ಮಂಗಳೂರು | ನ್ಯಾಯಬೆಲೆ ಅಂಗಡಿ ಬಗ್ಗೆ ತಪ್ಪು ಸಂದೇಶ; ಸರ್ಕಾರ ಯಾವುದೇ ಸ್ಪಷ್ಟನೆ ನೀಡುತ್ತಿಲ್ಲ: ಕೇಶವಮೂರ್ತಿ

Date:

ಕಟೀಲು ಸಮೀಪದ ಕೊಂಡೆಮೂಲ ಎಂಬಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ನಡೆದ ಜಗಳದ ಬಗ್ಗೆ ಸರ್ಕಾರವೇ ಸ್ವಷ್ಟನೇ ನೀಡಬೇಕಿತ್ತು. ಆದರೆ ಇಲ್ಲಿಯವರೆಗೂ ಆಹಾರ ಇಲಾಖೆಯ ಅಧಿಕಾರಿಗಳಾಗಲೀ ಅಥವಾ ಸರ್ಕಾರ ಯಾವುದೇ ರೀತಿಯ ಸ್ಪಷ್ಟನೆ ನೀಡಿಲ್ಲ. ಇದರಿಂದಾಗಿ ರಾಜ್ಯದ ಜನತೆಗೆ ನ್ಯಾಯಬೆಲೆ ಅಂಗಡಿ ಬಗ್ಗೆ ತಪ್ಪು ಸಂದೇಶ ಹೋಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾ ಅಧ್ಯಕ್ಷ ಕೇಶವಮೂರ್ತಿ ನೋವು ತೋಡಿಕೊಂಡಿದ್ದಾರೆ.

ಬುಧವಾರ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವ್ಯಕ್ತಿಯೊಬ್ಬ ಪಡಿತರ ಪಡೆಯಲು ಬಂದ ಸಂದರ್ಭದಲ್ಲಿ ಗೋಣಿಚೀಲವನ್ನು ಉಚಿತವಾಗಿ ನೀಡಬೇಕು ಎಂದು ಬೆದರಿಸಿ ವಿಡಿಯೋ ಮಾಡಿಕೊಂಡು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಗೋಣಿಚೀಲವೂ ಅಂಗಡಿ ಮಾಲೀಕರಿಗೆ ಸೇರಿದ್ದು ಎಂದು ಸರ್ಕಾರವೇ 2018ರಲ್ಲಿ ಆದೇಶ ನೀಡಿದೆ. ಇದನ್ನು ತಿಳಿಯದೇ ವ್ಯಕ್ತಿ ಅಂಗಡಿ ಮಾಲೀಕರನ್ನು ಬೆದರಿಸಿ ವಿಡಿಯೋ ಮಾಡಿಕೊಂಡು ಜಾಲತಾಣದಲ್ಲಿ ಹರಿಬಿಟ್ಟು ನ್ಯಾಯಬೆಲೆ ಅಂಗಡಿ ಬಗ್ಗೆ ತಪ್ಪು ಸಂದೇಶ ನೀಡಿದ್ದಾನೆ. ಇದರ ಬಗ್ಗೆ ಆಹಾರ ಇಲಾಖೆಯ ಅಧಿಕಾರಿಗಳು ಪ್ರಕಟಣೆ ನೀಡಿ ಸ್ಪಷ್ಟನೆ ನೀಡಬಹುದಿತ್ತು. ಅದರೇ ಇದುವರೆಗೂ ಆ ಕೆಲಸ ಆಗಿಲ್ಲ. ಇದ್ದರಿಂದ ರಾಜ್ಯದ ಜನರಿಗೆ ನ್ಯಾಯಬೆಲೆ ಅಂಗಡಿಯ ತಪ್ಪು ಸಂದೇಶ ಹೋಗುತ್ತಿದೆ ಎಂದು ತಿಳಿಸಿದರು.

