ಮಂಗಳೂರು | ಸುಹಾಸ್‌ ಶೆಟ್ಟಿಯನ್ನು ರೌಡಿಶೀಟರ್‌ ಮಾಡಿದ್ದು ಬಿಜೆಪಿಯವರೇ: ವಿಪ ಸದಸ್ಯ ಮಂಜುನಾಥ್ ಭಂಡಾರಿ

Date:

ಮಂಗಳೂರಿನಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿಯನ್ನು ಹಿಂದೂ ನಾಯಕ ಎಂದು ವೈಭವೀಕರಿಸುತ್ತಿರುವ ಬಿಜೆಪಿಯವರು, ಅಧಿಕಾರದಲ್ಲಿದ್ದಾಗ ಸುಹಾಸ್ ಮೇಲೆ ರೌಡಿಶೀಟರ್ ತೆರೆದಿದ್ದೇ ಅವರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಸುಹಾಸ್ ಶೆಟ್ಟಿ ಹಿಂದೂ ನಾಯಕನಾಗಿದ್ದರೆ ಆತನ ಮೇಲೆ ರೌಡಿಶೀಟರ್ ತೆರೆಯಲು ಬಿಜೆಪಿ ಸರ್ಕಾರ ಅವಕಾಶ ಕೊಟ್ಟಿದ್ಯಾಕೆ ಎಂದು ಪ್ರಶ್ನಿಸಿದರು. ಬಿಜೆಪಿ ಸರ್ಕಾರವೇ ರೌಡಿಶೀಟರ್ ತೆರೆದು ಈಗ ಆತನಿಗೆ ಹಿಂದೂ ನಾಯಕನ ಪಟ್ಟ ಕಟ್ಟಿದ್ದಾರೆ. ಅಂದು ಹಿಂದೂ ಯುವಕನ ಮೇಲೆ ರೌಡಿಶೀಟರ್ ತೆರೆಯುವಾಗ ತುಟಿ ಬಿಚ್ಚದ ಶಾಸಕ ಹರೀಶ್‌ ಪೂಂಜಾ, ಈಗ ಹಿಂದೂ ನಾಯಕನ ಕೊಲೆ ಎಂದು ಪ್ರಕರಣವನ್ನು ವೈಭವೀಕರಣ ಮಾಡುವ ಕೆಟ್ಟ ರಾಜಕೀಯ ಮಾಡುತ್ತಿದ್ದಾರೆ” ಎಂದು ಗುಡುಗಿದರು.

“ಸುಹಾಸ್ ಶೆಟ್ಟಿ ಮೇಲೆ‌ ಐದು ಕ್ರಿಮಿನಲ್ ಪ್ರಕರಣಗಳಿವೆ. ಕೀರ್ತಿ ಎಂಬ ಹಿಂದೂ ಯುವಕನನ್ನು ಕೊಂದಿರುವ ಕೇಸ್ ಕೂಡ ಇದೆ. ಕೊಲೆಯಾದ ದಲಿತ ಯುವಕ ಹಿಂದೂ ಅಲ್ಲವೇ? ಹಿಂದೂಗಳನ್ನು ಕೊಂದವನನ್ನು ಹಿಂದೂ ಕಾರ್ಯಕರ್ತ ಎಂದು ವೈಭವೀಕರಿಸುವುದು ಸರಿಯಲ್ಲ. ಬಿಜೆಪಿಯವರು ಕೊಲೆಗಳಾಗುವುದನ್ನು ಕಾಯುತ್ತಿರುತ್ತಾರೆ. ಅಧಿಕಾರ ದಾಹಕ್ಕಾಗಿ ಕೋಮು ಗಲಾಟೆಗಳಿಗೆ ಪ್ರಚೋದನೆ ನೀಡುತ್ತಾರೆ. ಫರಂಗಿಪೇಟೆಯ ದಿಗಂತ್ ನಾಪತ್ತೆ ಪ್ರಕರಣಕ್ಕೆ ರಾಜಕೀಯ ಬಣ್ಣ ಬಳಿದು ದುರುದ್ದೇಶಕ್ಕೆ ಬಳಸಿಕೊಂಡಿದ್ದು ಇದೇ ಬಿಜೆಪಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಹಿಂದೂಸ್ಥಾನದಲ್ಲಿ ಹಿಂದೂಗಳಿಗೆ, ಹಿಂದೂ ಯುವಕರಿಗೆ ರಕ್ಷಣೆ ಇಲ್ಲʼ ಎಂದಿರುವ ಪೇಜಾವರ ಶ್ರೀಗಳಿಗೆ ತಿರುಗೇಟು ನೀಡಿದ ಮಂಜುನಾಥ್ ಭಂಡಾರಿ, ಹಿಂದೂಗಳ ರಕ್ಷಣೆ ಮಾಡುತ್ತೇವೆ ಎಂದು ಮೋದಿ‌ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಅವರ ಸರ್ಕಾರ ಇರುವಾಗ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದಾದರೆ ಶ್ರೀಗಳು ಮೋದಿಯವರ ರಾಜೀನಾಮೆ ಕೇಳಲಿ. ಪೇಜಾವರ ಶ್ರೀಗಳು ಮತ್ತೊಮ್ಮೆ ಭಗವದ್ಗೀತೆ ಓದಬೇಕು ಎಂದು ಮನವಿ ಮಾಡುತ್ತೇನೆ. ಕ್ಷುಲ್ಲಕ‌ ಹೇಳಿಕೆ ನೀಡುವುದು ಹಾಗೂ ರಾಜಕೀಯ ಮಾಡುವುದನ್ನು ಬಿಡಬೇಕು” ಎಂದರು.

ಇದನ್ನೂ ಓದಿ: ಮಂಗಳೂರು | ಮುಸ್ಲಿಂ ಯುವಕನ ಗುಂಪು ಹತ್ಯೆ: ಮತ್ತೆ ಐವರ ಬಂಧನ; ಮೃತದೇಹ ಕೇರಳಕ್ಕೆ ಕೊಂಡೊಯ್ದ ಕುಟುಂಬಸ್ಥರು

“ಕೊಲೆಗಳು ಖಂಡನೀಯ, ನಿಷ್ಪಕ್ಷಪಾತ ತನಿಖೆ ನಡೆದು ಮತೀಯ ಕೊಲೆಗಳ ಹಿಂದಿನ ಶಕ್ತಿಗಳನ್ನು ಗುರುತಿಸಿ ಶಿಕ್ಷಿಸಬೇಕು. ಯಾವ ಒತ್ತಡಕ್ಕೂ‌ ಮಣಿಯದೆ ಪೊಲೀಸರು ತನಿಖೆ ನಡೆಸಬೇಕು. ಕೊಲೆಗಳು ನಡೆದಾಗ ಯಾರೂ ಕೋಮು ಪ್ರಚೋದನೆ ಮಾಡಬಾರದು” ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ‌ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಪದ್ಮರಾಜ್ ಪೂಜಾರಿ, ಮಿಥುನ್ ರೈ, ರಕ್ಷಿತ್ ಶಿವರಾಂ, ಕೆಪಿಸಿಸಿ ಕಾರ್ಯದರ್ಶಿ ಜಿ.ಎ ಬಾವ, ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್, ಮಹಿಳಾ‌ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆನ್ ಪಿಂಟೋ, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...