ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದಲ್ಲಿ ಹುಚ್ಚು ನಾಯಿಯೊಂದು ದಾಳಿ ನಡೆಸಿ 10ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಪಟ್ಟಣದ ಪಿಂಜಾರ ಓಣಿ, ಬಾಳೇಕಾಯಿ ಮಿಲ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಹುಚ್ಚು ನಾಯಿಯೊಂದು ಏಕಾಏಕಿ ದಾಳಿ ನಡೆಸಿದೆ. ನಾಯಿಯ ಕಡಿತದಿಂದ ಮಕ್ಕಳು ಕೈ, ಕಾಲು ಮತ್ತು ಮುಖ ಭಾಗಗಳಲ್ಲಿ ಗಾಯಗೊಂಡಿವೆ ಎಂದು ಪೋಷಕರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಬೈಕ್ ವಿಚಾರಕ್ಕೆ ಗಲಾಟೆ ಯುವಕನ ಕೊಲೆ; ಇಬ್ಬರ ಬಂಧನ
ಗಾಯಗೊಂಡ ಮಕ್ಕಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಮಸ್ಕಿ ಶಾಸಕ ಆರ್.ಬಸನಗೌಡ ತುರುವಿಹಾಳ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.





