ಮಂಗಳೂರು | ಸಂಘಪರಿವಾರದ ನಿರೂಪಣೆಯನ್ನು ಕಾಂಗ್ರೆಸ್‌ ನಾಯಕರು ಪಾಲಿಸುತ್ತಿರುವುದು ದುರದೃಷ್ಟಕರ: ಲಬೀದ್ ಶಾಫಿ

Date:

“ಮಂಗಳೂರು ನಗರದ ಕುಡುಪು ಎಂಬಲ್ಲಿ ಮುಸ್ಲಿಂ ಯುವಕನೋರ್ವನನ್ನು ಗುಂಪೊಂದು ಮನಬಂದಂತೆ ಥಳಿಸಿ, ಹತ್ಯೆಗೈದಿದೆ. ಅಲ್ಲದೇ, ಘಟನೆಗೆ ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದು ಎಂಬ ಕಥೆ ಸೃಷ್ಟಿಸಲಾಗಿದೆ. ಮುಸ್ಲಿಮರ ಮೇಲೆ ನಡೆಯುವ ಇಂತಹ ಕೃತ್ಯಗಳನ್ನು ನಾರ್ಮಲೈಝ್ ಮಾಡಲಾಗುತ್ತಿದೆ. ಸಂಘಪರಿವಾರ ಹುಟ್ಟುಹಾಕುವ ಇಂತಹ ನಿರೂಪಣೆಯನ್ನೇ ಕಾಂಗ್ರೆಸ್ ನಾಯಕರು ಚಾಚೂ ತಪ್ಪದೆ ಪಾಲಿಸುತ್ತಿರುವುದು ದುರದೃಷ್ಟಕರ” ಎಂದು ಸೋಲಿಡಾರಿಟಿ ಯೂತ್‌ ಮೂಮೆಂಟ್‌ನ ಕರ್ನಾಟಕ ರಾಜ್ಯ ಮುಖಂಡ ಲಬೀದ್ ಶಾಫಿ ಕಿಡಿಕಾರಿದ್ದಾರೆ.

