ಮಂಗಳೂರು | ನಂದಿಗುಡ್ಡೆ ವೇಶ್ಯಾವಾಟಿಕೆ ಪ್ರಕರಣ; ಎಲ್ಲಾ 17 ಆರೋಪಿಗಳು ಖುಲಾಸೆ

Date:

ಮಂಗಳೂರಿನ ಅತ್ತಾವರದ ನಂದಿಗುಡ್ಡೆ ಫ್ಲ್ಯಾಟ್‌ವೊಂದರಲ್ಲಿ ನಡೆದಿದ್ದ ವೇಶ್ಯಾವಾಟಿಕೆ ಪ್ರಕರಣದ ಎಲ್ಲಾ 17 ಆರೋಪಿಗಳನ್ನು ಮಂಗಳೂರು ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಿ ಆದೇಶಿಸಿದೆ.

ಮಂಗಳೂರಿನಲ್ಲಿ ಸಂಚಲನವುಂಟುಮಾಡಿದ್ದ ಈ ಪ್ರಕರಣವನ್ನು ಅಂದಿನ ಪೊಲೀಸ್ ಆಯುಕ್ತ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಮ್ ಶಂಕರ್ ನೇತೃತ್ವದ ತಂಡ ದಾಳಿ ನಡೆಸಿ, ಉಳ್ಳಾಲದ ಪ್ರಭಾವಿ ರಾಜಕಾರಣಿಗಳ ಸಹವರ್ತಿಗಳು ಮತ್ತು ಪ್ರಮುಖ ಸ್ಥಳೀಯ ಬಿಲ್ಡರ್‌ಗಳು ಸೇರಿದಂತೆ 17ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದರು. ಕಾಸರಗೋಡಿನ ಉಪ್ಪಳದ ಶಮೀನಾ ಎಂಬಾಕೆ ಆಕೆಯ ಪತಿ ಅಬೂಬಕರ್ ಸಿದ್ದಿಕ್ ಮತ್ತು ಸಹವರ್ತಿಗಳಾದ ಅಸ್ಮಾ, ಐಸಮ್ಮ, ರೆಹಮತ್ ಮತ್ತು ಉಮ್ಮರ್ ಕುಂಞಿ ಅವರೊಂದಿಗೆ ಸೇರಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಆರೋಪಿಸಲಾಗಿತ್ತು.

ಆರ್ಥಿಕವಾಗಿ ಸಂಕಷ್ಟದಲ್ಲಿರುವ ಯುವತಿಯರನ್ನು, ಅದರಲ್ಲೂ ಕಾಲೇಜು ವಿದ್ಯಾರ್ಥಿನಿಯರನ್ನು ಐಷಾರಾಮಿ ಜೀವನಶೈಲಿ ಮತ್ತು ದೊಡ್ಡ ಮೊತ್ತದ ಹಣದ ಆಮಿಷವೊಡ್ಡಿ ಕರೆತರಲಾಗುತ್ತಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣದಲ್ಲಿ ಇಬ್ಬರು ಮುಸ್ಲಿಂ ಯುವತಿಯರನ್ನು ರಕ್ಷಿಸಲಾಗಿದ್ದು, ಮೂವರು ಮಹಿಳೆಯರು ಮತ್ತು 75 ವರ್ಷದ ವೃದ್ಧ ಸೇರಿದಂತೆ 15 ಜನರನ್ನು ಬಂಧಿಸಲಾಗಿತ್ತು. ಖಾಸಗಿ ಅಪಾರ್ಟ್‌ಮೆಂಟ್‌ಗಳಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯರನ್ನು ಭೇಟಿಯಾಗಬಹುದು ಎಂದು ನಂಬಿಸಿ ವಂಚಿಸಲಾದ ಗ್ರಾಹಕರಲ್ಲಿ ಕೇರಳದ ಶ್ರೀಮಂತ ವ್ಯಕ್ತಿಗಳು ಸೇರಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರ್ಚ್ 28 ರಂದು, ಮಂಗಳೂರು ಜಿಲ್ಲಾ ಹೆಚ್ಚುವರಿ ಪೋಕ್ಸೋ ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ಆರೋಪಿಗಳ ಪರವಾಗಿ ತೀರ್ಪು ನೀಡಿದೆ. ವಿಚಾರಣೆ ಸಂದರ್ಭದಲ್ಲಿ ಪ್ರಮುಖ ಆರೋಪಿ ಶಮೀನಾ ಮೃತಪಟ್ಟಿದ್ದಳು ಎನ್ನಲಾಗಿದೆ.

ಇದನ್ನೂ ಓದಿ: ಮಂಗಳೂರು | ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್‌ ದುರ್ಬಳಕೆ ತಡೆಗೆ ಕ್ರಮ: ಪೊಲೀಸ್‌ ಕಮಿಷನರ್‌

ಆರೋಪಿಗಳು ಕಾಲೇಜು ಹುಡುಗಿಯರೊಂದಿಗೆ ಸ್ನೇಹ ಬೆಳೆಸಿ, ಅವರನ್ನು ಹೊರಗೆ ಕರೆದುಕೊಂಡು ಹೋಗಿ, ನಂತರ ಲಕ್ಷಾಂತರ ರೂಪಾಯಿಗಳನ್ನು ನೀಡಿ ವೇಶ್ಯಾವಾಟಿಕೆಯಲ್ಲಿ ತೊಡಗುವಂತೆ ಪ್ರೇರೇಪಿಸುತ್ತಿದ್ದರು ಎನ್ನಲಾಗಿದೆ. ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿ 86 ಸಾಕ್ಷಿಗಳನ್ನು ಹಾಜರುಪಡಿಸಿದರೂ, ಪ್ರಮುಖ ಸಾಕ್ಷಿಗಳು ಪ್ರಕರಣಕ್ಕೆ ಪೂರಕ ಸಾಕ್ಷಿ ನೀಡಲು ವಿಫಲರಾದ ಕಾರಣ ಪ್ರಕರಣಕ್ಕೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...