ಮಂಗಳೂರು | ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಒಂದೇ ವರ್ಷದಲ್ಲಿ ಉಡುಪಿಯ ಉದ್ಯಮಿಗಳಿಬ್ಬರಿಗೆ ದಂಡ, ಜೈಲು ಶಿಕ್ಷೆ ಪ್ರಕಟ

Date:

ಎರಡು ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಂಗಳೂರು ನಗರದ 9ನೇ ಜೆಎಂಎಫ್‌ಸಿ ನ್ಯಾಯಾಲಯ ಉಡುಪಿಯ ಇಬ್ಬರು ಉದ್ಯಮಿಗಳಿಗೆ ಜೈಲು ಶಿಕ್ಷೆ ಪ್ರಕಟಿಸಿದ್ದು, ದಂಡವನ್ನು ವಿಧಿಸಿದೆ.

ಎರಡೂ ಪ್ರಕರಣಗಳನ್ನು ಕೇವಲ ಒಂದೇ ವರ್ಷದಲ್ಲಿ ವಿಚಾರಣೆ ನಡೆಸಲಾಗಿದ್ದು, 9ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಡಾ. ಶಿಲ್ಪಾ ಬ್ಯಾಡಗಿ ಅವರಿದ್ದ ನ್ಯಾಯಪೀಠ ಈ ಕ್ಷಿಪ್ರಗತಿಯ ತೀರ್ಪು ನೀಡಿದೆ.

ಪ್ರಕರಣಗಳ ವಿವರ:
ಉಡುಪಿಯ ಪ್ರಕಾಶ್ ಆಚಾರ್ಯ ಮಾಲಕತ್ವದ ವಿಶ್ವ ಕನ್ಸ್‌ಟ್ರಕ್ಷನ್ ಸಂಸ್ಥೆಯು ಮಂಗಳೂರಿನ ಕೆನ್ ಎಂಟರ್‌ಪ್ರೈಸಸ್‌ನವರಿಂದ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ಸಾಮಗ್ರಿಗಳನ್ನು ಪಡೆದುಕೊಂಡಿತ್ತು. ಈ ಸಾಮಗ್ರಿಗಳಿಗೆ ಸಂಬಂಧಿಸಿದಂತೆ ಬಾಡಿಗೆ ಹಾಗೂ ಇತರ ಮೊತ್ತವನ್ನು ಪಾವತಿಸುವಲ್ಲಿ ವಿಫಲವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಸಾಕಷ್ಟು ಬಾರಿ ಹಣದ ಬೇಡಿಕೆ ಇಟ್ಟಿದ್ದರೂ ಹಣ ನೀಡದ ಹಿನ್ನೆಲೆಯಲ್ಲಿ ಭದ್ರತೆಗಾಗಿ ನೀಡಿದ್ದ ಚೆಕ್ಕನ್ನು ನಗದೀಕರಣಕ್ಕೆ ಬ್ಯಾಂಕಿಗೆ ಹಾಜರುಪಡಿಸಲಾಯಿತು. ಚೆಕ್ ಅಮಾನ್ಯಗೊಂಡ ಕಾರಣ, ಮಂಗಳೂರಿನ 9ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು.

2024ರ ಫೆಬ್ರವರಿಯಲ್ಲಿ ದಾಖಲಾದ ಪ್ರಕರಣವನ್ನು ಕ್ಷಿಪ್ರ ಗತಿಯ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಲಯ ಆರೋಪಿಗೆ 14.40 ಲಕ್ಷ ರೂ. ದಂಡ ಪಾವತಿಸುವಂತೆ ಆದೇಶ ಹೊರಡಿಸಿದೆ. ದಂಡದ ಮೊತ್ತ ಪಾವತಿಸುವಲ್ಲಿ ವಿಫಲರಾದರೆ, ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ದಂಡದ ಮೊತ್ತದಲ್ಲಿ 14.35 ಲಕ್ಷವನ್ನು ದೂರುದಾರರಿಗೆ ನೀಡಬೇಕು. ಜೈಲು ಶಿಕ್ಷೆ ಅನುಭವಿಸಿದರೂ ದೂರುದಾರರಿಗೆ ಪರಿಹಾರ ನೀಡುವ ಬಾಧ್ಯತೆಯಿಂದ ಮುಕ್ತರಾಗುವುದಿಲ್ಲ ಎಂದು ತೀರ್ಪಿನಲ್ಲಿ ಸ್ಪಷ್ಟಪಡಿಸಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಉಡುಪಿಯ ರವಿ ಕುಮಾರ್ ಎಂಬವರು ಮಂಗಳೂರಿನ ಕೆನ್ ಎಂಟರ್‌ಪ್ರೈಸಸ್‌ನಿಂದ ಕಟ್ಟಡ ನಿರ್ಮಾಣದ ಸಾಮಗ್ರಿ ಪಡೆದುಕೊಂಡು, ಅದರ ಮೊತ್ತವನ್ನು ಪಾವತಿಸಿರಲಿಲ್ಲ. ಅವರು ನೀಡಿದ್ದ ಚೆಕ್ ಅಮಾನ್ಯಗೊಂಡಿತ್ತು.

ಇದನ್ನು ಓದಿದ್ದೀರಾ? ದ.ಕ.ಜಿಲ್ಲೆಯ ಎಲ್ಲ ‘ಟಾರ್ಗೆಟೆಡ್ ಮರ್ಡರ್‌’ಗಳ ಬಗ್ಗೆ ಎಸ್‌ಐಟಿ ರಚಿಸಿದರೆ ವಾಸ್ತವ ಬಯಲು: ರಮಾನಾಥ ರೈ

ಕೆನ್‌ ಸಂಸ್ಥೆಯ ಮಾಲೀಕರು ರವಿ ಕುಮಾರ್ ಅವರ ವಿರುದ್ಧ 9ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಒಂದೇ ವರ್ಷದೊಳಗೆ ಪ್ರಕರಣವನ್ನು ಇತ್ಯರ್ಥ ಮಾಡಿದ ನ್ಯಾಯಾಲಯ, ಆರೋಪಿಗೆ 4.05 ಲಕ್ಷ ರೂ. ದಂಡ ವಿಧಿಸಿದೆ. ದಂಡ ವಿಧಿಸಲು ವಿಫಲರಾದರೆ ನಾಲ್ಕು ತಿಂಗಳು ಜೈಲು ಶಿಕ್ಷೆಯನ್ನು ವಿಧಿಸಿದೆ. ದಂಡದ ಮೊತ್ತದಲ್ಲಿ 4 ಲಕ್ಷ ರೂ.ಗಳನ್ನು ದೂರುದಾರರಿಗೆ ಪರಿಹಾರವಾಗಿ ನೀಡಲು ಆದೇಶಿಸಲಾಗಿದೆ.

ಎರಡೂ ಪ್ರಕರಣಗಳಲ್ಲಿ ದೂರುದಾರರ ಪರವಾಗಿ ಮಂಗಳೂರಿನ ವಕೀಲರಾದ ಸುಕೇಶ್ ಕುಮಾರ್ ಶೆಟ್ಟಿ ಅವರು ವಾದಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...