ಮಂಗಳೂರು | ಜೈಲಿನಲ್ಲಿ ಹೊಡೆದಾಡಿಕೊಂಡ ಕೈದಿಗಳು: ಆಸ್ಪತ್ರೆಗೆ ದಾಖಲು

Date:

ಮಂಗಳೂರು ನಗರದ ಕೊಡಿಯಾಲ್‌ಬೈಲ್‌ನಲ್ಲಿರುವ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಮಧ್ಯೆ ಗುರುವಾರ ಮತ್ತೆ ಹೊಡೆದಾಟ ನಡೆದಿರುವ ಬಗ್ಗೆ ವರದಿಯಾಗಿದೆ.

ಮುಕ್ತಾರ್ ಮತ್ತು ಇತರ ಕೈದಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜೈಲಿನಲ್ಲಿ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಕೈದಿ ಮುಕ್ತಾರ್ ಮತ್ತೊಬ್ಬ ಕೈದಿ ಕೇಶವ ಎಂಬಾತನಿಗೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ಹಲ್ಲೆಗೊಳಗಾದ ಕೇಶವನನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

2023ರ ನ.6ರಂದು ನಡೆದಿದ್ದ ಪುತ್ತೂರಿನ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿ ಕೇಶವನಿಗೆ ಉಳ್ಳಾಲ ಧರ್ಮನಗರದ ನಿವಾಸಿಯಾಗಿರುವ ಮುಕ್ತಾರ್ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಮುಕ್ತಾರ್‌ ವಿರುದ್ಧ ಈಗಾಗಲೇ 15 ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಸಿಇಟಿ ಸೀಟ್‌ ಬ್ಲಾಕಿಂಗ್‌: ಅರ್ಹರಿಗೆ ಅವಕಾಶ ತಪ್ಪಲು ವ್ಯವಸ್ಥೆಯೇ ಶಾಮೀಲು?

ಹೊಡೆದಾಟದ ಹಿನ್ನೆಲೆಯಲ್ಲಿ ಜೈಲಿಗೆ ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ಮತ್ತು ಬರ್ಕೆ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...