ಮಂಗಳೂರು ಪ್ರಕರಣ | ಬಿಜೆಪಿ ಶಾಸಕರ ಮೇಲಿನ ಎಫ್‌ಐಆರ್ ಖಂಡಿಸಿ ರಸ್ತೆ ತಡೆ: ಸಂಘಪರಿವಾರದ ಕಾರ್ಯಕರ್ತರ ಬಂಧನ

Date:

ಮಂಗಳೂರು ನಗರದ ಜೆರೋಸಾ ಶಾಲೆಯ ವಿವಾದ ದಿನದಿಂದ ವಿಕೋಪಕ್ಕೆ ಹೋಗುತ್ತಿದ್ದು, ಪ್ರಕರಣದಲ್ಲಿ ಮಧ್ಯ ಪ್ರವೇಶ ಮಾಡಿ ವಿದ್ಯಾರ್ಥಿಗಳನ್ನು ಪ್ರಚೋದಿಸಿದ್ದ ಬಿಜೆಪಿ ಶಾಸಕರು, ಹಿಂದೂ ಸಂಘಟನೆಯ ಪ್ರಮುಖರ ಮೇಲೆ ಎಫ್‌ಐಆರ್ ದಾಖಲು ಮಾಡಿರುವುದನ್ನು ಖಂಡಿಸಿ ಸಂಘಪರಿವಾರದ ಕಾರ್ಯಕರ್ತರು ಮಂಗಳೂರಿನಲ್ಲಿ ದಿಡೀರ್ ರಸ್ತೆ ತಡೆ ನಡೆಸಲು ಯತ್ನಿಸಿದ ಘಟನೆ ನಡೆದಿದೆ.

ಕೂಡಲೇ ಜಾಗೃತರಾದ ಪೊಲೀಸರು ಹಲವು ಮಂದಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

bjp 27

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೆರೋಸಾ ಶಾಲೆಯ ಘಟನೆ ಹಿನ್ನೆಲೆಯಲ್ಲಿ ಇಬ್ಬರು ಬಿಜೆಪಿ ಶಾಸಕರಾದ ವೇದವ್ಯಾಸ್ ಕಾಮತ್, ಡಾ, ಭರತ್ ಶೆ್ಟ್ಟಿ, ವಿಹೆಚ್‌ಪಿ ಮುಖಂಡ ಶರಣ್ ಪಂಪ್‌ವೆಲ್, ಪಾಲಿಕೆಯ ಸದಸ್ಯರುಗಳ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.

ಜಿಲ್ಲಾಡಳಿತ ಮತ್ತು ಮಂಗಳೂರು ಪೊಲೀಸರ ಕ್ರಮ ಖಂಡಿಸಿ ಇಂದು ನಗರದಲ್ಲಿ ವಿಹೆಚ್‌ಪಿ ಹರತಾಳಕ್ಕೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕ್ಲಾಕ್ ಟವರ್ ಬಳಿ ನೂರಾರು ಬಜರಂಗದಳ ಮತ್ತು ವಿಹೆಚ್‌ಪಿ ಕಾರ್ಯಕರ್ತರು ಸೇರಿದ್ದರು.

bjp 3 1

ಪೊಲೀಸರು ಪ್ರತಿಭಟನೆಗೆ ಅವಕಾಶ ನೀಡಿದ್ದರು. ಆದರೆ, ಕಾರ್ಯಕರ್ತರು ದಿಡೀರ್ ಆಗಿ ರಸ್ತೆ ತಡೆಗೆ ಮುಂದಾದರು, ಇದಕ್ಕೆ ಪೊಲೀಸರು ಅವಕಾಶ ನೀಡದ ಕಾರಣ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ಜಟಾಪಟಿ ನಡೆಯಿತು. ಜೈ ಶ್ರೀ ರಾಮ್ ಘೋಷಣೆಯೊಂದಿಗೆ ಕಾರ್ಯಕರ್ತರು ಮುನ್ನುಗ್ಗಲು ಯತ್ನಿಸಿದಾಗ ಸಂಘಪರಿವಾರದ ಕಾರ್ಯಕರ್ತರನ್ನು ಕೂಡಲೇ ಪೊಲೀಸರು ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...