ಉಡುಪಿ | ಸರಕಾರಿ ಯೋಜನೆಗಳ ಅರಿವು ಜನಸಾಮಾನ್ಯರಿಗೆ ಅಗತ್ಯ : ಶಾಸಕ ಗುರುರಾಜ್ ಗಂಟಿಹೊಳೆ

Date:

ಸರಕಾರದಿಂದ ದೊರೆಯುವ ಸೌಲಭ್ಯಗಳ ಮಾಹಿತಿಯನ್ನು ಪ್ರತಿಯೊಬ್ಬರಿಗೂ ತಲುಪಿಸುವ ಉದ್ದೇಶದಿಂದ ವಿವಿಧ ಇಲಾಖೆಗಳಿಂದ ಉತ್ತಮವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಆರೋಗ್ಯ ತಪಾಸಣೆ ಶಿಬಿರಗಳು ಹಾಗೂ
ವಿವಿಧ ಇಲಾಖೆ ಯೋಜನೆಗಳ ಮಾಹಿತಿ ಲಭ್ಯತೆ ಸಾರ್ವಜನಿಕರಿಗೆ ಸಹಕಾರಿಯಾಗಲಿದೆ. ಮನೋರಂಜನೆಯ ಜೊತೆಗೆ ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರ ಉದ್ಯೋಗ ವ್ಯವಹಾರಗಳಿಗೆ ಉತ್ತಮ ವೇದಿಕೆ ಕಲ್ಪಿಸಿದಂತಾಗುತ್ತದೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ಅವರು ಮಂಗಳವಾರ ಮರವಂತೆ ಗ್ರಾಮ ಪಂಚಾಯತ್ ವಠಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಡಾ.ಶಿವರಾಮ ಕಾರಂತ ಟ್ರಸ್ಟ್ ಹಾಗೂ ಮರವಂತೆ ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ ನಡೆದ ಮರವಂತೆ
ಗ್ರಾಮೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಗ್ರಾಮ
ಪಂಚಾಯತ್‌ನ ಅಧ್ಯಕ್ಷ ನಾಗಾರಾಜ್ ಪಠಗಾರ್, ಉಪಾಧ್ಯಕ್ಷೆ ಸುಶೀಲಾ ಪೂಜಾರಿ, ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯರಾದ ಡಾ.ಚೇತನ್ ಶೆಟ್ಟಿ ಕೋವಾಡಿ ಮತ್ತು ಡಾ.ಭಾರತಿ ಮರವಂತೆ, ತೋಟಗಾರಿಕೆ ಇಲಾಖೆಯ ಪ್ರವೀಣ್, ಗ್ರಾಮ ಪಂಚಾಯತ್ ನ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ರಂಗೋಲಿ ಹಾಗೂ ಚಿತ್ರಕಲಾ ಸ್ಪರ್ಧೆ, ಮರವಂತೆ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮೀಣ ಕ್ರೀಡೋತ್ಸವ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರವಂತೆ ವತಿಯಿಂದ ಸಾರ್ವಜನಿಕರಿಗೆ ಮತ್ತು ಶಾಲಾ ವಿದ್ಯಾರ್ಥಿಗಳಿಂದ ಪಾರಂಪರಿಕ ವಸ್ತು ಪ್ರದರ್ಶನ, ಕವಿಗೋಷ್ಠಿ, ಉಪನ್ಯಾಸ, ಪಶು ಸಂಗೋಪನಾ ಇಲಾಖೆಯ ವತಿಯಿಂದ ಉಚಿತ ರೇಬಿಸ್ ಚುಚ್ಚು ಮದ್ದು ನೀಡುವುದು ಹಾಗೂ ಸಾಕು ಪ್ರಾಣಿಗಳ ಪ್ರದರ್ಶನ, ಆರೋಗ್ಯ ಇಲಾಖೆಯ ವತಿಯಿಂದ ಆರೋಗ್ಯ ಶಿಬಿರ ಮತ್ತು ಕಣ್ಣಿನ ತಪಾಸಣೆ, ಕೃಷಿ ಇಲಾಖೆಯ ವತಿಯಿಂದ ಕೃಷಿ ಉತ್ಪನ್ನಗಳ ಪ್ರದರ್ಶನವು ನಡೆಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...