ಮಂಗಳೂರಿನ ಯುವತಿಗೆ ಕಿರುಕುಳ: ನಿರ್ವಾಹಕನನ್ನು ಸೇವೆಯಿಂದ ವಜಾ ಮಾಡಲು ಸಚಿವರ ಸೂಚನೆ

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುವ ವೇಳೆ ನಿದ್ದೆಯಲ್ಲಿದ್ದ ಯುವತಿಯ ಮೇಲೆ ಬಸ್ಸಿನ ಕಂಡಕ್ಟರ್ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿ ಕಂಡಕ್ಟರ್‌ ಪ್ರದೀಪ್ ಎಂಬಾತನನ್ನು ಸೇವೆಯಿಂದಲೇ ವಜಾ ಮಾಡುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಸೂಚನೆ ನೀಡಿದ್ದಾರೆ.

ಈ ಬಗ್ಗೆ ಗುರುವಾರ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಸಾರಿಗೆ ಸಚಿವರು, “ಈ ಘಟನೆಗೆ ಸಂಬಂಧಪಟ್ಟಂತೆ ಕೂಡಲೇ ವಿಚಾರಣಾ ಪ್ರಕ್ರಿಯೆ ಪ್ರಾರಂಭಿಸಿ, ತ್ವರಿತವಾಗಿ ವಿಚಾರಣೆ ಮುಗಿಸಿ, ಆ ನಿರ್ವಾಹಕನನ್ನು ಸೇವೆಯಿಂದಲೇ ವಜಾ ಮಾಡಲು ಕ್ರಮ ಕೈಗೊಳ್ಳಿ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಇಂದು ಮಂಗಳೂರು ವಿಭಾಗದ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ ಮಹಿಳಾ ಪ್ರಯಾಣಿಕರೊಡನೆ ಅತ್ಯಂತ ಕೆಟ್ಟದಾಗಿ ನಡೆದುಕೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾದ ವಿಡಿಯೋಗೆ ಸಂಬಂಧಪಟ್ಟಂತೆ, ಮೇಲ್ನೋಟಕ್ಕೆ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಈಗಾಗಲೇ ನಿರ್ವಾಹಕನನ್ನು ಅಮಾನತು ಮಾಡಿರುವುದು ಸರಿಯಷ್ಟೇ. ಬಸ್ಸಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬ ಹೆಣ್ಣು ಮಕ್ಕಳೊಡನೆ ಗೌರವದೊಂದಿಗೆ ನಡೆದುಕೊಳ್ಳುವುದು ನಮ್ಮ ಸಿಬ್ಬಂದಿಗಳ ಆದ್ಯ ಕರ್ತವ್ಯವಾಗಿರಬೇಕು. ಈ ರೀತಿಯ ಅಸಹ್ಯಕರ ನಡವಳಿಕೆ ಅಕ್ಷಮ್ಯ ಅಪರಾಧ” ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮಂಗಳೂರು | ಚಲಿಸುತ್ತಿದ್ದ ಬಸ್‌ನಲ್ಲಿ ಯುವತಿ ಮೇಲೆ ಕಂಡಕ್ಟರ್‌ನಿಂದ ಲೈಂಗಿಕ ದೌರ್ಜನ್ಯ

WhatsApp Image 2025 04 24 at 5.57.21 PM

“ಕೆ ಎಸ್ ಆರ್ ಟಿ ಸಿ ಬಸ್ಸುಗಳು ಹಾಗೂ ಚಾಲಕ ನಿರ್ವಾಹಕರ ಬಗ್ಗೆ ಸಾರ್ವಜನಿಕ ಪ್ರಯಾಣಿಕರು ಅತೀವ ನಂಬಿಕೆ ಮತ್ತು ಪ್ರೀತಿ ಹೊಂದಿದ್ದಾರೆ. ಕೆಲವೊಬ್ಬರು ಮಾಡುವ ಈ ರೀತಿಯ ಕೆಲಸಗಳು ಸಂಸ್ಥೆ ಹಾಗೂ ಸಿಬ್ಬಂದಿಗಳ ಗೌರವಕ್ಕೆ ಧಕ್ಕೆ ತರುವಂತಹದು. ಈ ಘಟನೆಗೆ ಸಂಬಂಧಪಟ್ಟಂತೆ ಕೂಡಲೇ ವಿಚಾರಣಾ ಪ್ರಕ್ರಿಯೆ ಪ್ರಾರಂಭಿಸಿ, ತ್ವರಿತವಾಗಿ ವಿಚಾರಣೆ ಮುಗಿಸಿ, ಆ ನಿರ್ವಾಹಕನನ್ನು ಸೇವೆಯಿಂದಲೇ ವಜಾ ಮಾಡಲು ಕ್ರಮಕೈಗೊಳ್ಳುವಂತೆ ಸೂಚಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಏನಿದು ಘಟನೆ?

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುವ ವೇಳೆ ನಿದ್ದೆಯಲ್ಲಿದ್ದ ಯುವತಿಯ ಮೇಲೆ ಬಸ್‌ನ ಕಂಡಕ್ಟರ್ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಘಟನೆಯ ವಿಡಿಯೋ ಹೊರ ಬಂದ ಬಳಿಕ ಬೆಳಕಿಗೆ ಬಂದಿದೆ.

ಮಂಗಳೂರು ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಕಂಡಕ್ಟರ್‌ನನ್ನು ಬಾಗಲಕೋಟೆ ಮೂಲದ ಪ್ರದೀಪ್ ಎಂದು ಗುರುತಿಸಲಾಗಿದೆ.

ಬುಧವಾರ, ಮಂಗಳೂರಿನಿಂದ ಮುಡಿಪು ಮಾರ್ಗದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ನಗರ ಸಾರಿಗೆಯಲ್ಲಿ ಕಂಡಕ್ಟರ್‌ ಕೃತ್ಯ ಎಸಗಿದ್ದಾನೆ. ಆತನ ಕೃತ್ಯವನ್ನು ಸಹ ಪ್ರಯಾಣಿಕರೊಬ್ಬರು ವಿಡಿಯೋ ಮಾಡಿದ್ದಾರೆ. ವಿಡಿಯೋದಲ್ಲಿ ಆರೋಪಿ ಕಂಡಕ್ಟರ್‌ ಎಸಗಿರುವ ದುಷ್ಕೃತ್ಯ ಸೆರೆಯಾಗಿದೆ. ವಿಡಿಯೋ ಬೆಳಕಿಗೆ ಬಂದ ಕೂಡಲೇ, ಕೊಣಾಜೆ ಪೊಲೀಸ್‌ ಠಾಣೆಯ ಪೊಲೀಸರು ಬಿಎಸ್‌ಎನ್‌ ಸೆಕ್ಷನ್‌ 74, 75 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...