ಮಂಗಳೂರು ಗುಂಪು ಹತ್ಯೆ | ಪಾಕ್ ಪರ ಘೋಷಣೆ ಕೂಗಿದ್ದಕ್ಕೆ ಯಾವುದೇ ಸಾಕ್ಷಿ ಸಿಕ್ಕಿಲ್ಲ: ಪೊಲೀಸ್ ಕಮಿಷನರ್

Date:

“ಮಂಗಳೂರಿನ ಕುಡುಪು ಬಳಿ ನಡೆದ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವ್ಯಕ್ತಿ ಪಾಕ್ ಪರ ಘೋಷಣೆ ಕೂಗಿದ್ದರ ಬಗ್ಗೆ ಯಾವುದೇ ಸಾಕ್ಷಿ ಸಿಕ್ಕಿಲ್ಲ. ಹಾಗಾಗಿ, ನಿರ್ದಿಷ್ಟ ಕಾರಣ ಗೊತ್ತಾಗಿಲ್ಲ” ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಕುಡುಪು ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ ತೋರಿದ ಮೂವರು ಪೋಲಿಸರನ್ನು ಅಮಾನತು ಮಾಡಲಾಗಿದೆ. ಸ್ಥಳೀಯ ಪೊಲೀಸರು ಮೊದಲು ಅಸಹಜ ಸಾವು ಎಂದು ಪ್ರಕರಣ ದಾಖಲು ಮಾಡಿದ್ದರು. ತನಿಖೆ ನಡೆಸಿದ ನಂತರ ಇದು ಕೊಲೆ ಎಂದು ಧೃಡಪಟ್ಟಿದೆ. ಮೂವರು ಪೋಲಿಸರನ್ನು ಕರ್ತವ್ಯದಲ್ಲಿ ಲೋಪದ ಆರೋಪದಡಿಯಲ್ಲಿ ಅಮಾನತು ಮಾಡಲಾಗಿದೆ” ಎಂದು ಮಾಹಿತಿ ನೀಡಿದರು.

ಕರ್ತವ್ಯಲೋಪದ ಮೇರೆಗೆ ಮಂಗಳೂರು ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ಶಿವಕುಮಾರ್ , ಹೆಡ್ ಕಾನ್ಸ್ ಟೇಬಲ್ ಚಂದ್ರ.ಪಿ , ಕಾನ್ಸಟೇಬಲ್ ಯಲ್ಲಾಲಿಂಗ ಮೂವರನ್ನು ಅಮಾನತು ಮಾಡಲಾಗಿದೆ. ಪ್ರಕರಣದ ಬಗ್ಗೆ ತನಿಖೆಯನ್ನು ಮುಂದುವರೆಸುತ್ತಿದ್ದೇವೆ. ಉತ್ತರ ಕನ್ನಡ ಜಿಲ್ಲೆಯ ಗೋಕಾಕ್‌ನಿಂದ ಒಬ್ಬ ಆರೋಪಿಯನ್ನು ಗುರುವಾರ ಬಂಧಿಸಿದ್ದೇವೆ. ಒಟ್ಟು ಈಗಾಗಲೇ 20 ಮಂದಿಯನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವರಿಗೆ ಹುಡುಕಾಟ ನಡೆಸುತ್ತಿದ್ದೇವೆ. ಘಟನಾ ಸ್ಥಳದಲ್ಲಿದ್ದ 15 ಜನರಿಗೆ ನೋಟಿಸ್ ಜಾರಿ ಮಾಡಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಂಪು ಹತ್ಯೆಗೆ ಏನು ಕಾರಣ ಎಂದು ಕಮಿಷನರ್‌ ಅವರಲ್ಲಿ ಪತ್ರಕರ್ತರು ಕೇಳಿದಾಗ, “ನಿರ್ದಿಷ್ಟ ಕಾರಣ ಸಿಕ್ಕಿಲ್ಲ. ಈ ಬಗ್ಗೆ ಕಣ್ಣಾರೆ ಕಂಡಿರುವ ಸಾಕ್ಷಿಗಳು ಈವರೆಗೆ ಸಿಕ್ಕಿಲ್ಲ. ಸದ್ಯ ಆರೋಪಿಗಳು ಹಾಗೂ ಕೆಲವು ಸಾಕ್ಷಿಗಳು ನೀಡಿರುವ ಹೇಳಿಕೆಯ ಪ್ರಕಾರ, ಸಚಿನ್ ಅವರು ಮೊದಲು ಅಶ್ರಫ್‌ಗೆ ಯಾಕೆ ಹೊಡೆಯುತ್ತಿದ್ದರು ಎಂಬ ಬಗ್ಗೆ ಮಾಹಿತಿ ಇಲ್ಲ. ನನ್ನ ಸ್ನೇಹಿತ ಒಬ್ಬನಿಗೆ ಹೊಡೆಯುತ್ತಿದ್ದಾನೆ ಅಂತ ಅವರೂ ಕೂಡ ಗುಂಪಿನಲ್ಲಿ ಸೇರಿ ಹೊಡೆದಿದ್ದಾರೆ. ಮಾಧ್ಯಮಗಳಲ್ಲಿ ಕೆಲವೊಂದು ಕಾರಣಗಳನ್ನು ಉಲ್ಲೇಖಿಸಿ ಮಾಹಿತಿ ಹರಿದಾಡುತ್ತಿದೆ. ಅದರ ಬಗ್ಗೆ ನಮಗೆ ಇನ್ನೂ ಸಾಕ್ಷಿಗಳು ಸಿಕ್ಕಿಲ್ಲ. ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚುತ್ತೇವೆ. ಪ್ರಕರಣದಲ್ಲಿ ಶಾಮೀಲಾದವರ ಬಗ್ಗೆ ತನಿಖೆ ಮುಂದುವರಿದಿದೆ” ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...