ಮಂಗಳೂರು | ಧಕ್ಕೆಯಲ್ಲಿ ಕಾರ್ಮಿಕನ ದುರ್ಮರಣ, ಸಿಐಟಿಯು ತೀವ್ರ ಆಕ್ರೋಶ

Date:

ಮಂಗಳೂರು ಮಿನುಗಾರಿಕಾ ಧಕ್ಕೆಯಲ್ಲಿ ಹಳೆಯ ಲೈಟ್ ಕಂಬ ಕುಸಿದು ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ಅವರು ಮೃತಪಟ್ಟಿರುವುದು ಸಾಮಾನ್ಯ ಅಪಘಾತವಲ್ಲ; ಇದು ಜಿಲ್ಲಾಡಳಿತದ ನಿರ್ಲಕ್ಷ್ಯದಿಂದ ಸಂಭವಿಸಿದ ಕಾರ್ಮಿಕನ ಘೋರ ಹತ್ಯೆ ಎಂದು ಕೇಂದ್ರ ಕಾರ್ಮಿಕ ಸಂಘಟನೆ ಯಾದ CITU ದ.ಕ.ಜಿಲ್ಲಾ ಸಮಿತಿಯು ತೀಕ್ಷ್ಣವಾಗಿ ಆರೋಪಿಸಿದೆ.

ಹಲವು ವರ್ಷಗಳ ಕಾಲ ಧಕ್ಕೆಯಲ್ಲಿ ದುಡಿಯುತ್ತಿರುವ ಕಾರ್ಮಿಕರು ಹಳೆಯ, ತುಕ್ಕು ಹಿಡಿದ ಕಂಬಗಳ ಬಗ್ಗೆ ಅನೇಕ ಬಾರಿ ಎಚ್ಚರಿಕೆ ನೀಡಿದರೂ ಸಂಬಂಧಿತ ಮಿನುಗಾರಿಕೆ ಇಲಾಖೆಯ ಅಧಿಕಾರಿಗಳು ಕಿವಿಗೊಡದೇ ಇದ್ದುದ್ದರ ಪರಿಣಾಮವಾಗಿ ಇಂದು ಒಬ್ಬ ಕಾರ್ಮಿಕನ ಪ್ರಾಣವನ್ನು ಕಸಿದುಕೊಂಡಿದೆ. ಮುರುಗನ್ ಅವರು ಮೀನು ಹೊತ್ತು ಬಂದು ಕುಳಿತಿದ್ದ ಸಂದರ್ಭದಲ್ಲೇ ಕಂಬ ಕುಸಿದು ತಲೆಗೆ ಬಲವಾದ ಪೆಟ್ಟು ಬಿದ್ದು ಮೃತಪಟ್ಟಿದ್ದಾರೆ. ಇದು ನೇರವಾಗಿ ಜಿಲ್ಲಾಡಳಿತದ ವೈಫಲ್ಯವಾಗಿದೆ.ಧಕ್ಕೆಯಲ್ಲಿ ಕೆಲಸ ಮಾಡುವ ಕಾರ್ಮಿಕರ ಸುರಕ್ಷತೆ, ಆರೋಗ್ಯ, ವಿಮೆ, ತುರ್ತು ಚಿಕಿತ್ಸಾ ವ್ಯವಸ್ಥೆ—ಇವುಗಳ ಬಗ್ಗೆ ಯಾವುದೇ ಸಮರ್ಪಕ ವ್ಯವಸ್ಥೆ ಇಲ್ಲದೆ ಕಾರ್ಮಿಕರನ್ನು ಅಪಾಯದ ಮಧ್ಯೆ ದುಡಿಯಲು ಬಲವಂತಪಡಿಸಲಾಗುತ್ತಿದೆ. ಕಾರ್ಮಿಕರ ಜೀವದ ಬೆಲೆಯನ್ನು ಲೆಕ್ಕಿಸದ ಈ ಅಮಾನುಷ ವ್ಯವಸ್ಥೆಯನ್ನು ಸಿಐಟಿಯು ತೀವ್ರವಾಗಿ ಖಂಡಿಸುತ್ತದೆ.ಮೃತ ಮುರುಗನ್ ಕುಟುಂಬಕ್ಕೆ ಕನಿಷ್ಠ ₹25 ಲಕ್ಷ ಪರಿಹಾರ ನೀಡಬೇಕು.
ಧಕ್ಕೆಯ ಸಂಪೂರ್ಣ ಸುರಕ್ಷತಾ ಪರಿಶೀಲನೆ ನಡೆಸಿ ಅಪಾಯಕಾರಿ ಕಂಬಗಳನ್ನು ಬದಲಾಯಿಸಬೇಕು ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಅಮಾನತು ಮಾಡಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಧಕ್ಕೆಯಲ್ಲಿ ದುಡಿಯುವ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ನೋಂದಣಿ ಮಾಡಿ, ವಿಮೆ ಮತ್ತು ಸುರಕ್ಷತಾ ಭದ್ರತೆ ಕಡ್ಡಾಯಗೊಳಿಸಬೇಕು.ಈ ಬಗ್ಗೆ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ತೀವ್ರವಾದ ಹೋರಾಟವನ್ನು ನಡೆಸುವುದು ಅನಿವಾರ್ಯವಾಗಲಿದೆ ಎಂದು CITU ದ.ಕ. ಜಿಲ್ಲಾ ಸಮಿತಿಯು ಎಚ್ಚರಿಕೆ ನೀಡುತ್ತದೆ ಎಂದು ಸಿಐಟಿಯು ದ.ಕ ಜಿಲ್ಲಾ ಸಮಿತಿ ಖಜಾಂಚಿ ಯೋಗೀಶ್ ಜಪ್ಪಿನಮೊಗರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...