ಕಾರ್ಮಿಕರ ವಿರೋಧಿ ನೀತಿಗಳ ವಿರುದ್ಧ ಬೃಹತ್ ಪ್ರತಿಭಟನೆ

Date:

ಕೋಲಾರ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕರ ವಿರೋಧಿ ನೀತಿಗಳ ವಿರುದ್ದ ಕಾರ್ಮಿಕ ಸಂಘಗಳ ಜಂಟಿ ಸಮಿತಿ ಹಾಗೂ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಗುರುವಾರ ಕರೆ ನೀಡಿದ್ದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಭಾಗವಾಗಿ ನಗರದ ಗಾಂಧಿವನದಿಂದ ಮೆರವಣಿಗೆ ನಡೆಸಿ ತಹಶಿಲ್ದಾರ್ ಕಛೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಹಿರಿಯ ಕಾರ್ಮಿಕ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ದೇಶದಲ್ಲಿ ಕಾರ್ಮಿಕರ ಹಕ್ಕುಗಳಿಗಾಗಿ ಇದ್ದ 29 ಕಾರ್ಮಿಕ ಕಾಯ್ದೆಗಳನ್ನು 4 ಕಾರ್ಮಿಕ ಕೋಡ್‌ಗಳಾಗಿ ಜಾರಿಗೊಳಿಸಿದ್ದಾರೆ ಕಾರ್ಮಿಕರು ಮುಷ್ಕರ ನಡೆಸಿದರೆ ದಂಡ ಜೈಲು ಶಿಕ್ಷೆ ವೇತನ ಕಡಿತಗೊಳಿಸಲಾಗುವ ನೀತಿಗಳು ಜಾರಿ ಮಾಡಿದ್ದಾರೆ ನರೇಗಾದಡಿ ಕೆಲಸದ ಹಕ್ಕನ್ನು ಕಸೆದುಕೊಂಡು ಗ್ರಾಮೀಣ ಜನರ ದುಡಿಯುವ ಹಕ್ಕನ್ನು ನಿಯಂತ್ರಣ ಮಾಡುವ ಮೂಲಕ ಗ್ರಾಮೀಣ ಜನರ ಜೀವನ ಕಸೆದುಕೊಂಡು ಬೀದಿ ಪಾಲಾಗುವಂತೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ ದೇಶದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿದ್ಯುಚ್ಛಕ್ತಿ ಖಾಸಗೀಕರಣ ಪ್ರಸರಣ ಮತ್ತು ಅನುಷ್ಠಾನ ನಿರ್ವಹಣೆ ಖಾಸಗಿ ಬಂಡವಾಳಗಾರರಿಗೆ ನೀಡುವ ಮೂಲಕ ರೈತರು ಜನ ಸಾಮಾನ್ಯರ ಸಬ್ಸಿಡಿಗೆ ಮೋಸ ಮಾಡಿದ್ದಾರೆ ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡದೇ ಕೃಷಿಯನ್ನು ಉತ್ತೇಜಿಸದೇ ಭೂ ಸ್ವಾದೀನ ಕಾಯ್ದೆ ಮೂಲಕ ರೈತ ಜಮೀನು ಕಸಿದುಕೊಳ್ಳುವ ಹುನ್ನಾರ ಮಾಡಿದ್ದಾರೆ ಇದನ್ನು ವಿರೋಧವನ್ನು ವ್ಯಕ್ತಪಡಿಸಬೇಕಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಅಬ್ಬಣಿ ಶಿವಪ್ಪ ಮಾತನಾಡಿ‌ ನರೇಗಾ ಯೋಜನೆಯನ್ನು ಪುನರ್ ಸ್ಥಾಪಿಸಿ, ವಿ.ಜಿ ಗ್ರಾಮ್ ಜಿ ಕಾಯ್ದೆ ರದ್ದುಗೊಳಿಸಬೇಕು, ಭೂ ಸ್ವಾಧೀನ ಕಾಯ್ದೆಯನ್ನು ಹಿಂಪಡೆದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ಭೂಸುಧಾರಣಾ ಎಪಿಎಂಸಿ ಜಾನುವಾರು ಸಂರಕ್ಷಣಾ ತಿದ್ದುಪಡಿ ಕಾಯ್ದೆಗಳು ಸೇರಿದಂತೆ ವಿದ್ಯುಚ್ಛಕ್ತಿ ಖಾಸಗೀಕರಣ ಮಾಡುವುದನ್ನು ನಿಲ್ಲಿಸಬೇಕು. ಬೀಜ ಮಸೂದೆ ಕಾಯ್ದೆಯನ್ನು ವಾಪಸು ಮಾಡುವ ಜೊತೆಗೆ ಕಾರ್ಮಿಕರ ನಾಲ್ಕು ಕೋಡ್ ಗಳನ್ನು ಜಾರಿ ಮಾಡಲು ಯಾವುದೇ ಕಾರಣಕ್ಕೂ ಬಿಡಬಾರದು ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಕೆ.ಪಿ.ಆರ್.ಎಸ್ ಜಿಲ್ಲಾಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಕರ್ನಾಟಕ ಸರ್ಕಾರ ಕಾರ್ಮಿಕ ಸಂಹಿತೆಗಳಿಗೆ ಈಗ ತಂದಿರುವ ಗೆಜೆಟ್ ನೋಟಿಫಿಕೇಷನ್‌ನ್ನು ವಾಪಸ್ಸು ಪಡೆಯಬೇಕು. ಮತ್ತು ಒಕ್ಕೂಟ ಸರ್ಕಾರ ತಂದಿರುವ ಜನವಿರೋಧಿ ಮಸೂದೆಗಳನ್ನು ವಿರೋಧಿಸಬೇಕು. 2025 ಆಗಸ್ಟ್ ತಿಂಗಳಲ್ಲಿ ಕನಿಷ್ಠ ವೇತನ ಹೆಚ್ಚಳದ ಕುರಿತು ಕನಿಷ್ಠ ವೇತನ ಸಲಹಾ ಮಂಡಳಿ ನೀಡಿರುವ ಶಿಫಾರಸ್ಸುನ್ನು ಅಂತಿಮ ಅಧಿಸೂಚನೆಯಾಗಿ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ..? ರಸ್ತೆ ಕಾಮಗಾರಿ ವಿಳಂಬ ನಮಗೆಲ್ಲ ಧೂಳಿನ ಭಾಗ್ಯ ಗ್ರಾಮಸ್ಥರ ಆರೋಪ

ಈ ಸಂದರ್ಭದಲ್ಲಿ ಮುಖಂಡರಾದ ಹೆಚ್.ಬಿ ಕೃಷ್ಣಪ್ಪ, ಎಂ. ಭೀಮರಾಜ್, ಎನ್.ಕಲ್ಪನಾ, ಆಶಾ, ವಿ.ಮಂಜುಳ, ಲಕ್ಷ್ಮಿದೇವಿ, ರಾಜಮ್ಮ, ರಾಮಚಂದ್ರಪ್ಪ, ವಿಜಯಕುಮಾರ್, ಅಂಜನಪ್ಪ, ನಿಕಿಲ್, ಶಿವಕುಮಾರ್, ಪೃಥ್ವಿ, ಮೂರ್ತಿ, ರಮೇಶ್, ನಾರಾಯಣರೆಡ್ಡಿ, ಶಾಂತಮ್ಮ, ಬುಟ್ಟಾಲ ಗಣೇಶ್, ಎಂ.ಶ್ರೀನಿವಾಸ್, ನವೀನ್ ಕುಮಾರ್, ಮುಂತಾದವರು ಇದ್ದರು,

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...