ಮಂಗಳೂರು | ಗುಡ್ಡ ಜರಿದು 8 ಮನೆಗಳಿಗೆ ಹಾನಿ; ಎರಡು ಆಟೋ, ಕಾರು ಜಖಂ

Date:

ಕರಾವಳಿ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮಂಗಳೂರು ನಗರ ಹೊರವಲಯದ ಬಜೈ ಪಟ್ಟಣ ಪಂಚಾಯತ್ ವ್ಯಾಪ್ತಿಯ ಶಾಂತಿಗುಡ್ಡೆ ಕೊಂಚಾ‌ರ್ ಬಳಿ ಎಂಎಸ್‌ಇಝಡ್ ನಿರ್ಮಿಸಿದ ಕಾಲೋನಿಯಲ್ಲಿ ಗುಡ್ಡ ಜರಿದು 8 ಮನೆಗಳಿಗೆ ಹಾನಿಯಾಗಿ ಎರಡು ರಿಕ್ಷಾ ಮತ್ತು ಒಂದು ಕಾರು ಸಂಪೂರ್ಣವಾಗಿ ಮಣ್ಣಿನಡಿಯಲ್ಲಿ ಹೂತುಹೋಗಿದೆ.

ಈ ವೇಳೆ ಮನೆಯಲ್ಲಿ ಇದ್ದ ನಿವಾಸಿಗಳು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ.  ಈ ಸಂದರ್ಭದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಬಜೈ ನಾಗರಿಕರ ಹಿತರಕ್ಷಣಾ ವೇದಿಕೆ ಪದಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಈ ಘಟನೆಗೆ ಅವೈಜ್ಞಾನಿಕ ರೀತಿಯಲ್ಲಿ ಕಾಲೋನಿ ನಿರ್ಮಿಸಿರುವ ಎಂಎಸ್‌ಇಝಡ್ ನೇರ ಕಾರಣ ಎಂದು ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿರಂತರ ಮಳೆಯಿಂದಾಗಿ ಕಾಲೋನಿಯ ಜನರು ಆತಂಕದದಿಂದಲೇ ದಿನ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಲೇಔಟ್ ಮಾಡುವಾಗ ಯಾವುದೇ ಸುರಕ್ಷತಾ ಕ್ರಮ ಅನುಸರಿಸದೆ ಕೆಲಸ ಮಾಡಿದ್ದರೀಂದ ಈ ಅನಾಹುತ ನಡೆದಿದೆ ಎಂದು ಬಜೆ ನಾಗರಿಕರ ಹಿತರಕ್ಷಣಾ ವೇದಿಕೆಯ ಸಂಚಾಲಕ ಸಿರಾಜ್ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು | ಸಾಹಿತ್ಯ ಕ್ಷೇತ್ರದಲ್ಲಿ ಫಗು ಹಳಕಟ್ಟಿಯವರ ಸಾಧನೆ ಅಪಾರ: ಪ್ರಭಾಕರ್‌ ನೀರ್ಮಾರ್ಗ

ಈ ಸಂದರ್ಭ ಬಜೈ ನಾಗರಿಕರ ಹಿತರಕ್ಷಣಾ ವೇದಿಕೆಯ ಸಹ ಸಂಚಾಲಕರಾದ ಇಸ್ಮಾಯಿಲ್ ಇಂಜಿನಿಯರ್, ಸಾಮಾಜಿಕ ಕಾರ್ಯಕರ್ತ ನಿಸಾರ್ ಕರಾವಳಿ, ವಸಂತ್,ಗ್ರಾ.ಪಂ. ಮಾಜಿ ಸದಸ್ಯರಾದ ನಝೀರ್, ನಾಗೇಶ್, ಅಫೀಝ್ ಕೊಳಂಬೆ, ಅಝಲ್ ಮತ್ತು ಒಕ್ಕೂಟದ ಸದಸ್ಯರು ಮತ್ತು ನಾಗರಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...