ಮಂಗಳೂರು | ‘ಮುಸ್ಲಿಂ’ ವಲಸೆ ಕಾರ್ಮಿಕನ ಮೇಲೆ ಗುಂಪು ಹಲ್ಲೆಗೈದು ಹತ್ಯೆ; ಆರೋಪ

Date:

ಕರಾವಳಿ ಜಿಲ್ಲೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದಲ್ಲಿ ಮುಸ್ಲಿಂ ವಲಸೆ ಕಾರ್ಮಿಕನೋರ್ವನನ್ನು ಸುಮಾರು 50 ಜನರ ಗುಂಪೊಂದು ಹಲ್ಲೆ ನಡೆಸಿ, ಹತ್ಯೆಗೈದಿರುವ ಆರೋಪವೊಂದು ಕೇಳಿಬಂದಿದೆ.

ನಗರದ ಹೊರವಲಯದ ಕುಡುಪು ಸಮೀಪ ರವಿವಾರ ಸಂಜೆ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಇದೀಗ ಪ್ರಕರಣವು ತಿರುವು ಪಡೆದಿದ್ದು, ‘ಮುಸ್ಲಿಂ’ ಎಂಬ ಕಾರಣಕ್ಕೆ ಯುವಕನನ್ನು ಗುಂಪು ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ. ಆದರೆ, ಈ ಬಗ್ಗೆ ಹರಡುತ್ತಿರುವ ‘ವದಂತಿಗಳಿಗೆ ಕಿವಿಗೊಡದಿರಿ’ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮನವಿ ಮಾಡಿದ್ದಾರೆ.

ಮೃತ ಯುವಕ ಉತ್ತರ ಭಾರತ ಮೂಲದವನು ಎನ್ನಲಾಗಿದ್ದು, ಹೆಸರು, ವಿವರ ಇನ್ನೂ ಪತ್ತೆಯಾಗಿಲ್ಲ. ಸುಮಾರು 35ರಿಂದ 40 ವರ್ಷ ಪ್ರಾಯದ ಈ ಯುವಕನನ್ನು 50 ಮಂದಿಯ ಗುಂಪು ಬ್ಯಾಟ್, ದೊಣ್ಣೆಯಿಂದ ಹಲ್ಲೆ ಮಾಡಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. 50 ಜನರ ಗುಂಪಿನಲ್ಲಿ ಮಾಜಿ ಕಾರ್ಪೊರೇಟರ್ ಒಬ್ಬರ ಪತಿಯೂ ಭಾಗಿಯಾಗಿದ್ದರು ಎಂಬ ಮಾತುಗಳು ಕೇಳಿಬಂದಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಕಾಂಗ್ರೆಸ್ ಮತ್ತು ಸಿಪಿಎಂ ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಮೃತದೇಹವು ವೆನ್ಲಾಕ್ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿದ್ದು, ಯಾರೂ ವಾರೀಸುದಾರರು ಬಂದಿಲ್ಲದೇ ಇರುವುದರಿಂದ ಮರಣೋತ್ತರ ಪರೀಕ್ಷೆ ಕೂಡ ನಡೆಸಿಲ್ಲ ಎಂದು ತಿಳಿದುಬಂದಿದೆ.

‘ವದಂತಿಗಳಿಗೆ ಕಿವಿಗೊಡದಿರಿ’ ಎಂದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್