WhatsApp Image 2025 09 03 at 1.28.31 PM

ಆಹಾರ ಇಲಾಖೆಯಲ್ಲಿ ಮೂಲ ಅಧಿಕಾರಿಗಳೇ ಇಲ್ಲ. ಬೇರೆ ಬೇರೆ ಇಲಾಖೆಯಿಂದ ಇಲ್ಲಿಗೆ ವರ್ಗಾವಣೆಯಾಗಿ ಬಂದಿರುವವರೇ ಹೆಚ್ಚು. ಅವರಿಗೆ ಪಡಿತರ ವಿತರಣೆ ಮಾಡುವವರ ಸಮಸ್ಯೆ ಏನು ಎಂದು ಗೊತ್ತಿರುವುದಿಲ್ಲ. ಅಧಿಕಾರಿಗಳ ಬಳಿ ನಮ್ಮ ಸಮಸ್ಯೆ ಹೇಳಿಕೊಂಡರೂ ಕೂಡ ಅವರು ಈ ಬಗ್ಗೆ ಗಮನ ಹರಿಸುತ್ತಿಲ್ಲ. ಪಡಿತರ ವಿತರಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರವೇ ಸಿಗುತ್ತಿಲ್ಲ ಎಂದು ಕೇಶವಮೂರ್ತಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಂಡೆಮೂಲದ ಪಡಿತರ ಅಂಗಡಿಯಲ್ಲಿ ನಡೆದ ಘಟನೆಯನ್ನು ವಿವರಿಸಿದ ಸಂತ್ರಸ್ತ ಮಹಿಳೆ ದೀಪಾ ನಾಯಕ್‌ ಅವರು, ನಮ್ಮ ಮಾವನ ಹೆಸರಿನಲ್ಲಿರುವ ನ್ಯಾಯಬೆಲೆ ಅಂಗಡಿಗೆ ಸ್ಥಳೀಯರಾದ ಸತೀಶ್‌ ಮತ್ತು ವಿಜಯ ಎಂಬುವವರು ಪ್ರತಿ ತಿಂಗಳು ಉಚಿತವಾಗಿ ಗೋಣಿಚೀಲ ನೀಡುವಂತೆ ಒತ್ತಡ ಹಾಕುತ್ತಾರೆ. ಅದು ನಮಗೆ ಸೇರಿದ್ದು ಎಂದು ಹೇಳಿದರೂ ಕೂಡ ಕೇಳುವುದಿಲ್ಲ. ಗೋಣಿಚೀಲವನ್ನು ಅಕ್ರಮವಾಗಿ ಬಳಸಿಕೊಳ್ಳುತ್ತಿದ್ದೀರಾ ಎಂದು ಆರೋಪ ಮಾಡುತ್ತಾರೆ. ಜತೆಗೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆ ಕೂಡ ನೀಡುತ್ತಾರೆ ಎಂದು ತಿಳಿಸಿದರು.

“ಈ ಹಿಂದೆ ಕೂಡ ಹಲವು ಬಾರಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕಿದ್ದಾರೆ. ಈ ಬಾರಿ ಅವರು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಲದಲ್ಲಿ ಹಾಕಿದ್ದಾರೆ. ಇದರ ಪೂರ್ವಾಪರ ಯೋಚಿಸಿದೆ ಕೆಲವು ಮಾಧ್ಯಮಗಳು ಸುದ್ದಿಯನ್ನು ಕೂಡ ಪ್ರಸಾರ ಮಾಡಿದೆ. ಇದರ ಬಗ್ಗೆ ಈಗಾಗಲೇ ಬಜಪೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಇದರ ಜತೆಗೆ ಫುಡ್ ಇನ್ಸ್‌ಪೆಕ್ಟರ್, ತಹಶೀಲ್ದಾರ್‌, ಕಮಿಷನರ್‌ ಸೇರಿದಂತೆ ಹಲವರಿಗೆ ದೂರು ನೀಡಿದ್ದೇನೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

“ಗೋಣಿಚೀಲಕ್ಕಾಗಿ ನಮ್ಮೊಂದಿಗೆ ಜಗಳ ಮಾಡಿ, ವಿಡಿಯೋ ಮಾಡಿಕೊಂಡಿರುವ ಸತೀಶ್‌ ಅವರಿಗೆ ಎರಡು ಕಾರು ಇದೆ. ಅವರಿಗೆ ಸರ್ಕಾರ ಬಿಪಿಎಲ್ ಕಾರ್ಡ್‌ ನೀಡಿದೆ. ಇದರ ಬಗ್ಗೆ ಈಗಾಗಲೇ ಸರ್ಕಾರಕ್ಕೆ‌ ಮಾಹಿತಿ ನೀಡಲಾಗಿದೆ” ಎಂದು ದೀಪಾ ನಾಯಕ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪಡಿತರ ವಿತರಕರ ಸಂಘದ ಕೋಶಾಧಿಕಾರಿ ಫೈರೋಝ್, ಸಂಘದ ಕಾರ್ಯದರ್ಶಿ ಭಾಸ್ಕರ್‌ ಸಾಲ್ಯಾನ್, ಮಂಜುನಾಥ್ ನಾಯಕ್‌‌, ನಿತ್ಯಾನಂದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...