ತೊಗರಿಗೆ ಬೆಂಬಲ ಬೆಲೆ ನೀಡುವಂತೆ ರೈತರ ಬೃಹತ್ ಪ್ರತಿಭಟನೆ: ಕಲಬುರಗಿ ಬಂದ್ ಯಶಸ್ವಿ

Date:

ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯಿಂದ ನಡೆಸಿದ ಕಲಬುರಗಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರತಿದ್ದು, ತೊಗರಿಯ ಕಣಜವಾದ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಹಾಗೂ ನೆಟೆರೋಗದಿಂದ ಹಾನಿಯಾಗಿರುವ ತೊಗರಿಗೆ ಬೆಂಬಲ ಬೆಲೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ಮುಂಜಾನೆ ಪ್ರತಿಭಟನೆಗೆ ಇಳಿದ ರೈತ ಮುಖಂಡರು, “ಈ ವರ್ಷ ತೊಗರಿ ಬೆಳೆಗಾರರಿಗೆ ತುಂಬಾ ನಷ್ಟವಾಗಿದೆ. ಕೂಡಲೇ ರೈತರ ಸಮಸ್ಯೆಗಳನ್ನು ಈಡೇರಿಸಬೇಕು. ಬೆಳೆಹಾನಿ ಅನುಭವಿಸಿದ ಸಾವಿರಾರು ರೈತರು ಬೀದಿಪಾಲಾಗಿದ್ದಾರೆ. ಸರ್ಕಾರ‌ ಅವರ ನೆರವಿಗೆ ನಿಂತು ಪರಿಹಾರವಾಗಿ ವಿಶೇಷ ಪ್ಯಾಕೇಜ್ ಘೋಷಿಸಬೇಕು” ಎಂದು ಘೋಷಣೆಗಳನ್ನು ಹಾಕಿದರು.

ಕಲಬುರಗಿ ಬಂದ್ ಘೋಷಣೆ ನಿಮಿತ್ತ ಇಂದು ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಗಳು ರಸ್ತೆಗೆ ಇಳಿದಿಲ್ಲ, ಇದರಿಂದ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್‌ಗಳಿಲ್ಲದೆ ಬಿಕೋ ಎನ್ನುತ್ತಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ವಯಂಪ್ರೇರಿತ ಬಂದ್

ಕಲಬುರಗಿ ಬಂದ್ ಘೋಷಣೆ ಮಾಡಿದ್ದರಿಂದ ಇಲ್ಲಿನ ವಾಣಿಜ್ಯ ಮಳಿಗೆಗಳ ಮಾಲೀಕರು ಸ್ವಯಂ ಪ್ರೇರಿತವಾಗಿ ತಮ್ಮ ಅಂಗಡಿಗಳನ್ನು ಮುಚ್ಚಿ, ರೈತರ ಹೋರಾಟಕ್ಕೆ ಬೆಂಬಲ ನೀಡಿದರು. ನಿತ್ಯ ಕೇಂದ್ರ ಬಸ್ ನಿಲ್ದಾಣದಲ್ಲಿ ಬೆಳಿಗ್ಗೆ ತೆರೆಯುತ್ತಿದ್ದ ಅಂಗಡಿ, ಹೋಟೆಲ್ ಸೇರಿದಂತೆ ಇತರ ವಾಣಿಜ್ಯ ಮಳಿಗೆಗಳೂ ಮುಚ್ಚಿದ್ದು, ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ.

ಹಲವು ಸಂಘಟನೆಗಳ ಬೆಂಬಲ

ತೊಗರಿಗೆ ವಿಶೇಷ ಪ್ಯಾಕೇಜ್ ಅನುದಾನ ಘೋಷಿಸಬೇಕೆಂದು ಒತ್ತಾಯಿಸಿ ಕರೆ ಕೊಟ್ಟಿದ್ದ ಕಲಬುರಗಿ ಬಂದ್‌ಗೆ ವಿದ್ಯಾರ್ಥಿ ಸಂಘಟನೆ, ಕೂಲಿ ಕಾರ್ಮಿಕ ಸಂಘಟನೆ, ಸಿಐಟಿಯು, ದಲಿತ ಸಂಘಟನೆ, ಎಸ್‌ಎಫ್‌ಐ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಸಂಘಟನೆಗಳು ಬೆಂಬಲ ಸೂಚಿಸಿದವು.