ಘಟನೆಯ ಬಗ್ಗೆ ಮಾಧ್ಯಮದವರು ಕೇಳಿರುವ ಮಾಹಿತಿಗೆ ಉತ್ತರಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮೃತಪಟ್ಟ, “ಈತ ಕೂಲಿ ಕಾರ್ಮಿಕ ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಆತನ ಗುರುತು ಪತ್ತೆಗಾಗಿ ಪ್ರಯತ್ನ ಸಾಗಿಸಿದ್ದಾರೆ. ಪ್ರಾಥಮಿಕ ವರದಿಯ ಬಳಿಕ ಸಾವಿಗೆ ಕಾರಣ ಏನು ಎಂದು ಪತ್ತೆ ಹಚ್ಚಲಾಗುವುದು. ಈ ಬಗ್ಗೆ ಹರಡುತ್ತಿರುವ ವದಂತಿಗಳಿಗೆ ಕಿವಿಗೊಡದಿರಿ” ಎಂದು ಮನವಿ ಮಾಡಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಈದಿನ ಡಾಟ್‌ ಕಾಮ್ ಜೊತೆಗೆ ಮಾತನಾಡಿರುವ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ, “ಮಂಗಳೂರು ಪೊಲೀಸರು ಯಾವುದೇ ಅಧಿಕೃತ ಮಾಹಿತಿಯನ್ನು ಘಟನೆ ನಡೆದು ಒಂದು ದಿನ ಕಳೆದರೂ ನೀಡದಿರುವುದು ಪ್ರಕರಣದ ಕುರಿತು ಅನುಮಾನಗಳನ್ನು ಹೆಚ್ಚಿಸಿದೆ. ಪೊಲೀಸರು ನಿಷ್ಪಕ್ಷಪಾತವಾಗಿ ಮತ್ತು ಗಂಭೀರವಾಗಿ ಈ ಪ್ರಕರಣವನ್ನು ಭೇದಿಸಬೇಕು, ವಿಶೇಷ ತನಿಖಾ ತಂಡವನ್ನು ರಚಿಸಿ ಅಮೂಲಾಗ್ರ ತನಿಖೆ ನಡೆಸಬೇಕು, ಸತ್ಯ ಹೊರಗೆ ಬರಬೇಕು ಎಂದು ಆಗ್ರಹಿಸಿದ್ದಾರೆ. ಬಿಜೆಪಿಯವರು ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

“ಪೆಹಲ್ಗಾಮ್ ಭಯೋತ್ಪಾದಕ ಘಟನೆ ದಾಳಿಯ ಬೆನ್ನಲ್ಲೇ ಮಂಗಳೂರಿನಲ್ಲಿ ಈ ರೀತಿಯಾಗಿ ನಡೆದಿರುವುದು ದುರದೃಷ್ಟಕರ ಬೆಳವಣಿಗೆ. ಈ ಘಟನೆಯಲ್ಲಿ ಮಾಜಿ ಕಾರ್ಪೊರೇಟರ್ ಓರ್ವರ ಪತಿ, ಯುವಕರ ಗುಂಪನ್ನು ಹಲ್ಲೆ ನಡೆಸಲು ಪ್ರಚೋದಿಸಿದ್ದಾರೆ ಎಂಬ ಕುರಿತೂ ಸ್ಥಳೀಯರು ಮಾತಾಡಿಕೊಳ್ಳುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಯ ಬಗ್ಗೆ ಸೂಕ್ತವಾದ ತನಿಖೆ ನಡೆಯಬೇಕು. ಸತ್ಯಾಸತ್ಯತೆ ಹೊರಗಡೆ ಬರಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, “ಮಂಗಳೂರು ನಗರದ ಹೊರವಲಯದ ಕುಡುಪು ಎಂಬಲ್ಲಿ ನಿನ್ನೆ ಸಂಜೆ (ಎಪ್ರಿಲ್ 27) ಕ್ರಿಕೆಟ್ ಆಡುತ್ತಿದ್ದ ಗುಂಪೊಂದು ಅಲ್ಲಿದ್ದ ವಲಸೆ ಕಾರ್ಮಿಕನೋರ್ವನನ್ನು ಥಳಿಸಿ ಹತ್ಯೆ ಗೈದಿರುವ ಕುರಿತು ಆತಂಕಕಾರಿ ಮಾಹಿತಿಗಳು ಹೊರಬೀಳುತ್ತಿದೆ. ಘಟನೆ ನಡೆದು ಒಂದು ದಿನದ ಕಳೆದಿದ್ದರೂ ಪೊಲೀಸ್ ಇಲಾಖೆ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ನೀಡುತ್ತಿಲ್ಲ. ಇದು ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಐಪಿಎಲ್ | ಅಂಕಪಟ್ಟಿಯಲ್ಲಿ ಆರ್‌ಸಿಬಿಗೆ ಮೊದಲ ಸ್ಥಾನ: ಪ್ಲೇ-ಆಫ್‌ಗೇರಲು ಯಾವ ತಂಡಕ್ಕೆ ಎಷ್ಟು ಶೇಕಡಾ ಅವಕಾಶ?

