ಮಂಗಳೂರಿನಲ್ಲಿ ಭೂಕುಸಿತ; ನಾಲ್ಕು ಮನೆಗಳಿಗೆ ಹಾನಿ

Date:

ಹಲವು ದಿನಗಳಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮಂಗಳೂರು ನಗರ ಸೇರಿದಂತೆ ಹಲವೆಡೆ ಭೂಕುಸಿತವಾಗಿದ್ದು, ಇದೀಗ ಕಣ್ಣೂರಿನಲ್ಲಿ ಮನೆಯ‌ ಮೇಲೆ ಗುಡ್ಡ ಕುಸಿದಿರುವ ಘಟನೆ ನಡೆದಿದೆ.

ಇದನ್ನೂ ಓದಿ: ಮಂಗಳೂರು | ತಂದೆ ಸೇದಿ ಎಸೆದ ಬೀಡಿ ನುಂಗಿ ಮಗು ಸಾವು

ಕಣ್ಣೂರಿನ ಎಸ್ ಎಚ್‌ ನಗರ ದಯಾಬು ಎಂಬಲ್ಲಿ‌ ಗುಡ್ಡ ಕುಸಿದು 4 ಮನೆಗಳಿಗೆ ಹಾನಿಯಾಗಿದ್ದು, ಮೈಮೂನಾ ಎಂಬವರ ಮನೆ‌ ಸಂಪೂರ್ಣ ಜಖಂಗೊಂಡಿದೆ. ಈ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಇನ್ನೂ ನಾಲ್ಕು ಮನೆಗಳು ಅಪಾಯದಲ್ಲಿದ್ದು, ಭಾರೀ ಮಳೆ ಬಂದರೆ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಾಯದಲ್ಲಿರುವ ಮನೆಗಳಲ್ಲಿ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ‌ ಸ್ಥಳಾಂತರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...