ಉದ್ಯೋಗಿಗಳ ಸಾಮೂಹಿಕ ವಜಾ: ಇನ್ಫೋಸಿಸ್ ವಿರುದ್ಧ ಕ್ರಮಕ್ಕೆ ಕೇಂದ್ರ ಸೂಚನೆ

Date:

300ಕ್ಕೂ ಹೆಚ್ಚು ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸಿರುವ ನಾರಾಯಣ ಮೂರ್ತಿ ಅವರ ಇನ್ಫೋಸಿಸ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾರ್ಮಿಕ ಇಲಾಖೆಗೆ ಕೇಂದ್ರ ಕಾರ್ಮಿಕ ಸಚಿವಾಲಯ ಸೂಚನೆ ನೀಡಿದೆ. ‘ವಿವಾದವನ್ನು ಪರಿಹರಿಸಲು ಅಗತ್ಯ ತುರ್ತು ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದೆ.

ಮೈಸೂರಿನಲ್ಲಿರುವ ಇನ್ಫೋಸಿನ್‌ ಕ್ಯಾಪಂಸ್‌ನಲ್ಲಿ ಹಲವು ತಿಂಗಳುಗಳ ಕಾಲ ಮೂಲಭೂತ ತರಬೇತಿ ಪಡೆದ 300ಕ್ಕೂ ಹೆಚ್ಚು ಹೊಸ ಉದ್ಯೋಗಿಗಳನ್ನು ಸಾಮಾಜಿಕವಾಗಿ ವಜಾಗೊಳಿಸಲಾಗಿದೆ. ಈ ಬಗ್ಗೆ ಇನ್ಫೋಸಿಸ್‌ ಕೂಡ ಒಪ್ಪಿಕೊಂಡಿದೆ. ಇನ್ಫೋಸಿಸ್‌ನ ಧೋರಣೆಯ ವಿರುದ್ಧ ಐಟಿ ವಲಯದ ಸಂಘಟನೆಯಾದ ‘ನಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಉದ್ಯೋಗಿಗಳ ಸೆನೆಟ್’ (NITES) ಕಾರ್ಮಿಕ ಸಚಿವಾಲಯಕ್ಕೆ ದೂರು ನೀಡಿದೆ. ಮಾತ್ರವಲ್ಲದೆ, ವಜಾಗೊಳಿಸಲಾಗಿರುವ ಉದ್ಯೋಗಿಗಳ ಸಂಖ್ಯೆ 300 ಅಲ್ಲ, 700 ಎಂದು ವಾದಿಸಿದೆ.

ದೂರಿನಲ್ಲಿ, “ಇತ್ತೀಚೆಗಷ್ಟೇ ಇನ್ಫೋಸಿಸ್‌ಗೆ ಸೇರ್ಪಡೆಗೊಂಡ ಕ್ಯಾಂಪಸ್ ನೇಮಕಾತಿದಾರರನ್ನು ಬಲವಂತವಾಗಿ ವಜಾಗೊಳಿಸಲಾಗಿದೆ. ಈ ಎಲ್ಲ ಉದ್ಯೋಗಿಗಳು ಸುಮಾರು 2 ವರ್ಷಗಳ ಹಿಂದೆಯೇ ಆಫರ್ ಲೆಟರ್‌ಗಳನ್ನು ಪಡೆದಿದ್ದರು. ಅದಾಗ್ಯೂ, ಅವರನ್ನು ಕೆಲಸಕ್ಕೆ ಸೇರಿಸಿಕೊಳ್ಳುವಲ್ಲಿ ಸಂಸ್ಥೆಯು ಎರಡು ವರ್ಷ ವಿಳಂಬ ಮಾಡಿದೆ. ಇದೀಗ, ಎಲ್ಲರನ್ನೂ ಕೆಲಸದಿಂದ ವಜಾ ಮಾಡಿದೆ” ಎಂದು ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇನ್ಫೋಸಿಸ್ ವಿರುದ್ಧ ತನಿಖೆ ನಡೆಸಬೇಕು. ಈ ರೀತಿಯ ವಜಾಗೊಳಿಸುವಿಕೆಯನ್ನು ತಡೆಯಲು ಇನ್ಫೋಸಿಸ್ ವಿರುದ್ಧ ತಡೆಯಾಜ್ಞೆ ಹೊರಡಿಸಬೇಕು. ಜೊತೆಗೆ ವಜಾಗೊಳಿಸಲ್ಪಟ್ಟ ಎಲ್ಲ ಉದ್ಯೋಗಿಗಳಿಗೆ ಮತ್ತೆ ಉದ್ಯೋಗ ನೀಡಬೇಕು. 1947ರ ಕೈಗಾರಿಕಾ ವಿವಾದ ಕಾಯ್ದೆ ಮತ್ತು ಇತರ ಕಾರ್ಮಿಕ ಕಾನೂನುಗಳ ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕಂಪನಿಗೆ ದಂಡ ವಿಧಿಸಬೇಕು” ಎಂದು ಎನ್‌ಐಟಿಇಎಸ್‌ ಆಗ್ರಹಿಸಿದೆ.

ಈ ವರದಿ ಓದಿದ್ದೀರಾ?: 70 ಗಂಟೆ, 90 ಗಂಟೆ ಕೆಲಸ: ಉದ್ಯೋಗಿಗಳ ರಕ್ತ ಹೀರುವುದು ಲಾಭಕೋರ ಬಂಡವಾಳಿಗರ ಸಂಚು

ಎನ್‌ಐಟಿಇಎಸ್‌ ದೂರಿನ ಅನ್ವಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಕಾರ್ಮಿಕ ಸಚಿವಾಲಯವು ರಾಜ್ಯಕ್ಕೆ ಸೂಚಿಸಿದೆ. ಕೇಂದ್ರದ ಸೂಚನೆ ಹಿನ್ನಲೆ, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಗುರುವಾರ ತಡರಾತ್ರಿ ಕಂಪನಿಗಳ ಬೆಂಗಳೂರು ಮತ್ತು ಮೈಸೂರು ಕ್ಯಾಂಪಸ್‌ಗಳಿಗೆ ಭೇಟಿ ನೀಡಿದ್ದರು ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...