ಮಂಗಳೂರು | ಬ್ಯಾರಿ ಸಾಹಿತ್ಯಕ್ಕೆ ಹೊಸ ಶಕ್ತಿ ತುಂಬಿದ ತಾಲೂಕು ಸಮ್ಮೇಳನ

Date:

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನವು ಗುರುಪುರ ಕೈಕಂಬದ ಮೇಗಾ ಪ್ಲಾಜಾ ಸಭಾಂಗಣದಲ್ಲಿ ಇಂದು ನಡೆಯಿತು.

ಕಾರ್ಯಕ್ರಮಕ್ಕೂ ಮುನ್ನ ನಗರದ ಸಬೀಲುಲ್ ಹುದಾ ಅಲ್‌ಬಿರ್ ಶಾಲಾ ವಠಾರದಿಂದ ಸಭಾಂಗಣದವರೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಜರುಗಿತು. ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಹಾಜಿ ಎಂ.ಹೆಚ್. ಮೊಹಿದಿನ್ ಅಡ್ಡೂರವರು ದಫ್ ಬಾರಿಸುವ ಮೂಲಕ ಮೆರವಣಿಗೆಯನ್ನು ಉದ್ಘಾಟಿಸಿದರು. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಹೆಚ್. ಧ್ವಜಾರೋಹಣ ನೆರವೇರಿಸಿ ಬ್ಯಾರಿ ಸಾಹಿತ್ಯ ಅಕಾಡೆಮಿಯ ಧ್ವಜದ ಮಹತ್ವವನ್ನು ವಿವರಿಸಿದರು.

1008992177

ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಜೋಕಿಂ ಸ್ಪ್ಯಾನಿ ಅಲ್ವಾರಿಸ್, ಬ್ಯಾರಿ ಭಾಷೆಗೆ ಇನ್ನೂ ಜಾಗತೀಕರಣದ ಭೀತಿ ಎದುರಾಗಿಲ್ಲ; ಆದರೆ ಕೊಂಕಣಿ ಭಾಷೆ ಜಾಗತೀಕರಣದ ಪ್ರಭಾವಕ್ಕೆ ಒಳಗಾಗಿದೆ ಎಂದು ಅಭಿಪ್ರಾಯಪಟ್ಟರು. ಸ್ವಂತ ಲಿಪಿ ಇಲ್ಲ ಎಂಬ ಕಾರಣಕ್ಕೆ ಯಾವುದೇ ಭಾಷೆಯನ್ನು ತಿರಸ್ಕರಿಸಬಾರದು. ಕನ್ನಡ ಲಿಪಿಯಲ್ಲಿ ಬ್ಯಾರಿ ಸಾಹಿತ್ಯ ಉತ್ತಮವಾಗಿ ಬೆಳೆಯುತ್ತಿದೆ. ಲಿಪಿಯಿಲ್ಲದೆ ಭಾಷೆ ಬೆಳೆಯುವುದಕ್ಕೆ ಅಡ್ಡಿಯಾಗುವುದಿಲ್ಲ. ತುಳು ಭಾಷೆಗೆ ಲಿಪಿ ಇದ್ದರೂ ಹೆಚ್ಚಿನ ಬರವಣಿಗೆ ಕನ್ನಡ ಲಿಪಿಯಲ್ಲಿಯೇ ನಡೆಯುತ್ತಿದೆ ಎಂದರು. ಭಾಷೆ ಉಳಿಯಬೇಕಾದರೆ ಮಕ್ಕಳೊಂದಿಗೆ ನಮ್ಮ ಭಾಷೆಯಲ್ಲೇ ಮಾತನಾಡಬೇಕು, ದೇವರಲ್ಲಿ ಬೇಡುವಾಗಲೂ ನಮ್ಮ ಭಾಷೆಯಲ್ಲಿಯೇ ಪ್ರಾರ್ಥಿಸಬೇಕು ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1008992176