ಕರ್ನಾಟಕ ಪ್ರಾಂತ ರೈತ ಸಂಘ, ಅಖಿಲ ಭಾರತ ಕಿಸಾನ್ ಸಭಾ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೈನ್ಯ ಕೊಡಿಹಳ್ಳಿ ಚಂದ್ರಶೇಖರ ಬಣ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೈನ್ಯ ಕೆ ಎಸ್ ಪುಟ್ಟಣ್ಣಯ್ಯ ಬಣ, ಸೆಂಟ್ರಲ್ ಆಫ್ ಇಂಡಿಯಾ ಟ್ರೇಡ್ ಯೂನಿಯನ್ ದಲಿತ ಸಂಘರ್ಷ ಸಮಿತಿ ಡಾ ಅಂಬೇಡ್ಕರ್ ವಾದಿ, ದಲಿತ ಸಂಘರ್ಷ ಸಮಿತಿ(ಮಾವಳ್ಳಿ ಶಂಕರ್ ಬಣ), ಕಟ್ಟಡ ಕಾರ್ಮಿಕ ಸಂಘಗಳ, ತೊಗರಿ ಬೆಳೆಗಾರರ ಸಂಘ, ಆಹಾರ ಧಾನ್ಯಗಳ ಮತ್ತು ಬೀಜ ವ್ಯಾಪಾರಿಗಳ ಸಂಘಗಳು, ಚೇಂಬರ್ ಆಫ್ ಕಾಮರ್ಸ್, ಅಡಕೆ ವ್ಯಾಪಾರಸ್ಥರು, ಮಾಲಿಕರ ಸಂಘ, ಕಿರಾಣಿ ಬಜಾರ್ ವ್ಯಾಪಾರಸ್ಥರ ಸಂಘ, ಬೀದಿಬದಿ ವ್ಯಾಪಾರಸ್ಥರು, ದಾಲ್ ಮಿಲ್ಲರ್ ಅಸೋಶಿಯೇಶನ್ ಸಂಘ, ಅಕ್ಕಿ ವ್ಯಾಪಾರಸ್ಥರ ಸಂಘ, ಔಷಧಿ ವ್ಯಾಪಾರಸ್ಥರ ಸಂಘ ಸೇರಿದಂತೆ ಇನ್ನೂ ಹಲವು ಸಂಘಟನೆಗಳೂ ಕೂಡಾ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ತೊಗರಿ ಬೆಲೆ ಕುಸಿತದಿಂದ ರೈತರು ಕಂಗಾಲು : ಸ್ಪಂದಿಸುವುದೇ ಸರ್ಕಾರ?

ಬೆಳಿಗ್ಗೆಯಿಂದ ನಡೆದಿರುವ ಪ್ರತಿಭಟನೆಯಲ್ಲಿ ಶರಣಬಸಪ್ಪ ಮಮಶೆಟ್ಟಿ, ನಾಗೇಂದ್ರಪ್ಪ ಥಂಬೆ, ರಮೇಶ ರಾಗಿ, ಸುಜಾತಾ, ಇಬ್ರಾಹಿಂ ಪಟೇಲ್, ಭೀಮಾಶಂಕರ ಮಾಡಿಯಾಳ, ಕರೆಪ್ಪ, ಸಿದ್ದು, ಎಸ್ ಆರ್ ಕಲ್ಲೂರ್, ಅರ್ಜುನ್ ಗೊಬ್ಬೂರ್, ಮುಬೀನ್ ಅಹ್ಮದ್, ದಿಲೀಪ್ ನಾಗೋರೆ, ಬಾಬು ಹೂವಿನಹಳ್ಳಿ, ಮಹಾಂತೇಶ್ ಜಮಾದಾರ್,ಅರ್ಜುನ್ ಗೊಬ್ಬರ, ಅಲ್ಲಪಟೇಲ್ ಹಿಜೇರಿ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...