ರಾಯಚೂರು | ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣೆ

Date:


ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ಗುರುವಾರ ನಡೆದ ರಸ್ತೆ ಅಪಘಾತದಲ್ಲಿ ಸಾವಿಗೀಡಾದ ಸಮರ್ಥ ಮತ್ತು ಶ್ರೀಕಾಂತ ಎಂಬ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿಯ ಪರಿಹಾರದ ಚೆಕ್‌ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ವಿತರಿಸಿ, ಸಾಂತ್ವನ ಹೇಳಿದರು.

ಅಪಘಾತದಲ್ಲಿ ಮೃತಪಟ್ಟ ಮಕ್ಕಳ ಕುಟುಂಬಗಳಿಗೆ ಈಗಾಗಲೇ ಕೆಎಸ್‌ಆರ್‌ಟಿಸಿಯಿಂದ ಐದು ಲಕ್ಷ ಹಣವನ್ನು ನೀಡಲಾಗುತ್ತಿದೆ. ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಈ ಪ್ರಕರಣದ ಕುರಿತು ಮಾತನಾಡಲಾಗಿದೆ. ಅಪಘಾತಕ್ಕೊಳಗಾದ ಮಕ್ಕಳ ಕುಟುಂಬಗಳ ಜೊತೆಗೆ ನಾವಿದ್ದೇವೆ ಎಂದು ಸಚಿವರು ತಿಳಿಸಿದರು.

ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸರಾಜು ಅವರು ಇದೇ ವೇಳೆ ಮಕ್ಕಳ ಕುಟುಂಬಕ್ಕೆ ಬೋಸರಾಜು ಫೌಂಡೇಶನ್‌ನಿಂದ ತಲಾ 1 ಲಕ್ಷ ರೂಯಂತೆ 2 ಲಕ್ಷ ರೂಗಳನ್ನು ನೀಡಿ, ಸಾಂತ್ವನ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ರಾಯ 1

ಈ ಸಂದರ್ಭದಲ್ಲಿ ಶಾಸಕರುಗಳಾದ ಹಂಪಯ್ಯ ನಾಯಕ, ಹಂಪನಗೌಡ ಬಾದರ್ಲಿ, ಎ.ವಸಂತಕುಮಾರ, ದದ್ದಲ ಬಸನಗೌಡ, ಕಾಂಗ್ರೆಸ್ ಮುಖಂಡ ರವಿ ಬೋಸರಾಜ, ಚಂದ್ರಶೇಖರ ಕುರ್ಡಿ, ಜಿಲ್ಲಾಧಿಕಾರಿ ಕೆ. ನಿತೀಶ್ ಕುಮಾರ್, ಎಸ್‌ಪಿ ಪುಟ್ಟಮಾದಯ್ಯ, ರಾಹುಲ್ ತುಕಾರಾಂ ಪಾಂಡ್ವೆ ಸೇರಿದಂತೆ ಅನೇಕ ಮುಖಂಡರುಗಳು,ಅಧಿಕಾರಿಗಳಿದ್ದರು.

ಆಸ್ಪತ್ರೆಗೂ ಭೇಟಿ ನೀಡಿದ ಸಚಿವರು

ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಉಳಿದ ವಿದ್ಯಾರ್ಥಿಗಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಸಚಿವ ಶರಣ ಪ್ರಕಾಶ್ ಪಾಟೀಲ್ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಆರೋಗ್ಯದ ಕಡೆ ತೀವ್ರ ಗಮನ‌ ನೀಡುವಂತೆ ರಿಮ್ಸ್ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಶಾಸಕರಾದ ಹಂಪಣಗೌಡ, ಎ.ವಸಂತ ಕುಮಾರ್, ಬಸನಗೌಡ ದದ್ದಲ್, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿಗಳು, ರಾಯಚೂರು ಸಹಾಯಕ‌ ಆಯುಕ್ತರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು, ರಿಮ್ಸ್ ನಿರ್ದೇಶಕರು, ಆಡಳಿತಾಧಿಕಾರಿಗಳು ಸೇರದಂತೆ ಇತರೆ ಅಧಿಕಾರಿಗಳು‌ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...