ಮಂಗಳೂರು | ಸಿಗ್ನಲ್‌ನಲ್ಲಿ ನಿಂತಿದ್ದಾಗ ಆಟೋಗೆ ಅಪ್ಪಳಿಸಿದ ಟ್ಯಾಂಕರ್: ಮೂವರು ಮೃತ್ಯು

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಣಂಬೂರು ಬೀಚ್ ಬಳಿಯ ಸಿಗ್ನಲ್‌ನಲ್ಲಿ ನಿಂತಿದ್ದಾಗ ಆಟೋ ರಿಕ್ಷಾಕ್ಕೆ ಟ್ಯಾಂಕರ್‌ವೊಂದು ಅಪ್ಪಳಿಸಿದ ಪರಿಣಾಮ ರಿಕ್ಷಾದಲ್ಲಿದ್ದ ಮೂವರು ಮೃತಪಟ್ಟ ದಾರುಣ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಗ್ಗೆ ಈ ಸರಣಿ ರಸ್ತೆ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ ಮೃತಪಟ್ಟ ಮೂವರನ್ನು BM ಅಬೂಬಕ್ಕರ್ ಬಯಲು ಮೊಂಟೆಪದವು, ಇಬ್ರಾಹೀಂ ಬಟ್ಟಿಯಡ್ಕ, ಮನ್ಸೂರ್ ಮಜಲು ಎಂದು ಗುರುತಿಸಲಾಗಿದೆ.

ಪಣಂಬೂರು ಸಿಗ್ನಲ್ ಬಳಿಯಲ್ಲಿ ಸರತಿಯಲ್ಲಿದ್ದ ವೇಳೆ ಎರಡು ಟ್ಯಾಂಕ‌ರ್, ಆಟೊ ರಿಕ್ಷಾ ಮತ್ತು ಕಾರು ಅಪಘಾತಕ್ಕೀಡಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಗ್ನಲ್ ನಲ್ಲಿ ನಿಂತಿದ್ದ ಟ್ಯಾಂಕ‌ರ್ ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೊ ರಿಕ್ಷಾ ನಿಂತಿತ್ತು. ಈ ವೇಳೆ ಹಿಂದಿನಿಂದ ಬಂದ ಇನ್ನೊಂದು ಟ್ಯಾಂಕ‌ರ್ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಅದರ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕ‌ರ್ ಗೆ ಢಿಕ್ಕಿ ಹೊಡೆದಿದೆ.

ಈ ವೇಳೆ ಆಟೊ ರಿಕ್ಷಾ ಎರಡು ಟ್ಯಾಂಕರ್ ಗಳ ಮಧ್ಯೆ ಸಿಲುಕಿ ಅಪ್ಪಚ್ಚಿಯಾಗಿದೆ ಎಂದು ವರದಿಯಾಗಿದೆ.

ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಮತ್ತು ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಡಿ ನೀಡಿ ಪರಿಶೀಲಿಸದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...