ಬೀದರ್‌ | ಜ.7ರಂದು ಬಸವಕಲ್ಯಾಣದಲ್ಲಿ ಬೃಹತ್ ಸಮಾನತಾ ಸಮಾವೇಶ

Date:

ಪ್ರಸ್ತುತ ಸಮಾಜದಲ್ಲಿ ಧರ್ಮ, ಜಾತಿ, ವರ್ಗ ಗೋಡೆಗಳನ್ನು ದಾಟಿ ಸಮಾನತೆ ತತ್ವದಿಂದ ನಡೆದು ಸಾಮರಸ್ಯದಿಂದ ಎಲ್ಲರೂ ಕೂಡಿ ಇದ್ದರೆ ಮಾತ್ರ ದೇಶ ಬಲಿಷ್ಠವಾಗುತ್ತದೆ, ಸರ್ವಜನಾಂಗದ ಶಾಂತಿಯ ತೋಟ ನೆಲೆಸುತ್ತದೆ ಎಂದು ಪೂಜ್ಯ ಡಾ.ಬೆಲ್ದಾಳ ಸಿದ್ದರಾಮ ಶರಣರು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಅರವಿಂದ ಕುಮಾರ ಅರಳಿಯವರ ಕಚೇರಿಯಲ್ಲಿ ಬೆಲ್ದಾಳ ಶರಣರ ಸಾನಿಧ್ಯದಲ್ಲಿ ಸಮಾನತಾ ಸಮಾವೇಶ ಆಯೋಜಿಸುವ ಕುರಿತು ನಡೆದ ಪೂರ್ವಸಿದ್ದತಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, “ಬಸವಕಲ್ಯಾಣ ಬಸವ ಮಹಾಮನೆ ಟ್ರಸ್ಟ್ ವತಿಯಿಂದ ಜ.7ರಂದು ಬೃಹತ್ ಸಮಾನತೆ ಸಮಾವೇಶ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ” ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿ ಮಾತನಾಡಿ, “ಬಸವಕಲ್ಯಾಣ ನಗರದ ಬಸವ ಮಹಾಮನೆ ಆವರಣದಲ್ಲಿ ಹಮ್ಮಿಕೊಂಡಿರುವ ಸಮಾನತಾ ಸಮಾವೇಶ ಧರ್ಮಾತೀತ, ಜಾತ್ಯಾತೀತ, ಪಕ್ಷಾತೀತ ಹಾಗೂ ಶುದ್ಧ ರಾಜಕೀಯೇತರ ತಳಹದಿಯ ಮೇಲೆ ನಡೆಯಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯ ಮುಖಂಡ ಶ್ರೀಕಾಂತ ಸ್ವಾಮಿ ಮಾತನಾಡಿ, “ಸಮಾನತಾ ಸಮಾವೇಶಕ್ಕೆ ಪೂಜ್ಯ ಬೆಲ್ದಾಳ ಶರಣರು ನಿರ್ಧರಿಸಿದಂತೆ ಪೂಜ್ಯರು, ಸಚಿವರು, ಗಣರನ್ನು ಆಹ್ವಾನಿಸುವ ಬಗ್ಗೆ ಕಾಲಮಿತಿಯಲ್ಲಿ ಆಹ್ವಾನಿಸುವಂತೆ” ತಿಳಿಸಿದರು.

ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ ಮಾತನಾಡಿ, “ಬೃಹತ್ ಪ್ರಮಾಣದಲ್ಲಿ ಹಮ್ಮಿಕೊಂಡಿರುವ ಸಮಾನತಾ ಸಮಾವೇಶ ಕಾರ್ಯಕ್ರಮದ ಯಶಸ್ವಿಗೆ ಬಸವಕಲ್ಯಾಣ ಸೇರಿದಂತೆ ಬೀದರ, ಕಲಬುರಗಿ ಭಾಗದ ಕ್ರಿಯಾಶೀಲ ನಾಯಕರ, ಸಾಮಾಜಿಕ ಕಾರ್ಯಕರ್ತರ ಉಪಸಮಿತಿಗಳನ್ನು ರಚಿಸಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಭೀಮಾ ಕೋರೆಗಾಂವ ವಿಜಯೊತ್ಸವ : ಜ.7ರಂದು ಕುಸ್ತಿ ಪಂದ್ಯಾವಳಿ

ಸಭೆಯಲ್ಲಿ ಶಾಹಿನ್ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಡಾ.ಅಬ್ದುಲ್ ಖದೀರ್, ಪ್ರಮುಖರಾದ ವಿನಯ ಮಾಳಗೆ, ಚಂದ್ರಶೇಖರ ಪಾಟೀಲ, ಶಿವಶಂಕರ ಟೋಕರೆ, ಮಹಾಲಿಂಗ, ಕೇದಾರನಾಥ ಪಾಟೀಲ, ರೋಹನ, ಉದಯಕುಮಾರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...