ಮಣಿಪುರ ಸರ್ಕಾರದ ವಜಾಕ್ಕೆ ಸಿಐಟಿಯು ಆಗ್ರಹ

Date:

ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲಗೊಳಿಸಿ ಮೆರವಣೆಗೆ ಮಾಡಿ, ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೇಶವೇ ತಲೆ ತಗ್ಗಿಸುವಂತಾಗಿದೆ. ಈ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ರಾಜ್ಯದ ಹಲವೆಡೆ ಪ್ರತಿಭಟನೆಗಳು ನಡೆದಿವೆ.

ವಿಜಯನಗರ: ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಪ್ರತಿಭಟನೆ ನಡೆಸಿದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಕಾರ್ಯಕರ್ತರು, “ಮಣಿಪುರದಲ್ಲಿ ಮೂರು ತಿಂಗಳುಗಳಿಂದ ಹಿಂಸಾಚಾರ ನಡೆಯುತ್ತಿದೆ. ಮಹಿಳಾ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ ಕೃತ್ಯಗಳು ನಡೆಯುತ್ತಿವೆ. ಆದರೂ, ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡದೆ ಇರುವುದು ದುರಂತ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಬಿಜೆಪಿ, ಆರ್‌ಎಸ್‌ಎಸ್‌ ಶಕ್ತಿಗಳನ್ನು ಒಳಗೊಂಡಿರುವ ಪ್ಯಾಸಿಸ್ಟ್ ಆಡಳಿತ ಈ ವಿಷಯದಲ್ಲಿ ಮೌನವಾಗಿರುವುದು ನಾಚಿಕಿಗೇಡಿನ ಸಂಗತಿಯಾಗಿದೆ. ಮಣಿಪುರದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಜನವಾದಿ ಮಹಿಳಾ ಸಂಘದ ತಾಲೂಕು ಕಾರ್ಯದರ್ಶಿ ಸರ್ದಾರ್ ಹುಲಿಗೆಮ್ಮ, ಲಕ್ಷ್ಮಿದೇವಿ, ಅಂಬಿಕಾ, ರೇಖಾ, ಸಿಐಟಿಯು ಮಾರೆಕ್ಕ, ವಿಜಯ, ಸಂಗೀತ, ಕೋಟಗಿ ಮಲ್ಲಿಕಾರ್ಜುನ, ಆನಂದ ಹಾಗೂ ಇತರರು ಇದ್ದರು.

ರಾಯಚೂರು: ಜಿಲ್ಲೆಯ ಸಿಐಟಿಯು, ಕೆಪಿಆರ್‌ಎಸ್, ಎಐಎಡಬ್ಲ್ಯೂಯು ಸಂಘಟನೆಗಳ ಕಾರ್ಯಕರ್ತರು ಮಣಿಪುರದಲ್ಲಿನ ಹಿಂಸಾಚಾರ ಮತ್ತು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದನ್ನು ಖಂಡಿಸಿ ಶಾಂತಿ ಸೌಹಾರ್ದತೆಗಾಗಿ ಒತ್ತಾಯಿಸಿ, ಮಣಿಪುರ ಸರ್ಕಾರವನ್ನು ವಜಾ ಮಾಡಬೇಕು ಎಂದು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ರಾಯಚೂರು ಸಿಐಟಿಯು ಪ್ರತಿಭಟನೆ
ಮಣಿಪುರದ ಘಟನೆ ಖಂಡಿಸಿ ಸಿಐಟಿಯು ಪ್ರತಿಭಟನೆ

“ಮಣಿಪುರದಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿರುವ ಅಮಾನವೀಯ ಘಟನೆಯನ್ನು ಖಂಡಿಸಿದರು. ಮಣಿಪುರದಲ್ಲಿ ಕಳೆದ 2 ತಿಂಗಳಿನಿಂದ ವ್ಯಾಪಕ ಹಿಂಸಾಚಾರ ನಡೆಯುತ್ತಿದ್ದು, ಇಡೀ ರಾಜ್ಯವೇ ಹೊತ್ತಿ ಉರಿಯುತ್ತಿದೆ. ಮಹಿಳೆಯರು ಅತ್ಯಚಾರಕ್ಕೊಳಾಗಿ ಮಕ್ಕಳು ಅನಾಥರಾಗುತ್ತಿದ್ದಾರೆ. ಆದರೆ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ಮಣಿಪುರದಲ್ಲಿ ಶಾಂತಿ ಸ್ಥಾಪನೆಗಾಗಿ ಕ್ರಮ ಕೈಗೊಳ್ಳುತ್ತಿಲ್ಲ. ಕೇವಲ ಮಹಿಳೆಯರ ಬಗ್ಗೆ ಮಾತನಾಡುತ್ತಿರುವ ಕೇಂದ್ರ-ರಾಜ್ಯ ಸರ್ಕಾರಗಳು ಅಲ್ಲಿನ ಮಹಿಳೆಯರನ್ನು ರಕ್ಷಣೆ ಮಾಡುವಲ್ಲಿ ವಿಫಲವಾಗಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸಾಮೂಹಿಕ ಅತ್ಯಾಚಾರಕ್ಕೆ ಅಲ್ಲಿನ ಪೊಲೀಸರು ಪರೋಕ್ಷ ಬೆಂಬಲ ನೀಡಿದ್ದಾರೆ. ಮಣಿಪುರ ರಾಜ್ಯದಲ್ಲಿ ಇಂಟರ್‌ನೆಟ್ ಕಡಿತಗೊಳಿಸಿ ಅತ್ಯಾಚಾರ, ಹತ್ಯೆಗಳು, ಮಹಿಳೆಯರ ಬೆತ್ತಲೆ ಮೆರವಣಿಗೆಗಳಿಗೆ ಅಲ್ಲಿನ ಬಿಜೆಪಿ ಸರ್ಕಾರ ಕುಮ್ಮಕ್ಕು ನೀಡುವ ಮೂಲಕ ಅಲ್ಲಿ ಹಿಂಸಾಚಾರ ನಡೆಸಲು ಪರೋಕ್ಷ ಬೆಂಬಲ ನೀಡುತ್ತಿದೆ” ಎಂದು ಆರೋಪಿಸಿದರು.

“ಮಹಿಳೆಯರ ಮೇಲಿನ ಅತ್ಯಾಚಾರ ಘಟನೆ ನಡೆದು 2 ತಿಂಗಳಾದರೂ ಮಾತನಾಡದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯತನವನ್ನು ತೋರಿಸಿರುವುದು ಸರಿಯಾದ ಕ್ರಮವಲ್ಲ. ಸಾರ್ವಜನಿಕರ ರಕ್ಷಣೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಆರೋಪಿಗಳನ್ನು ಬಂಧಿಸುವಲ್ಲಿ ಮಣಿಪುರ ಸರ್ಕಾರ ವಿಫಲ; ದಸಂಸ ಕಿಡಿ

“ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಮಣಿಪುರದಲ್ಲಿ ಶಾಂತಿ ಸೌಹಾರ್ದತೆ ಕಾಪಾಡಬೇಕು. ಮಣಿಪುರದಲ್ಲಿ ಹಿಂಸಾಚಾರ ತಡೆಗಟ್ಟಲು ವಿಫಲವಾಗಿರುವ ಮಣಿಪುರದ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘಟನೆಗಳ ಮುಖಂಡರಾದ ಡಿ.ಎಸ್. ಶರಣಬಸವ, ಹೆಚ್. ಪದ್ಮಾ, ಕರಿಯಪ್ಪ ಹಚ್ಚೊಳ್ಳಿ, ರಂಗಪ್ಪ ಯಾಪಲದಿನ್ನಿ, ರಂಗನಗೌಡ, ವರಲಕ್ಷ್ಮಿ, ತಾಯಮ್ಮ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...