ಅಪ್ರಾಪ್ತೆಯೊಂದಿಗೆ ಲಾಡ್ಜ್‌ನಲ್ಲಿ ಯುವಕನೋರ್ವ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಕಟಪಾಡಿ ಮಣಿಪುರದ ನಿವಾಸಿ ಶ್ರೀಶಾಂತ್ ಪೂಜಾರಿ (20) ಎಂಬಾತ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಮಣಿಪಾಲದ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಆರೋಪಿಯು ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಹಾಗೂ ಕಟಪಾಡಿಯ ಬಿಜೆಪಿ ಮುಖಂಡನ ಪುತ್ರನಾಗಿದ್ದಾನೆ.
ಮಾಹಿತಿ ತಿಳಿದ ಬಾಲಕಿಯ ಪೋಷಕರು ನೇರವಾಗಿ ಪೊಲೀಸರೊಂದಿಗೆ ಲಾಡ್ಜ್‌ಗೆ ತೆರಳಿ ದಾಳಿ ನಡೆಸಿದ್ದು, ಆ ವೇಳೆ ಆರೋಪಿಯು ಬಾಲಕಿಯೊಂದಿಗೆ ಸಿಕ್ಕಿಬಿದ್ದಿದ್ದಾನೆ. ಬಾಲಕಿಯನ್ನು ಕರೆದುಕೊಂಡು ಹೋಗುವ ವೇಳೆ ನಕಲಿ ಆಧಾರ್ ಕಾರ್ಡ್ ಬಳಸಿ ಗುರುತು ಮರೆಮಾಡಿದ್ದಾನೆ ಎನ್ನಲಾಗಿದೆ.
ಪೊಲೀಸರು ಶ್ರೀಶಾಂತ್ ಪೂಜಾರಿಯ ವಿರುದ್ಧ ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ವಿಚಾರಣೆ ವೇಳೆ ಇನ್ನೋರ್ವ ಬಾಲಕಿಯು ಕೂಡ ಆತನ ವಿರುದ್ಧ ದೂರು ದಾಖಲಿಸಿದ್ದಾಳೆ. ನನಗೂ ಮದುವೆ ಆಗುವುದಾಗಿ ನಂಬಿಸಿ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದ” ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾಳೆ.
ಮಣಿಪಾಲ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನ ವಿಧಿಸಿದೆ.





