ಚಿಕ್ಕಮಗಳೂರು | ಯುವಕನೊಂದಿಗೆ ಊರು ತೊರೆದ ವಿವಾಹಿತ ಮಹಿಳೆ: ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ

Date:

ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಠಾಣೆಯಲ್ಲಿ ವಿವಾಹಿತ ಮಹಿಳೆಯೊಬ್ಬರು ಬೇರೆ ಸಮುದಾಯಕ್ಕೆ ಸೇರಿದ ಯುವಕನೊಂದಿಗೆ ಊರು ತೊರೆದಿದ್ದಾಳೆ ಎಂದು ಹೇಳಲಾಗುತ್ತಿರುವ ನಡುವೆಯೇ ಬಣಕಲ್ ಗ್ರಾಮದಲ್ಲಿ ಉದ್ವಿಗ ಪರಿಸ್ಥಿತಿ ಉಂಟಾಗಿದೆ.

ಗುಂಪೊಂದು ಬಣಕಲ್ ಠಾಣೆ ಎದುರು ಜಮಾಯಿಸಿದ್ದು, ಬಣಕಲ್ ಪಟ್ಟಣದಲ್ಲಿ ಏಕಾಏಕಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ ಎನ್ನಲಾಗಿದೆ. ಸಂಘಪರಿವಾರದ ನಾಯಕರು, ಕಾರ್ಯಕರ್ತರಿಗೂ ಪೊಲೀಸರಿಗೂ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಹಾವೇರಿ | ಮನೆ ತೊರೆದಿದ್ದ ಪ್ರೇಮಿಗಳು; ಯುವಕನ ಮಾವನನ್ನು ಅರೆಬೆತ್ತಲೆಗೊಳಿಸಿ ಹಲ್ಲೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನ್ನ ಪತ್ನಿ ಮುಸ್ಲಿಮ್ ಯುವಕನೊಂದಿಗೆ ಮನೆ ಬಿಟ್ಟು ಹೋಗಿದ್ದಾಳೆ ಎಂದು ಮಹಿಳೆಯ ಪತಿ ಬಣಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಪತ್ತೆ ಕಾರ್ಯಕ್ಕೆ ಪೊಲೀಸರು ಮುಂದಾಗಿದ್ದು ಪತ್ತೆ ಹಚ್ಚಿದ್ದಾರೆ ಎಂದು ವರದಿಯಾಗಿದೆ.

ಇದಾದ ಬೆನ್ನಲ್ಲೇ ಸಂಘಪರಿವಾರದ ನಾಯಕರು, ಕಾರ್ಯಕರ್ತರು ಮತ್ತು ಗ್ರಾಮಸ್ಥರು ಪೊಲೀಸ್ ಠಾಣೆ ಎದುರು ಜಮಾಯಿಸಿದ್ದಾರೆ. ಜನರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಪೊಲೀಸರು ಗೇಟ್ ಮುಚ್ಚಿದ್ದು, ಜನರು ಏಕಾಏಕಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಇನ್ನು ಮಹಿಳೆಯು ತನ್ನನ್ನು ಯಾರೂ ಬಲವಂತದಿಂದ ಕರೆದೊಯ್ದಿಲ್ಲ ತಾನೇ ಮನೆಯಿಂದ ಹೋಗಿರುವುದಾಗಿ ಹೇಳಿಕೆ ನೀಡಿದ್ದಾರೆ. ಸದ್ಯ ಮಹಿಳೆಯನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿರಿಸಲಾಗಿದೆ. ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...