ಸಮ್ಮೇಳನಾಧ್ಯಕ್ಷ ಹಾಗೂ ಹಿರಿಯ ಸಾಹಿತಿ ಅಬ್ದುಲ್ ರಹಿಮಾನ್ ಕುತ್ತೆತ್ತೂರು ಮಾತನಾಡಿ, ಕನ್ನಡ ಲಿಪಿಯಲ್ಲಿ ಬ್ಯಾರಿ ಸಾಹಿತ್ಯ ರಚನೆ ಆರಂಭವಾದ ಬಳಿಕ ಭಾಷೆಗೆ ಹೊಸ ದಿಕ್ಕು ಸಿಕ್ಕಿದೆ ಎಂದರು. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಬ್ಯಾರಿ ಅಧ್ಯಯನ ಪೀಠ ಸ್ಥಾಪನೆಯಾದ ನಂತರ ಭಾಷೆಗೆ ಇನ್ನಷ್ಟು ಬಲ ಬಂದಿದೆ. ಅನೇಕ ಬ್ಯಾರಿ ಶಬ್ದಗಳು ಈಗಾಗಲೇ ಅಳಿದು ಹೋಗಿರುವುದು ವಿಷಾದಕರ, ಉಳಿದಿರುವ ಶಬ್ದಗಳನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು. ತಾಯಿಬಾಷೆಯ ಮೇಲಿನ ಪ್ರೀತಿ ಬೆಳೆಯಬೇಕು. ಇಂದು ಬಿಡುಗಡೆಯಾದ ಪುಸ್ತಕಗಳೇ ಬ್ಯಾರಿ ಭಾಷೆಯ ಮೇಲಿನ ಕೀಳರಿಮೆ ಇಲ್ಲದಿರುವುದಕ್ಕೆ ಸಾಕ್ಷಿ ಎಂದರು. ಹೊಸ ಸಾಹಿತ್ಯಗಳ ಕುರಿತು ಚರ್ಚೆ, ವಿಚಾರಗೋಷ್ಠಿ, ಸಂವಾದಗಳು ನಡೆಯಬೇಕು, ಜೊತೆಗೆ ಬ್ಯಾರಿ ಸಂಸ್ಕೃತಿ, ಆಚರಣೆ, ಪರಂಪರೆಗಳ ಸಮಗ್ರ ದಾಖಲೀಕರಣ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

1008992186

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಹೆಚ್, ಬ್ಯಾರಿ ಭಾಷೆಯ ಆತ್ಮವೇ ಪ್ರೀತಿ ಮತ್ತು ಸಹಕಾರ, ಅದೇ ಬ್ಯಾರಿ ಸಂಸ್ಕೃತಿಯ ಜೀವಾಳ ಎಂದು ಹೇಳಿದರು. ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವೆಂದು ಹೇಳಿ ಸಮ್ಮೇಳನದ ನಿರ್ಣಯಗಳನ್ನು ವಾಚಿಸಿದರು.

ಸಮ್ಮೇಳನದ ನಿರ್ಣಯಗಳು
ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದಲ್ಲಿ ಮಂಜೂರಾದ ಜಾಗದಲ್ಲಿ ‘ಬ್ಯಾರಿ ಭವನ’ ಶೀಘ್ರ ನಿರ್ಮಾಣ, ಮಂಗಳೂರು ವಿಶ್ವವಿದ್ಯಾಲಯದ ಬ್ಯಾರಿ ಅಧ್ಯಯನ ಪೀಠಕ್ಕೆ ತಕ್ಷಣ ಅನುದಾನ ಬಿಡುಗಡೆ, ತುಳು ಕೊಂಕಣಿಯಂತೆ ಬ್ಯಾರಿಯನ್ನು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಹೆಚ್ಚುವರಿ ಐಚ್ಛಿಕ ಭಾಷೆಯಾಗಿ ಕಲಿಸುವ ಕ್ರಮ, ಮಂಗಳೂರು ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಬ್ಯಾರಿ ಕಾರ್ಯಕ್ರಮಗಳ ಪ್ರಸಾರ, ವಿಶ್ವವಿದ್ಯಾಲಯಗಳ ಯುವಜನರಿಂದ ಬ್ಯಾರಿ ಭಾಷೆ ಇತಿಹಾಸ ಜನಪದ ಸಂಸ್ಕೃತಿ ಕುರಿತ ಸಂಶೋಧನೆಗೆ ಉತ್ತೇಜನ, ಮನೆಮನೆಗಳಲ್ಲಿ ಬ್ಯಾರಿ ಭಾಷೆಯ ಬಳಕೆ ಕಡ್ಡಾಯಗೊಳಿಸುವ ಮನೋಭಾವ, ಶಿಕ್ಷಣ ಸಂಸ್ಥೆಗಳಲ್ಲಿ ಭಾಷೆ ಸಾಹಿತ್ಯ ಕಲೆಗಳ ಅಭಿರುಚಿ ಮೂಡಿಸುವ ಕಾರ್ಯಕ್ರಮಗಳ ಆಯೋಜನೆ.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಸುಮಾರು 25 ಲಕ್ಷ ಜನರು ಬ್ಯಾರಿ ಭಾಷೆ ಮಾತನಾಡುತ್ತಾರೆ. ಭಾಷೆಯನ್ನು ಉಳಿಸಿ ಬೆಳೆಸುವ ಕಾರ್ಯ ಅತ್ಯಂತ ಅಗತ್ಯ. ಬ್ಯಾರಿ ಭಾಷೆಯಲ್ಲಿ ಹೆಚ್ಚು ಸಾಹಿತ್ಯ ಹೊರಬರಬೇಕು ಎಂದು ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರನಾಥ್ ಗಟ್ಟಿ ಕಾಪಿಕಾಡ್ ಮಾತನಾಡಿದರು.

