ಮಂಗಳೂರು | ಜುಲೈ 27ರಂದು ದಕ ಜಿಲ್ಲಾ ಮಹಿಳಾ ಸಮ್ಮೇಳನ

Date:

ದೇಶದ ಪುರೋಗಾಮಿ ಮಹಿಳಾ ಚಳವಳಿಯಾದ ಜನವಾದಿ ಮಹಿಳಾ ಸಂಘಟನೆಯ 9ನೇ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನವು ಜುಲೈ 27ರಂದು ಮಂಗಳೂರು ನಗರದ ಬಲ್ಮಠದಲ್ಲಿರುವ ಬಿಷಪ್ ಜತ್ತನ್ನ ಸಭಾಂಗಣದಲ್ಲಿ ನಿರ್ಮಿಸಿರುವ ನಾಡೋಜ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯಲಿದೆ.

ಅಂದು ಬೆಳಿಗ್ಗೆ 10:00 ಗಂಟೆಗೆ ಸಮ್ಮೇಳನವನ್ನು ಲೇಖಕಿ, ಪ್ರಾಧ್ಯಾಪಕಿ ಡಾ‌. ಸಬಿತಾ ಬನ್ನಾಡಿ ಉದ್ಘಾಟಿಸಲಿದ್ದಾರೆ. ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಖ್ಯಾತ ರಂಗ ಕಲಾವಿದೆ ಗೀತಾ ಸುರತ್ಕಲ್ ಸ್ವಾಗತ ಭಾಷಣ ಮಾಡಲಿದ್ದಾರೆ.‌ ಬರಹಗಾರರು, ಚಿಂತಕರೂ ಆಗಿರುವ ಚಂದ್ರಕಲಾ ನಂದಾವರ, ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಕಾರ್ಯದರ್ಶಿ ದೇವಿ, ಉಪಾಧ್ಯಕ್ಷೆ ಕೆ ಎಸ್ ಲಕ್ಷ್ಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸ್ವಾಗತ ಸಮಿತಿ ಅಧ್ಯಕ್ಷರಾದ ಫ್ಲೇವಿ ಕ್ರಾಸ್ತಾ ಅತ್ತಾವರರವರು ವಹಿಸಲಿದ್ದಾರೆ. ಉದ್ಘಾಟನಾ ಗೋಷ್ಟಿಯ ತರುವಾಯ ಪ್ರತಿನಿಧಿ ಅಧಿವೇಶನ ಜರುಗಲಿದ್ದು, ಜಿಲ್ಲೆಯಲ್ಲಿ ಮಹಿಳೆಯರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು ಗಂಭೀರ ಚರ್ಚೆ ನಡೆದು, ಮುಂಬರುವ ದಿನಗಳಲ್ಲಿ ಕರಾವಳಿ ಜಿಲ್ಲೆಯಲ್ಲಿ ಬಲಿಷ್ಠವಾದ ಮಹಿಳಾ ಚಳವಳಿ ಕಟ್ಟಲು ನೂತನ‌ ನಾಯಕತ್ವವೂ ಕೂಡ ಈ ಸಮ್ಮೇಳನದಲ್ಲಿ ಹೊರಹೊಮ್ಮಲಿದೆ ಎಂದು JMS ಸಂಘಟನೆಯ ಪ್ರಕಟಣೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಗಳೂರು | ಸಾಹಿತ್ಯ ಕ್ಷೇತ್ರದಲ್ಲಿ ಫಗು ಹಳಕಟ್ಟಿಯವರ ಸಾಧನೆ ಅಪಾರ: ಪ್ರಭಾಕರ್‌ ನೀರ್ಮಾರ್ಗ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...