ಮಂಗಳೂರು | ಕಾಡು ಪ್ರಾಣಿಗಳ ಬೇಟೆ; ಅರಣ್ಯ ಇಲಾಖೆಯ ಅಧಿಕಾರಿಗಳಿಂದ ದಾಳಿ

Date:

ಬೆಳ್ತಂಗಡಿ ತಾಲ್ಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ನಿವಾಸಿ ಜೋಸ್ಸಿ ಅಲ್ವಿನ್ ಲೋಬೋ ಅವರ ಮನೆಗೆ ಮೇಲೆ ಜು. 12ರಂದು ತಡರಾತ್ರಿ ಬೆಳ್ತಂಗಡಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ದಾಳಿ ನಡೆಸಿ ಕಾಡು ಪ್ರಾಣಿಯ 17 ಕೆಜಿ ಮಾಂಸ ಮತ್ತು ಬೇಟೆಗೆ ಬಳಸಿದ ಕೋವಿ ಸೇರಿದಂತೆ ಇತ್ಯಾದಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾಡು ಪ್ರಾಣಿಯನ್ನು ಭೇಟೆಯಾಡಿ ಮಾಂಸ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿ ಕಾರಿನಲ್ಲಿ ಸಾಗಿಸುವ ವೇಳೆ ಖಚಿತ ಮಾಹಿತಿ ಮೇರೆಗೆ ಇಲಾಖೆಯ ಸಿಬ್ಬಂದಿಗಳು ದಾಳಿ ನಡೆಸಿದ್ದರು. ಕುಲಾಯಿ ಮೇಗಿನ ಮನೆ ನಿವಾಸಿ ಶರತ್ ಶೆಟ್ಟಿಗೆ ಸೇರಿದ ಬಿಳಿ ಬಣ್ಣದ ಕಾರು, ಒಂದು ಸಿಂಗಲ್ ಬ್ಯಾರಲ್ ಕೋವಿ, ಮೂರು ಕಾಟ್ರಿಜ್, ಕತ್ತಿಯನ್ನು ದಾಳಿ ವೇಳೆ ವಶಪಡಿಸಿಕೊಂಡಿದ್ದಾರೆ.

ದಾಳಿ ವೇಳೆ ಸಿಕ್ಕ ಮಾಂಸವನ್ನು ಯಾವ ಪ್ರಾಣಿಯದ್ದು, ಎಂದು ತಿಳಿಯಲು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯಲ್ಲಿ ಆರೋಪಿಗಳಾದ ಜೋಸ್ಸಿ ಅಲ್ವಿನ್ ಲೋಬೋ ಮತ್ತು ಶರತ್ ಶೆಟ್ಟಿ ವಿರುದ್ಧ ವನ್ಯಜೀವಿ ಅಪರಾಧ ಪ್ರಕರಣ ದಾಖಲಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಪುತ್ತೂರು-ಮಂಗಳೂರು ತಡೆರಹಿತ ಬಸ್‍ಗೆ ಶಾಸಕ ಅಶೋಕ್ ಕುಮಾರ್ ಚಾಲನೆ

ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್‌ ಟಿ.ಎನ್., ಡಿಆರ್‌ಎಫ್‌ಒ ಸಂದೀಪ್, ರಾಘವೇಂದ್ರ, ಕಿರಣ್ ಪಾಟೀಲ್, ಕಮಲಾ, ಬೀಟ್ ಫಾರೆಸ್ಟರ್ ಪರಶುರಾಮ ಮೇಟಿ, ಚಾಲಕ ದಿವಾಕರ ತಂಡದಲ್ಲಿದ್ದರು.

20ಕ್ಕೂ ಹೆಚ್ಚು ಸದ್ಯಸರಿಂದ ಬೇಟೆ?

ಕಾಡುಪ್ರಾಣಿ ಬೇಟೆ ತಂಡದಲ್ಲಿ ಬೆಳ್ತಂಗಡಿ ತಾಲ್ಲೂಕಿನ 20ಕ್ಕೂ ಹೆಚ್ಚು ಸದಸ್ಯರು ಇದ್ದರು ಎನ್ನುವ ಮಾಹಿತಿ ಇದೆ. ಈ ತಂಡದಲ್ಲಿ ಇದ್ದ ಕೆಲವರ ಪೈಕಿ ಪರವಾನಿಗೆ ಇರುವ ಕೋವಿಯಿದ್ದರೆ ಇನ್ನೂ ಕೆಲವರು ಅಕ್ರಮ ಕೋವಿ ಹೊಂದಿದರು. ಈ ಒಂದು ತಿಂಗಳಲ್ಲಿ 30ಕ್ಕೂ ಹೆಚ್ಚು ಕಾಡುಪ್ರಾಣಿಗಳನ್ನು ಬೇಟೆಯಾಡಿದ್ದಾರೆ ಎಂದು ಈ ಬೇಟೆಗಾರರ ಸದಸ್ಯನೊಬ್ಬ ಮಾಹಿತಿ ನೀಡಿದ್ದಾನೆ. ಹಗಲು ಹೊತ್ತಲ್ಲೇ ಹೆಚ್ಚಾಗಿ ಈ ತಂಡ ಬೇಟೆಯಲ್ಲಿ ನಿರತರಾಗುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...