ಉಡುಪಿ | ಸಾಹಿತಿ ಮರವಂತೆ ಪ್ರಕಾಶ್ ಪಡಿಯಾರ್ ನಿಧನ

Date:

ಸಾಹಿತಿ, ಪತ್ರಕರ್ತ, ಅಂಕಣ ಬರಹಗಾರ ಮರವಂತೆ ಪ್ರಕಾಶ್ ಪಡಿಯಾರ್ ಇಂದು ಆಶ್ರಯ ಪಡೆದಿರುವ ಕಾರ್ಕಳದ ಹೊಸಬೆಳಕು ಆಶ್ರಮದಲ್ಲಿ ನಿಧನರಾದರು. ಮೃತರು ಪತ್ನಿ, ಇರ್ವರು ಪುತ್ರಿಯರನ್ನು ಅಗಲಿದ್ದಾರೆ. ಸಾಹಿತ್ಯ,‌ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿದ್ದ ಪಡಿಯಾರರು, ಗ್ರಾಮೀಣ ಭಾಗದ ಸಮಸ್ಯೆಯ ಕುರಿತು ಬರೆದ ವರದಿಗಳು, ಆಡಳಿತ ವ್ಯವಸ್ಥೆಯ ಗಮನ ಸೆಳೆದು ಫಲಶ್ರುತಿ ಪಡೆಯುತ್ತಿದ್ದವು. ಅವರ ಅನನ್ಯ ಸಾಧನೆಗೆ ಹಲವಾರು ಸಂಘ ಸಂಸ್ಥೆಗಳು ಸನ್ಮಾನಿಸಿದ್ದವು. ಕೆಲವು ವರ್ಷ ಜೀವಾ ವಿಮೆ ಎಜೆಂಟರಾಗಿದ್ದರು. ಮಾಧ್ಯಮಗಳಿಗೆ ಜಾಹೀರಾತು ಸಂಗ್ರಹಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಅನಾರೋಗ್ಯ ಸಮಸ್ಯೆಯಿಂದ ಮಾನಸಿಕವಾಗಿ ನೊಂದಿದ್ದ‌ ಪಡಿಯಾರರು, ಜೀವನ ನಿರ್ವಹಣೆ ಎದುರಿಸಲು ಅಸಹಾಯಕರಾಗಿ ಉಡುಪಿಯಲ್ಲಿ ದಿನಗಳನ್ನು ಕಳೆಯುತ್ತಿದ್ದರು. ಕಳೆದ ವರ್ಷದ ಮೇ 18‌ ರಂದು, ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ‌ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರನ್ನು ರಕ್ಷಿಸಿ, ಕಾರ್ಕಳದ ಹೊಸಬೆಳಕು ಆಶ್ರಮದಲ್ಲಿ ಪುರ್ನವಸತಿ ಕಲ್ಪಿಸಿದ್ದರು.‌ ಆಶ್ರಮದ ಸಂಚಾಲಕಿ ತನುಲಾ ತರುಣ್ ಅವರು ಆಹಾರ, ಔಷಧೋಪಚಾರ ಒದಗಿಸಿ ಅಕ್ಕರೆಯಿಂದ ಪೋಷಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...