1008992188

ಈ ಸಂದರ್ಭದಲ್ಲಿ ಶಮೀಮಾ ಕುತ್ತಾರ್ ಅವರ ಪಡಿಞ್ಞಾರೊ ಪೂ (ಕಥಾ ಸಂಕಲನ), ಹಸೀನ ಮಲ್ನಾಡ್ ಅವರ ಅವ ಮಿನ್ನಾಂಪುಲು, ಬಶೀರ್ ಅಹ್ಮದ್ ಬೆಳ್ಳಾಯಿರು ಅವರ ಬೆಲ್‌ಬ, ಎನ್.ಎಂ. ಹನೀಫ್ ನಂದರಬೆಟ್ಟು ಅವರ ಸಂಪುಕಾತ್, ಹೈದರಲಿ ಕಾಟಿಪಳ್ಳ ಅವರ ನಸೀಆತ್ ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು.

ಸಮ್ಮೇಳನಾಧ್ಯಕ್ಷರ ಭಾಷಣದ ಮೇಲೆ ನಡೆದ ಚರ್ಚಾಗೋಷ್ಠಿಯಲ್ಲಿ ಪ್ರಾಧ್ಯಾಪಕ ಹೈದರ್ ಅಲಿ, ಪತ್ರಕರ್ತ ಏ.ಕೆ. ಕುಕ್ಕಿಲ, ಅಬುಧಾಬಿ ಬ್ಯಾರೀಸ್ ವೆಲ್ವೇರ್ ಫೋರಂ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ ಹಾಗೂ ಅಕಾಡೆಮಿ ಸದಸ್ಯೆ ಹಪ್ಸಾ ಬಾನು ಅಭಿಪ್ರಾಯ ಹಂಚಿಕೊಂಡರು. ಮಂಗಳೂರು ವಿಶ್ವವಿದ್ಯಾಲಯದ ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕರ್ ಸಿದ್ದೀಕ್ ನಿರೂಪಿಸಿದರು.

1008992196

ಮಧ್ಯಾಹ್ನದ ನಂತರ ಹಿರಿಯ ಸಾಹಿತಿ ಮುಹಮ್ಮದ್ ಬಡ್ಡೂರು ಅಧ್ಯಕ್ಷತೆಯಲ್ಲಿ ಬ್ಯಾರಿ ಕವಿಗೋಷ್ಠಿ ನಡೆಯಿತು. ಬದ್ರುದ್ದೀನ್ ಕೂಳೂರು, ಖಲಂದರ್ ಬೀವಿ, ಅಮಾನುಲ್ಲಾ ಅಸ್ಪಾಕ್ ಅಹ್ಮದ್ ಕಾಟಿಪಳ್ಳ, ಶಾಹಿದಾ ಮಂಗಳೂರು, ಶಮೀಮ್ ಕುಟ್ಟಿಕಳ, ಅಸ್ಮತ್ ವಗ್ಗ, ನಾಫಿಲ ಶಬೀನ್ ಕೈಕಂಬ, ಮುಹಮ್ಮದ್ ಕುನ್ಹಿ ಮಾಸ್ಟರ್ ಅತ್ತೂರು ಕವನ ವಾಚಿಸಿದರು. ನಂತರದಲ್ಲಿ ಮೂಡಬಿದರೆಯ ಆಳ್ವಾಸ್ ಕಾಲೇಜಿನ ದಫ್ ತಂಡ ಹಾಗೂ ಬ್ಯಾರಿ ಹಾಡುಗಾರರ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು.

