ಮಸ್ಕಿ | ಬೆಳ್ಳಿಗನೂರಿನಲ್ಲಿ ಕುಡಿಯುವ ನೀರಿನ ಸಂಕಷ್ಟ; ಮೂರು ತಿಂಗಳಾದರೂ ಪರಿಹಾರವೇ ಇಲ್ಲ

Date:

ಮಸ್ಕಿ ತಾಲ್ಲೂಕಿನ ಗೌಡನಬಾವಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳ್ಳಿಗನೂರು ಗ್ರಾಮದಲ್ಲಿ ಕಳೆದ ಎರಡು–ಮೂರು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಇದುವರೆಗೂ ಯಾವುದೇ ಶಾಶ್ವತ ಪರಿಹಾರ ಕಂಡುಬಂದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಗ್ರಾಮದಲ್ಲಿ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಒಡೆದು ತಿಂಗಳುಗಳು ಕಳೆದರೂ ದುರಸ್ತಿ ಕಾರ್ಯ ಕೈಗೊಳ್ಳಲಾಗಿಲ್ಲ. ಒಡೆದ ಪೈಪ್ ಮೂಲಕ ಗಲೀಜು ಮಿಶ್ರಣವಾಗಿ ಅದೇ ನೀರು ಮನೆಗಳಿಗೆ ಪೂರೈಕೆಯಾಗುತ್ತಿದೆ ಎನ್ನಲಾಗಿದೆ. ಹಲವು ಬಾರಿ ಗ್ರಾಮ ಪಂಚಾಯತ್ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಗ್ರಾಮ ಪಂಚಾಯತ್ ಪಿಡಿಓ ಅವರಿಗೆ ಸಮಸ್ಯೆ ತಿಳಿಸಿದಾಗ ಸ್ಪಷ್ಟ ಉತ್ತರ ನೀಡದೆ, ಬದಲಾಗಿ ಗ್ರಾಮಕ್ಕೆ ಪೊಲೀಸರನ್ನು ಕರೆತಂದು ಜನರನ್ನು ಸಮಾಧಾನಪಡಿಸಲು ಯತ್ನಿಸಲಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಸಮಸ್ಯೆ ಪರಿಹಾರಕ್ಕೆ ಬದಲಾಗಿ ಭರವಸೆ ಮಾತುಗಳಷ್ಟೇ ಸಿಗುತ್ತಿವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಅಶುದ್ಧ ನೀರು ಸೇವನೆಯ ಪರಿಣಾಮವಾಗಿ ಗ್ರಾಮದಲ್ಲಿ ವಾಂತಿ, ಭೇದಿ, ಜ್ವರ ಸೇರಿದಂತೆ ಹಲವು ರೋಗಗಳು ಕಾಣಿಸಿಕೊಳ್ಳುತ್ತಿವೆ. ಮಕ್ಕಳು ಮತ್ತು ವೃದ್ಧರು ಹೆಚ್ಚು ಸಂಕಷ್ಟ ಅನುಭವಿಸುತ್ತಿದ್ದು, ಹಲವಾರು ಜನ ಆಸ್ಪತ್ರೆಗೆ ಹೋಗುವ ಸ್ಥಿತಿಯಾಗಿದೆ.

24603

ಸುಮಾರು 400ಕ್ಕೂ ಹೆಚ್ಚು ಕುಟುಂಬಗಳು ವಾಸಿಸುವ ಈ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆ ಗಂಭೀರ ಸಮಸ್ಯೆಯಾಗಿದೆ. ಕೆಲವರು ಖಾಸಗಿ ಟ್ಯಾಂಕರ್ ಮೂಲಕ ನೀರು ತರಿಸಿಕೊಂಡು ಬಳಸುತ್ತಿದ್ದಾರೆ. ಆದರೆ ಎಲ್ಲರಿಗೂ ಅದು ಸಾಧ್ಯವಾಗುತ್ತಿಲ್ಲ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳು ಮಿಶ್ರಿತ ನೀರನ್ನೇ ಅನಿವಾರ್ಯವಾಗಿ ಸೇವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಬಗ್ಗೆ ಗ್ರಾಮದ ನಿವಾಸಿ ಚಾಂದಸಾಬ್ ಮಾತನಾಡಿ, ಗ್ರಾಮದಲ್ಲಿ ನೀರು ಸರಬರಾಜು ಮಾಡುವ ಪೈಪ್ ಲೈನ್ ಒಡೆದು ತಿಂಗಳುಗಳು ಕಳೆದರೂ ಅಧಿಕಾರಿಗಳು ದುರಸ್ತಿ ಕಾರ್ಯ ಕೈಗೊಳ್ಳದೇ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಸ್ಪಂದನೆ ದೊರಕಿಲ್ಲವೆಂದು ಅವರು ದೂರಿದರು.

