ಮಂಗಳೂರು | ಜಿಲ್ಲೆಯಲ್ಲಿ 3750 ಹೆಕ್ಟರ್‌ನಲ್ಲಿ ಬಿತ್ತನೆ ಕಾರ್ಯ ಪೂರ್ಣ: ಹೊನ್ನಪ್ಪ ಗೌಡ

Date:

ಕರಾವಳಿಯಲ್ಲಿ ಭಾಗದಲ್ಲಿ ಮಳೆ ಅವಲಂಬಿಸಿ ಭತ್ತ ಬೆಳೆಯುವವರೇ ಹೆಚ್ಚು. ಮಳೆಗಾಲ ಪ್ರಾರಂಭವಾಗಿ ಒಂದೂವರೆ ತಿಂಗಳು ಕಳೆದರೂ ಇತ್ತ ಬೇಸಾಯ ಮಾತ್ರ ಮಂದಗತಿಯಲ್ಲಿ ಸಾಗುತ್ತಿದೆ. ದ.ಕ. ಜಿಲ್ಲೆಯಲ್ಲಿ ಒಟ್ಟು 9,750 ಹೆಕ್ಟರ್‌ಗಳಲ್ಲಿ ಭತ್ತ ಬೆಳೆಸುವ ಗುರಿ ಹೊಂದಿದ್ದು, ಇದರಲ್ಲಿ ಈವರೆಗೆ 3,750 ಹೆಕ್ಟರ್ ಭೂಮಿಯಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಇನ್ನೂ ಸುಮಾರು 6 ಸಾವಿರ ಹೆಕ್ಟರ್ ಭೂಮಿಯಲ್ಲಿ ಬಿತ್ತನೆ ಬಾಕಿ ಇದೆ.

ಜಿಲ್ಲೆಯ ಮೂಲ್ಕಿ ತಾಲ್ಲೂಕಿನಲ್ಲಿ 850 ಹೆಕ್ಟರ್‌ನಲ್ಲಿ ಈಗಾಗಲೇ ಬಿತ್ತನೆಯಾಗಿದ್ದು, ಬೇರೆ ತಾಲ್ಲೂಕುಗಳಿಗೆ ಹೋಲಿಸಿದರೆ ಈ ಬಾರಿ ಸುಳ್ಯ ತಾಲ್ಲೂಕಿನಲ್ಲಿ ಅತೀ ಕಡಿಮೆ 55 ಹೆಕ್ಟೇರ್‌ನಲ್ಲಿ ಮಾತ್ರವೇ ಬಿತ್ತನೆ ಪೂರ್ಣಗೊಂಡಿದೆ. ಜಿಲ್ಲೆಯಲ್ಲಿ ಒಟ್ಟು 508.75 ಕ್ವಿಂಟಾಲ್ ಬಿತ್ತನೆ ಬೀಜ ವಿತರಿಸಲಾಗಿದ್ದು, 177 ಕ್ವಿಂಟಾಲ್ ಇನ್ನೂ ಇಲಾಖೆಯಲ್ಲಿ ದಾಸ್ತಾನು ಇದೆ.

ಇದನ್ನೂ ಓದಿ: ಮಂಗಳೂರು | ಜು.14-17ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚಿನ ವರ್ಷಗಳಲ್ಲಿ ಬಿತ್ತನೆಗಿಂತ ನೇಜಿ ನಾಟಿಯತ್ತ ರೈತರ ಒಲವು ಹೆಚ್ಚಾಗಿದೆ. ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಬರುತ್ತಿರುವುದರಿಂದ ಇತ್ತ ಬೇಸಾಯಕ್ಕೆ ಅಡ್ಡಿ ಆಗಿದೆ. ವಿಪರೀತವಾಗಿ ಮಳೆ ಆಗುವುದರಿಂದ ನಾಟಿ ಮಾಡಲು ಸಾಧ್ಯವಾಗುತ್ತಿಲ್ಲ. ಮಳೆ ಹೆಚ್ಚಾದರೆ ನಾಟಿಯ ಸಸಿಗಳು ನೀರಿನಲ್ಲಿ ಕೊಚ್ಚಿ ಹೋಗುತ್ತವೆ. ಇದರ ಜತೆಗೆ ಗೊಬ್ಬರ ಮಿಶ್ರಿತ ನೀರು ಹರಿದು ಹೋಗುತ್ತದೆ. ನಾಟಿ ವೇಳೆ ಎರಡು ದಿನಗಳ ಕಾಲ ನೀರಿನ ಮಟ್ಟ ಕಡಿಮೆ ಇರಬೇಕು. ಆದರೆ ಪ್ರಸ್ತುತ ಸುರಿಯುವ ಮಳೆಯಿಂದ ನೀರು ಹೆಚ್ಚಳವಾಗಿ ನಾಟಿ ಸಾಧ್ಯವಾಗುತ್ತಿಲ್ಲ ಎಂದು ರೈತರು ಅಳಲು ತೊಡಿಕೊಂಡರು.

ಇದನ್ನೂ ಓದಿ: ಕೈದಿಗೆ ಮಾದಕ ವಸ್ತು ಪೂರೈಕೆ: ಮಂಗಳೂರು ಜೈಲು ಮೇಲೆ ಪೊಲೀಸ್-ಎಸ್‌ಎಎಫ್‌ ತಂಡ ದಾಳಿ

ರೈತರಿಗೆ ಅಗತ್ಯ ಇರುವ ರಸಗೊಬ್ಬರನ್ನು ಈಗಾಗಲೇ ದಾಸ್ತಾನು ಮಾಡಲಾಗಿದೆ. ಜುಲೈ ಅಂತ್ಯದ ವೇಳೆಗೆ ಬಿತ್ತನೆ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ದ.ಕ.ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಹೊನ್ನಪ್ಪ ಗೌಡ ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...