ಈ ಬಗ್ಗೆ ಪೋಸ್ಟ್ ಹಾಕಿರುವ ಅವರು, “ಮಂಗಳೂರಿನ ಕುಡುಪು ಎಂಬಲ್ಲಿ ಅಶ್ರಫ್ ಎಂಬ ವಲಸೆ ಕಾರ್ಮಿಕನ ಗುಂಪು ಹತ್ಯೆ ನಿರ್ಜನ ಪ್ರದೇಶದಲ್ಲಿ ನಡೆದಿಲ್ಲ, ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿರುವ ಜನ ನಿಬಿಡ ಪ್ರದೇಶದಲ್ಲಿ ನಡೆದಿದೆ. ಸುಮಾರು 30 ಜನ ಸೇರಿ ಆ ಅಮಾಯಕ ಜೀವವನ್ನು ಥಳಿಸಿ ಕೊಂದು ಹಾಕಿದ್ದಾರೆ. ಎರಡು ತಾಸುಗಳ ವರೆಗೆ ಮೃತಶರೀರವು ಹಾಗೆಯೇ ಬಿದ್ದಿತ್ತು. ಆ ಪ್ರದೇಶದಲ್ಲಿ ನೂರಾರು ಜನರು ಇದ್ದರೂ ಯಾರಿಂದಲೂ ಹತ್ಯೆಯನ್ನು ತಡೆಯಲು ಸಾಧ್ಯವಾಗಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಮೊದಲು ಈ ಗುಂಪು ಹತ್ಯೆ ಪ್ರಕರಣವನ್ನು ಮುಚ್ಚು ಹಾಕುವಂತಹ ಪ್ರಯತ್ನ ನಡೆದಿದೆ. ಗುಂಪು ಹತ್ಯೆ ಮಾಡಿರುವ ಅದೇ ಗುಂಪಿನ ಪ್ರಧಾನ ವ್ಯಕ್ತಿಯಿಂದಲೆ ಪ್ರಥಮವಾಗಿ ಪೊಲೀಸ್ ಇಲಾಖೆ ದೂರು ಬರೆಸಿಕೊಂಡದ್ದು, ದುರ್ಬಲವಾದ ಯುಡಿಆರ್, ಗೊಂದಲದ ಲುಕ್ ಔಟ್ ಪ್ರಕಟನೆ ಹೊರಡಿಸಿದ್ದು, 36 ಗಂಟೆಗಳ ಕಾಲ ಪೊಲೀಸ್ ಕಮಿಷನರ್ ಮಾಧ್ಯಮದವರಿಗೆ ಮಾಹಿತಿ ನೀಡದೆ ಮೌನ ವಹಿಸಿದ್ದು, ಎರಡನೇ ದಿನ ಸಾರ್ವಜನಿಕರು ಬಲವಾಗಿ ಪ್ರಶ್ನಿಸತೊಡಗಿದ ತರುವಾಯ ಪೋಸ್ಟ್ ಮಾರ್ಟಂ ಮಾಡಿಸಿದ್ದು, ಎಫ್ಐಆರ್ ದಾಖಲು ಮಾಡಲು 32 ತಾಸು ತೆಗೆದಿರುವುದು ಇವೆಲ್ಲವೂ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ ಎಂಬ ಅನುಮಾನವನ್ನು ಗಟ್ಟಿಗೊಳಿಸುತ್ತದೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಸ್ಲಿಮರ ಮೇಲೆ ನಡೆಯುವ ಇಂತಹ ಕೃತ್ಯಗಳನ್ನು ನಾರ್ಮಲೈಝ್ ಮಾಡಲಾಗುತ್ತಿದೆ. ದುರದೃಷ್ಟದ ಸಂಗತಿ ಏನೆಂದರೆ, ಸಂಘಪರಿವಾರ ಹುಟ್ಟುಹಾಕಿರುವ ಈ ನೆರೇಟಿವ್ ಅನ್ನು ಕಾಂಗ್ರೆಸ್ ನಾಯಕರು ಚಾಚು ತಪ್ಪದೆ ಪಾಲಿಸುತ್ತಿರುವುದು. ಮುಸ್ಲಿಮ್ ಎಂಬ ಕಾರಣಕ್ಕೆ ಹೊಡೆದು ಸಾಯಿಸಿ ತದನಂತರ ದನದ ಮಾಂಸ ಮಾರಾಟ ಮಾಡುತ್ತಿದ್ದ, ಪಾಕಿಸ್ತಾನ್ ಜಿಂದಾಬಾದ್ ಹೇಳಿದ ಎಂದು ಆರೋಪಿಸಿದರೆ ಸಾಕು ಕ್ಷಣ ಮಾತ್ರದಲ್ಲಿ ಎಲ್ಲ ಕೃತ್ಯಗಳು ಜಸ್ಟಿಫೈ ಆಗಿ ಬಿಡುತ್ತದೆ. ಇಲ್ಲಿ ಈ ಗೂಂಡಾಗಳಿಗೆ ಗೃಹ ಸಚಿವರು ಲೈಸೆನ್ಸ್ ನೀಡುತ್ತಿರುವುದು ದುರಂತ ಎಂದು ಗೃಹ ಸಚಿವ ಪರಮೇಶ್ವರ್ ಅವರ ಹೇಳಿಕೆಯನ್ನು ಲಬೀದ್ ಶಾಫಿ ಖಂಡಿಸಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು ಗುಂಪು ಹತ್ಯೆ | ಮೃತಪಟ್ಟ ಅಶ್ರಫ್‌ ಅಂತ್ಯಸಂಸ್ಕಾರ; ಮಗನ ಮೃತದೇಹ ಕಂಡು ಕಣ್ಣೀರಿಟ್ಟ ತಾಯಿ ರುಕಿಯಾ

ಸಂಘ ಪರಿವಾರದ ಅಜೆಂಡಾದ ಜೊತೆಗೆ ಹೆಜ್ಜೆ ಹಾಕುವುದನ್ನು ರಾಜ್ಯ ಸರಕಾರವು ನಿಲ್ಲಿಸಬೇಕು. ಪಹಲ್ಗಾಮ್ ದಾಳಿಯ ನಂತರ ಭಾರತದಾದ್ಯಂತ ಮುಸ್ಲಿಮ್ ವಿರೋಧಿ ದ್ವೇಷ ಅಭಿಯಾನಗಳು ಮತ್ತು ಹಿಂಸಾಚಾರವು ನಿರಂತರವಾಗಿ ನಡೆಯುತ್ತಿದೆ. ಈ ಸಾಲಿನಲ್ಲಿ ಈಗ ಕರ್ನಾಟಕವೂ ಸೇರಿಕೊಂಡಿದೆ. ಪತ್ರಿಕೋದ್ಯಮದ ಹೆಸರಿನಲ್ಲಿ ದ್ವೇಷ ಬಿತ್ತುವ ಮಾಧ್ಯಮಗಳ ಹಾಗೂ ದ್ವೇಷ ಭಾಷಣ ಮಾಡುವ ಕೋಮುವಾದಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡಿದ್ದರೆ ಇಂದು ಅಮಾಯಕ, ಕೇರಳದ ಯುವಕ ಮುಹಮ್ಮದ್ ಅಶ್ರಫ್‌ನ ಜೀವವು ಉಳಿಯುತ್ತಿತ್ತು ಎಂದು ಸೋಲಿಡಾರಿಟಿ ಯೂತ್‌ ಮೂಮೆಂಟ್‌ನ ಕರ್ನಾಟಕದ ಮಾಜಿ ರಾಜ್ಯಾಧ್ಯಕ್ಷ ಲಬೀದ್ ಶಾಫಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...