“ಗುಂಪು ಹಲ್ಲೆ, ಹತ್ಯೆಯಲ್ಲಿ ಭಾಗಿಯಾಗಿರುವ ರಾಜಕಿಯ ಹಿನ್ನಲೆಯ ಕೆಲವು ಪ್ರಭಾವಿಗಳನ್ನು ರಕ್ಷಿಸುವ, ಪ್ರಕರಣದ ತೀವ್ರತೆಯನ್ನು ತಗ್ಗಿಸುವ, ಪ್ರಕರಣವನ್ನು ದುರ್ಬಲಗೊಳಿಸುವ ಯತ್ನವೂ ಪ್ರಭಾವಿ ರಾಜಕಾರಣಿಗಳಿಂದ, ಸ್ಥಳೀಯ ಜನಪ್ರತಿನಿಧಿಗಳಿಂದ ನಡೆಯುತ್ತಿರುವ ಕುರಿತು ಅನುಮಾನಗಳು ಸಾರ್ವಜನಿಕ ವಲಯದಿಂದ ವ್ಯಕ್ತವಾಗುತ್ತಿದೆ. ರಾಜ್ಯ ಸರಕಾರ ಈ ಕುರಿತು ಗಮನ ಹರಿಸಬೇಕು, ಖುದ್ದು ಮುಖ್ಯಮಂತ್ರಿಗಳು ಈ ಗುಂಪು ಹಲ್ಲೆ, ಹತ್ಯೆ ಪ್ರಕರಣವನ್ನು ಗಂಭೀರಾವಗಿ ಪರಿಗಣಿಸಿ ಉತ್ತಮ ಹಿನ್ನಲೆಯ ಅಧಿಕಾರಿಗಳ ತಂಡವನ್ನು ತನಿಖೆಗೆ ನೇಮಿಸಬೇಕು” ಎಂದು ಸಿಪಿಐಎಂ ದ.ಕ ಜಿಲ್ಲಾ ಸಮಿತಿ ಆಗ್ರಹಿಸಿದೆ.

“ಕುಡುಪು ಮೈದಾನದ ಸಮೀಪ ಬಂದ ವಲಸೆ ಕಾರ್ಮಿಕನನ್ನು ಆತನ ಧರ್ಮದ ಗುರುತಿನ ಕಾರಣಕ್ಕೆ ಕಲ್ಲು, ದೊಣ್ಣೆ, ಬ್ಯಾಟುಗಳಿಂದ ಅಲ್ಲಿದ್ದ ಗುಂಪು ಹಲ್ಲೆ ನಡೆಸಿ ಕೊಂದು ಹಾಕಿದೆ ಎಂದು ಎಲ್ಲೆಡೆ ಪುಕಾರು ಹಬ್ಬಿದೆ. ನತದೃಷ್ಟ ವಲಸೆ ಕಾರ್ಮಿಕ ದೇಶ ವಿರೋಧಿ ಘೋಷಣೆ ಕೂಗಿದ್ದಾನೆ ಎಂಬ ವದಂತಿಯನ್ನೂ ದುಷ್ಕರ್ಮಿಗಳ ಗುಂಪು ಹರಿಯಬಿಟ್ಟಿದೆ. ಆ ಮೂಲಕ ತಮ್ಮ ಗಂಭೀರ ದುಷ್ಕೃತ್ಯವನ್ನು ದೇಶ ಪ್ರೇಮದ ಲೇಬಲ್ ಅಂಟಿಸಿ ಸಮರ್ಥಿಸಿಕೊಳ್ಳುವ ಹೀನ ಯತ್ನವೂ ನಡೆಯುತ್ತಿದೆ. ಮಾಜಿ ಕಾರ್ಪೊರೇಟರ್ ಓರ್ವರ ಪತಿ ಈ ಗುಂಪನ್ನು ಹಲ್ಲೆ ನಡೆಸಲು ಪ್ರಚೋದಿಸಿದ್ದಾರೆ ಎಂಬ ಕುರಿತೂ ಸ್ಥಳೀಯರು ಮಾತಾಡಿಕೊಳ್ಳುತ್ತಿದ್ದಾರೆ. ಹತ್ಯೆಯ ತರುವಾಯ ಸ್ಥಳೀಯ ಜನಪ್ರತಿನಿಧಿಗಳೂ ಮಧ್ಯಪ್ರವೇಶಿಸಿ ಪ್ರಕರಣದ ತೀವ್ರತೆಯನ್ನು ತಗ್ಗಿಸುವ, ಕೆಲವರನ್ನು ಬಚಾವ್ ಮಾಡುವ ಯತ್ನ ನಡೆಸುತ್ತಿರುವ ಆರೋಪಗಳೂ ಕೇಳಿಬರುತ್ತಿದೆ. ಮಂಗಳೂರು ಪೊಲೀಸರು ಯಾವುದೇ ಅಧಿಕೃತ ಮಾಹಿತಿಯನ್ನು ಘಟನೆ ನಡೆದು ಒಂದು ದಿನ ಕಳೆದರೂ ನೀಡದಿರುವುದು ಪ್ರಕರಣದ ಕುರಿತು ಅನುಮಾನಗಳನ್ನು ಹೆಚ್ಚಿಸಿದೆ” ಎಂದು ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.

