ರಾಯಚೂರು | ಕುಡಿಯುವ ನೀರಿಗಾಗಿ ನಾನಾ ಗ್ರಾಮಗಳಲ್ಲಿ ಹಾಹಾಕಾರ

Date:

ಒಂದು ಭಾಗದಲ್ಲಿ ಕೃಷ್ಣ ನದಿ, ಮತ್ತೊಂದು ಭಾಗದಲ್ಲಿ ತುಂಗಾಭದ್ರ ನದಿ – ಎರಡು ಬೃಹತ್ ನದಿಗಳು ಹರಿಯುವ ರಾಯಚೂರು ಜಿಲ್ಲೆ ಸದ್ಯ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದೆ. ಕೃಷ್ಣ ನದಿಗೆ ಅಡ್ಡಲಾಗಿ ಕಟ್ಟಿರುವ ನಾರಾಯಣಪುರ ಜಲಾಶಯದ ನಾಲೆಗಳಿಂದ ರಾಯಚೂರು, ಮಾನ್ವಿ ತಾಲೂಕುಗಳ ಕಡೆಯ ಭಾಗಕ್ಕೆ ನೀರು ಬಾರದಿರುವುದು ಕೃಷಿಗೆ ತೊಡಕಾಗುತ್ತಿದೆ ಎಂದು ರೈತರು ಆಗಾಗ್ಗೆ ಪ್ರತಿಭಟನೆ ನಡೆಸುತ್ತಿದ್ದರು. ಇದೀಗ, ಕುಡಿಯುವ ನೀರಿಗಾಗಿಯೂ ಹೋರಾಟ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಯಚೂರು ತಾಲೂಕಿನ ಕೃಷ್ಣಾ ನದಿಗೆ ಸಮೀಪವೇ ಇರುವ ಡಿ ರಾಂಪುರ ಸೇರಿದಂತೆ ನಾನಾ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ. ಕೃಷ್ಣಾ ನದಿ ಒಣಗಿದ್ದು, ನಾಲೆಗಳಲ್ಲಿ ನೀರು ಬರುತ್ತಿಲ್ಲ. ಅಂತರ್ಜಲ ಬರಿದಾಗಿ, ಬೋರ್‌ವೆಲ್‌ಗಳೂ ಬತ್ತಿ ಹೋಗಿವೆ. ದೂರದ ಜಮೀನುಗಳಿಂದ ನೀರು ತರಬೇಕಾದ ಅನಿವರ್ಯತೆ ಗ್ರಾಮಸ್ಥರಿಗೆ ಎದುರಾಗಿದೆ.

ಗ್ರಾಮಗಳ ಜನರ ಕುಡಿಯುವ ನೀರಿನ ಸಮಸ್ಯೆ ಜೊತೆಗೆ, ಜಾನುವಾರುಗಳಿಗೂ ನೀರಿಲ್ಲದೆ, ಅವುಗಳಿಗೂ ಕುಡಿಯಲು ನೀರು ತರುವುದು ಸವಾಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀರಿನಲ್ಲ ಸ್ನಾನ ಮಾಡಿಲ್ಲ. ಕುಡಿಯುವ ನೀರಿಗಾಗಿ ಪರದಾಡುತ್ತಿದ್ದೇವೆ. ದಿನನಿತ್ಯ ನೀರಿಗಾಗಿ ಜಮೀನುಗಳ ಪಂಪ್‌ಸೆಟ್‌ಗೆ ಹೋದರೆ, ಜಮೀನು ಮಾಲೀಕರು ಬಿಡುವುದಿಲ್ಲ. ಸರ್ಕಾರ, ಸ್ಥಳೀಯ ಆಡಳಿತಗಳು ನಮ್ಮ ಸಮಸ್ಯೆ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ” ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...