ಸಮಾರೋಪ ಸಮಾರಂಭದಲ್ಲಿ ದ.ಕ. ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ. ಖಾದರ್ ಶಾ, ಕಸಾಪಾ ದ.ಕ. ಜಿಲ್ಲಾಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬ್ಯಾರಿ ಇನ್ಫೋ.ಕಾಂನ ಮುಖ್ಯಸ್ಥ ಬಿ.ಎ. ಮುಹಮ್ಮದ್ ಅಲಿ ಸಮಾರೋಪ ಭಾಷಣ ಮಾಡಿದರು.

1008992187

ಸಮ್ಮೇಳನದಲ್ಲಿ ವಿವಿಧ ಕ್ಷೇತ್ರದ ಸಾಧಕರಾದ ಅಬ್ದುಲ್ ಲತೀಫ್ ಗುರುಪುರ, ಪಾತುಂಳೆ ಮೂಡುಶೆಡ್ಡೆ, ಎಂ.ಪಿ. ಉಸ್ಮಾನ್ ಮುಕ್ರಿಕ ಸೂರಲ್ಪಾಡಿ, ಸುಲೈಮಾನ್ ಗುರುಪುರ, ಸಲೀಕಾ ಸೂರಲ್ಪಾಡಿ, ಆರ್.ಎಸ್. ಅಶ್ರಫ್ ಸೂರಲ್ಪಾಡಿ, ಅಬ್ದುಲ್ ಶರೀಫ್ (ಸಾಮರಸ್ಯ ನ್ಯೂಸ್), ಮುಹಮ್ಮದ್ ನಝೀರ್ ಬಜೈ ಅವರನ್ನು ಸನ್ಮಾನಿಸಲಾಯಿತು.

ಇಸ್ಮಾಯಿಲ್ ಮೂಡುಶೆಡ್ಡೆ ನಿರ್ದೇಶನದ ಅಪ್ರೋಕರ್ ಪೋಕರ್ ಬ್ಯಾರಿ ನಾಟಕ ಹಾಗೂ ಗುರುಪುರದ ಎಂ.ಜಿ.ಎಂ. ತಾಲೀಮು ತಂಡದಿಂದ ತಾಲೀಮು ಪ್ರದರ್ಶನ ನಡೆಯಿತು.

1008992199

ಸ್ವಾಗತ ಸಮಿತಿಯ ಅಧ್ಯಕ್ಷ ಡಾ. ಇ.ಕೆ.ಎ. ಸಿದ್ದೀಕ್ ಅಡ್ಡೂರು, ಸಂಚಾಲಕರಾದ ತಾಜುದ್ದೀನ್ ಅಮ್ಮುಂಜೆ ಸೇರಿದಂತೆ ಅನ್ಸಾರ್ ಕಾಟಿಪಳ್ಳ, ಎಂ.ಜಿ. ಸಾಹುಲ್ ಹಮೀದ್ ಗುರುಪುರ, ಶಮೀರಾ ಜಹಾನ್, ಸಲೀಂ ಹಂಡೇಲ್, ಅಬ್ದುಲ್ ಜಲೀಲ್ ಅರಳ, ಎಂ.ಡಿ. ನವಾಝ್ ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ. ಪ್ರಾಸ್ತಾವಿಕ ಭಾಷಣ ಮಾಡಿದರು. ಅಕಾಡೆಮಿ ಸದಸ್ಯ ಯು.ಹೆಚ್. ಖಾಲಿದ್ ಉಜಿರೆ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...