ಮಂಗಳೂರು ನಗರದಲ್ಲಿ ಈ ರೀತಿ ಗುಂಪು ಹಲ್ಲೆ, ಹತ್ಯೆ ನಡೆಯುವುದು ಕರಾವಳಿ ಜಿಲ್ಲೆಗಳು ಅಪಾಯದ ಗಡಿದಾಟುತ್ತಿರುವುದರ ಸಂಕೇತ, ಪೆಹಲ್ಗಾಮ್ ದುರಂತದ ಬೆನ್ನಲ್ಲೇ ಈ ಘಟನೆ ನಡೆದಿರುವುದು ಆಘಾತಕಾರಿ ವಿದ್ಯಾಮಾನ‌. ವಲಸೆ ಕಾರ್ಮಿಕರು, ಅವರ ಧರ್ಮದ ಹಾಗೂ ವಿವಿಧ ಗುರುತಿನ ಕಾರಣಕ್ಕೆ “ದೇಶಪ್ರೇಮ”ದ ಲೇಬಲ್ ಅಡಿ ದುಷ್ಕರ್ಮಿಗಳು ಬಹಿರಂಗವಾಗಿ ಹೊಡೆದು ಹಾಕುವುದು ಅನಾಗರಿಕತೆಯ ಪರಮಾವಧಿ. ಇದರ ಸಾಮಾಜಿಕ ಪರಿಣಾಮಗಳು ಸರಿಪಡಿಸಲಾಗಷ್ಟು ಗಂಭೀರವಾಗಿರುತ್ತದೆ. ಸಿಪಿಐಎಂ ದ.ಕ ಜಿಲ್ಲಾ ಸಮಿತಿ ಈ ಘಟನೆಯನ್ನು ಬಲವಾಗಿ ಖಂಡಿಸುತ್ತದೆ. ಪೊಲೀಸ್ ಇಲಾಖೆ ಘಟನೆಯ ಕುರಿತು ತಕ್ಷಣವೆ ಸಾರ್ವಜನಿಕರಿಗೆ ಪೂರ್ಣ ಮಾಹಿತಿಯನ್ನು ಒದಗಿಸಬೇಕು. ಪ್ರಕರಣದ ತನಿಖೆಗಾಗಿ ದಕ್ಷ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ನೇಮಿಸಬೇಕು” ಎಂದು ಸಿಪಿಐಎಂ ದ.ಕ. ಜಿಲ್ಲಾ ಸಮಿತಿ ರಾಜ್ಯ ಸರಕಾರವನ್ನು ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...