ಮಂಗಳೂರು | ಹಿಮೋಫಿಲಿಯಾ ಬಾಧಿತ ಗರ್ಭಿಣಿಗೆ ಲೇಡಿಗೋಷನ್ ಆಸ್ಪತ್ರೆಯಲ್ಲಿ ಯಶಸ್ವೀ ಶಸ್ತ್ರಚಿಕಿತ್ಸೆ

Date:

ಅಪರೂಪದ ಹಾಗೂ ಮಾರಣಾಂತಿಕ ರೋಗ ಹೊಂದಿದ್ದ ಗರ್ಭಿಣಿಯೊಬ್ಬರಿಗೆ ಯಶಸ್ವೀ ಶಸ್ತ್ರಚಿಕಿತ್ಸೆ ಮಾಡಿ ಮಂಗಳೂರಿನ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆ ದಾಖಲೆ ನಿರ್ಮಿಸಿದೆ.

ಹುಟ್ಟಿನಿಂದ ಹಿಮೋಫಿಲಿಯಾ ಎಂಬ ರಕ್ತಸಂಬಂಧೀ ಕಾಯಿಲೆಯಿಂದ ಬಳಲುತ್ತಿದ್ದ ಆಕೆ ಬಾಲ್ಯದಿಂದಲೇ ಇದಕ್ಕೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಗರ್ಭಾವಸ್ಥೆಯಲ್ಲಿ ಹಿಮೋಫಿಲಿಯಾ ಇದ್ದಲ್ಲಿ ಯಾವುದೇ ಸಮಯದಲ್ಲಿ ರಕ್ತಸ್ರಾವ ಆಗಿ ತಾಯಿ ಮರಣ ಆಗುವ ಸಾಧ್ಯತೆ ಇರುತ್ತದೆ. ಸಾಮಾನ್ಯವಾಗಿ ರಕ್ತಸ್ರಾವವನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರವನ್ನು ವಹಿಸುವ ಫ್ಯಾಕ್ಟರ್ 8ರ ಕೊರತೆ ಈ ರೋಗದ ಮೂಲ ಅಂಶ. ಒಂದು ಲಕ್ಷಕ್ಕೆ ಒಂದರಂತೆ ಇರುವ ಅಪರೂಪದ ಈ ಕಾಯಿಲೆಗೆ ಚಿಕಿತ್ಸೆ ಅಷ್ಟು ಸುಲಭವಿರಲಿಲ್ಲ.

ವೆನ್ಲಾಕ್ ಬ್ಲಡ್ ಬ್ಯಾಂಕ್‌ನ ಡಾ. ಶರತ್ ಅವರನ್ನು ಭೇಟಿಯಾದ ಸಂಬಂಧಿಕರು, ಫ್ಯಾಕ್ಟರ್ 8 ಇಂಜೆಕ್ಷನ್‌ಗಳ ಪೂರೈಕೆಯ ಬಗ್ಗೆ ತಿಳಿದುಕೊಳ್ಳುತ್ತಾರೆ. ಅದೇ ಆಸ್ಪತ್ರೆಯಲ್ಲಿ ನಿಯಮಿತವಾಗಿ ಗರ್ಭಿಣಿ ಪರೀಕ್ಷೆ ನಡೆಸಲಾಗುತ್ತದೆ. ಸರ್ಕಾರದ ವತಿಯಿಂದ ಈ ಮಹಿಳೆಗೆ ವಾರಕ್ಕೆ ಒಂದಾವರ್ತಿ ಅಗತ್ಯತೆಯ ಈ ಇಂಜೆಕ್ಷನ್ ನೀಡುವ ವ್ಯವಸ್ಥೆಯನ್ನು ಗರ್ಭಾವಸ್ಥೆಯ ಪೂರ್ಣ ಅವಧಿಯವರೆಗೂ ಆಸ್ಪತ್ರೆ ನಿರ್ವಹಿಸುತ್ತದೆ. ನಿರೀಕ್ಷಿತ ಹೆರಿಗೆ ದಿನಾಂಕಕ್ಕೆ 20 ದಿನಗಳ ಮುಂಚಿತವಾಗಿ ಗರ್ಭಿಣಿಯನ್ನು ದಾಖಲು ಮಾಡಿಕೊಳ್ಳಲಾಗುತ್ತದೆ. ಬಳಿಕ ಸುರಕ್ಷಿತವಾಗಿ ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಕ್ಷಾಂತರ ರೂಪಾಯಿ ಬೆಲೆಯುಳ್ಳ 25,000 ಯೂನಿಟ್‌ನ ಅಪರೂಪದ ಈ ಇಂಜೆಕ್ಷನ್ ನ್ನು ಸರ್ಕಾರದ ವತಿಯಿಂದ ನೀಡಲಾಗಿದೆ.
ಕೆಎಂಸಿಯ ತಜ್ಞ ವೈದ್ಯರುಗಳು ಹಾಗೂ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರುಗಳಾದ ಡಾ. ಅನುಪಮಾ ರಾವ್, ಡಾ. ಸಿರಿಗಣೇಶ್, ಡಾ. ನಮಿತಾ, ಅರವಳಿಕೆ ತಜ್ಞರುಗಳಾದ ಡಾ. ಸುಮೇಶ್ ರಾವ್, ಡಾ. ರಂಜನ್ ಹಾಗೂ ಲೇಡಿಗೋಷನ್‌ನ ಶುಶ್ರೂಷಕ ವೃಂದದ ಸೇವೆ ನೆರವೇರಿಸಿದೆ.

ಇದನ್ನೂ ಓದಿ: ಮಂಗಳೂರು | ಮೇ 10ರಂದು ಪತ್ರಕರ್ತ ಬಿ.ಎಂ.ಬಶೀರ್ ಅವರ ‘ಅಗ್ನಿಪಥ’ ಕಾದಂಬರಿ ಬಿಡುಗಡೆ

ಪ್ರಸವೋತ್ತರವಾಗಿ ಸುಮಾರು ಹತ್ತು ದಿನಗಳ ಆಸ್ಪತ್ರೆ ಆರೈಕೆಯ ಬಳಿಕ ಸುರಕ್ಷಿತವಾಗಿ ಮನೆ ಸೇರಿರುವ ಮಹಿಳೆ ಲೇಡಿಗೋಷನ್ ಆಸ್ಪತ್ರೆ ಮತ್ತು ಉತ್ಕೃಷ್ಟ ಸರಕಾರಿ ವ್ಯವಸ್ಥೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...