24583

ಸುಮಾರು 400ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು 1200 ಮತದಾನವಿದೆ. ಈ ಗ್ರಾಮದಲ್ಲಿ ಮಿಶ್ರಿತ ಮತ್ತು ಅಶುದ್ಧ ನೀರನ್ನು ಕುಡಿಯುವ ಅನಿವಾರ್ಯ ಪರಿಸ್ಥಿತಿ ಉಂಟಾಗಿದೆ. ತಕ್ಷಣ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪೈಪ್ ಲೈನ್ ದುರಸ್ತಿ ಮಾಡಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಒಡೆದ ಪೈಪ್ ಲೈನ್ ಮೂಲಕ ಗಲೀಜು ನೀರು ಮಿಶ್ರಣಗೊಂಡು ಅದೇ ನೀರು ಮನೆಗಳಿಗೆ ಸರಬರಾಜಾಗುತ್ತಿದೆ. ಅನಿವಾರ್ಯವಾಗಿ ಅದನ್ನೇ ಕುಡಿಯುತ್ತಿರುವ ಜನರು ವಾಂತಿ, ಭೇದಿ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇದರಿಂದ ಆಸ್ಪತ್ರೆಗಳಿಗೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯತ್ ಪಿಡಿಓ ಅವರಿಗೆ ಮಾಹಿತಿ ನೀಡಿದಾಗ, ಸಮಸ್ಯೆ ಪರಿಹರಿಸುವ ಬದಲು ಗ್ರಾಮಕ್ಕೆ ಪೊಲೀಸರನ್ನು ಕರೆತಂದು ಸಾರ್ವಜನಿಕರಿಗೆ ಸಮರ್ಪಕ ಉತ್ತರ ನೀಡದೆ ಹಾರೈಕೆ ಮಾತುಗಳನ್ನಷ್ಟೇ ಹೇಳಲಾಗುತ್ತಿದೆ ಎಂದು ಜನರು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
24604

ಸಂಬಂಧಪಟ್ಟ ಗ್ರಾಮ ಪಂಚಾಯತ್, ತಾಲೂಕು ಆಡಳಿತ ಮತ್ತು ನೀರು ಸರಬರಾಜು ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಒಡೆದ ಪೈಪ್ ಲೈನ್ ದುರಸ್ತಿ ಮಾಡಿ ಶುದ್ಧ ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಕಲ್ಪಿಸಬೇಕು. ಸಮಸ್ಯೆ ಶೀಘ್ರದಲ್ಲಿ ಬಗೆಹರಿಯದಿದ್ದರೆ ಹೋರಾಟ ಕೈಗೊಳ್ಳುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಮತ್ತೊಬ್ಬ ನಿವಾಸಿ ಪವನ ಕುಮಾರ್ ಮಾತನಾಡಿ, ಗ್ರಾಮದ ಸ್ಮಶಾನದ ಹತ್ತಿರ ಹಾದು ಹೋಗಿದೆ. ಅದು ಪೈಪ್ ಒಡೆದು ತಿಂಗಳುಗಳು ಕಳೆದರೂ ಅದನ್ನು ಸರಿಪಡಿಸಿಲ್ಲ. ಒಡೆದ ಪೈಪ್ ಲೈನ್ ಮೂಲಕ ಸ್ಮಶಾನದ ನೀರು ಕೂಡ ಮಿಶ್ರಣವಾಗಿ ಮನೆಗಳಿಗೆ ಸರಬರಾಜು ಆಗುತ್ತಿದೆ. ಪದೇ ಪದೇ ಇದರ ಬಗ್ಗೆ ಮನವಿ ಸಲ್ಲಿಸಿದರು ತಮಗೆ ಸಂಬಂಧವಿಲ್ಲದಂತೆ ಇದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ದೇವದುರ್ಗ | ಗಾಳಿಯಲ್ಲಿ ಗುಂಡು ಹಾರಿಸಿದ ಇಬ್ಬರ ಬಂಧನ

ಗ್ರಾಮ ಪಂಚಾಯತ್ ಪಿಡಿಒ ವಸಂತಾ ಗೀತಾ ಮಾತನಾಡಿ, ಗ್ರಾಮಕ್ಕೆ ಭೇಟಿ ನೀಡಿದಾಗ ಸಾರ್ವಜನಿಕರಿಗೆ 2 ದಿನದಲ್ಲಿ ಬಗೆಹರಿಸಲಾಗುವುದು ಎಂದು ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...