವಾದಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅವರ ಹತ್ಯೆಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಬುಧವಾರ ರಹೀಂ ಅವರ ಮೃತದೇಹದ ಅಂತಿಮ ಯಾತ್ರೆ ನಡೆದಿದೆ. ಅಂತಿಮ ಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗಿಯಾಗಿದ್ದಾರೆ. ಮಂಗಳೂರಿನ ಬಿ.ಸಿ ರೋಡ್‌, ಫರಂಗಿಪೇಟೆಯಲ್ಲಿ ಅಘೋಷಿತ ಬಂದ್ ವಾತಾವರಣ ಸೃಷ್ಟಿಯಾಗಿದೆ. ಎಲ್ಲ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಳ್ಳಾಲ ತಾಲೂಕಿನ ಕುತ್ತಾರಿನಿಂದ ಮಂಗಳೂರಿನ ನಂತೂರು, ಪಡೀಲ್ ಅಡ್ಯಾರ್ ಅರ್ಕುಳ, ಫರಂಗಿಪೇಟೆ, ಬಿ.ಸಿ.ರೋಡ್ ಮಾರ್ಗವಾಗಿ ಅಂತಿಮ ಯಾತ್ರೆ ಸಾಗಿದೆ. ರಹೀಂ ಅವರ ನಿವಾಸ ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆಗಳು ನಡೆದಿವೆ.

ಇದೇ ವೇಳೆ, ನೂರಾರು ಜನರು ಬಿ.ಸಿ ರೋಡ್‌ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಕೋಮು ರಾಜಕಾರಣ ಮತ್ತು ಸರ್ಕಾರದ ವೈಫಲ್ಯಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...