ಮಂಗಳೂರು ವಲಸೆ ಕಾರ್ಮಿಕನ ಹತ್ಯೆ ಘಟನೆ: ಮೃತಪಟ್ಟವನ ವಿವರ ಪತ್ತೆ

Date:

ಮಂಗಳೂರಿನ ಕುಡುಪು ಎಂಬಲ್ಲಿ ವಲಸೆ ಕಾರ್ಮಿಕನೋರ್ವನನ್ನು ಸುಮಾರು 30ಕ್ಕೂ ಅಧಿಕ ಮಂದಿಯ ಗುಂಪೊಂದು ಕೈಗೆ ಸಿಕ್ಕಿದ್ದನ್ನೆಲ್ಲ ಬಳಸಿಕೊಂಡು ಹತ್ಯೆ ಮಾಡಿದ್ದ ಘಟನೆಯಲ್ಲಿ ಮೃತಪಟ್ಟಿದ್ದ ವ್ಯಕ್ತಿಯ ವಿವರ ಕೊನೆಗೂ ಪತ್ತೆಯಾಗಿದೆ.

ಮೃತಪಟ್ಟ ವ್ಯಕ್ತಿಯ ಸುದ್ದಿ, ಫೋಟೋ ಹಾಗೂ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ ನಂತರ ಗುರುತು ಪತ್ತೆಯಾಗಿದ್ದು, ಮೃತಪಟ್ಟ ವಲಸೆ ಕಾರ್ಮಿಕ ಕೇರಳದ ವಯನಾಡ್ ಜಿಲ್ಲೆಯ ನಿವಾಸಿ ಎಂದು ಕೇರಳದ ‘ಮೀಡಿಯಾ ವನ್’ ಚಾನೆಲ್ ವರದಿ ಮಾಡಿದೆ.

WhatsApp Image 2025 04 29 at 8.40.38 PM

ಮೃತಪಟ್ಟ ವ್ಯಕ್ತಿಯನ್ನು ಕುಂಞಿದ್ದುಕ್ಕಾ ಎಂಬುವವರ ಪುತ್ರ ಅಶ್ರಫ್ ಪುಲ್ಪಲ್ಲಿ ಎಂದು ಗುರುತಿಸಲಾಗಿದೆ. ಈತ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿ ಗೆದ್ದಿದ್ದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಪುಲ್ಪಲ್ಲಿ ನಿವಾಸಿ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈದಿನ ಡಾಟ್ ಕಾಮ್ ಮೃತಪಟ್ಟ ವ್ಯಕ್ತಿಯ ಸಹೋದರ ಹಮೀದ್ ಎಂಬುವವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ್ದು, ‘ಫೋಟೋದಲ್ಲಿರುವ ವ್ಯಕ್ತಿ ನನ್ನ ಸಹೋದರ ಅಶ್ರಫ್’ ಎಂದು ಖಚಿತಪಡಿಸಿದ್ದಾರೆ.

“ಫೋಟೋ ನೋಡಿದಾಗ ನಮ್ಮ ಸಹೋದರ ಎಂದು ಗೊತ್ತಾಗಿದೆ. ಹೊಟೇಲ್‌ಗಳಲ್ಲಿ ಕಾರ್ಮಿಕರಾಗಿ ದುಡಿಯುವ ಹವ್ಯಾಸ ಇತ್ತು. ದುಡಿದು ಸಂಪಾದಿಸುವ ಹಣವನ್ನು ಹಲವರಿಗೆ ಹಂಚುವ ಹವ್ಯಾಸವಿತ್ತು. ಅವರಿಗೆ 38 ವರ್ಷ ವಯಸ್ಸು. ಕಳೆದ ಎರಡು ತಿಂಗಳ ಹಿಂದೆ ನಮ್ಮ ತಾಯಿಯನ್ನು ನೋಡಲೆಂದು ಊರಿಗೆ ಬಂದಿದ್ದರು. ಆ ಬಳಿಕ ಎಲ್ಲಿಗೆ ಹೋಗಿದ್ದರು ಎಂಬ ಮಾಹಿತಿ ಇರಲಿಲ್ಲ. ಮಂಗಳೂರಿನಲ್ಲಿ ಗುಂಪಿನಿಂದ ಹಲ್ಲೆಗೊಳಗಾಗಿ ಮೃತಪಟ್ಟ ಬಗ್ಗೆ ಸುದ್ದಿಯನ್ನು ಗಮನಿಸಿದಾಗ ನಮಗೆ ವಿಷಯ ಗೊತ್ತಾಗಿದೆ. ಈ ಬಗ್ಗೆ ಮಂಗಳೂರು ಪೊಲೀಸರನ್ನು ಸಂಪರ್ಕಿಸಿದ್ದೇವೆ. ಇವತ್ತು ರಾತ್ರಿಯೇ ಮೃತದೇಹವನ್ನು ನೋಡಿ ದೃಢೀಕರಿಸಲು ಮಂಗಳೂರಿಗೆ ನಮ್ಮ ಕುಟುಂಬದ ಸದಸ್ಯರು ಪ್ರಯಾಣ ಬೆಳೆಸುತ್ತಿದ್ದೇವೆ. ರಾತ್ರಿ 2 ಗಂಟೆ ಆಸುಪಾಸಿನಲ್ಲಿ ಮಂಗಳೂರಿಗೆ ತಲುಪಲಿದ್ದೇವೆ” ಎಂದು ಸಂತ್ರಸ್ತ ಯುವಕ ಅಶ್ರಫ್ ಅವರ ಸಹೋದರ ಹಮೀದ್ ಈದಿನ ಡಾಟ್ ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಆದರೆ, ಕುಡುಪು ಗುಂಪು ಹತ್ಯೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಮಂಗಳೂರು ಪೊಲೀಸರು ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ನೀಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...