ಮಂಗಳೂರಿನ ವಿಮಾನದಲ್ಲಿ ಹೈಡ್ರೋಫೋನಿಕ್ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬ ಸಿಕ್ಕಿಬಿದ್ದಿದ್ದು, ಸಿಐಎಸ್ಎಫ್ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಶಂಕರ್ ನಾರಾಯಣ್ ಪೊದ್ದಾರ್ ಎಂದು ಗುರುತಿಸಲಾಗಿದೆ.
ಈತ ಸೋಮವಾರ ಸಂಜೆ 6:30ಕ್ಕೆ ಮುಂಬೈನಿಂದ ಮಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಹೈಡ್ರೋಫೋನಿಕ್ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆ ವಿಮಾನ ನಿಲ್ದಾಣ ಸಿಬ್ಬಂದಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಸಿಐಎಸ್ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಅದರಂತೆ ನಿನ್ನೆ ಸಂಜೆ ಇಂಡಿಗೋ ವಿಮಾನದಲ್ಲಿ ಬಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಳಿಯುತ್ತಿದ್ದಂತೆ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ಮಂಗಳೂರು | ಕುಪ್ಪೆಪದವು, ಇರುವೈಲು ಮಾರ್ಗದಲ್ಲಿ ಸರ್ಕಾರಿ ಬಸ್ ಸೇವೆಗೆ ಒತ್ತಾಯ
ಈ ವೇಳೆ ಶಂಕರ್ ನಾರಾಯಣ್ ಪೊದ್ದಾರ್‌ನ ಚೆಕ್ – ಇನ್ ಬ್ಯಾಗೇಜ್‌ನಲ್ಲಿ ಸುಮಾರು 512 ಗ್ರಾಂ ಹೈಡ್ರೋಫೋನಿಕ್ ಗಾಂಜಾ ಪತ್ತೆಯಾಗಿತ್ತು. ತಕ್ಷಣ ಬೆಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ರವಾನಿಸಿ, ಸಿಐಎಸ್ಎಫ್ ಸಿಬ್ಬಂದಿ ಪತ್ತೆಯಾದ ಗಾಂಜಾ ಸಹಿತ ಆರೋಪಿಯನ್ನು ಹೆಚ್ವಿನ ವಿಚಾರಣೆಗಾಗಿ ಬಜ್ಪೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.





