ಉಡುಪಿ | ಮಟ್ಟು ಬೀಚ್ ಬಳಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

Date:

ಸಮುದ್ರಕ್ಕಿಳಿದು ಈಜಾಡುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳ ಪೈಕಿ ಓರ್ವ ನೀರಿನಲ್ಲಿ‌ ಮುಳುಗಿ ಮೃತಪಟ್ಟ ದಾರುಣ ಘಟನೆ ಕಾಪು ತಾಲೂಕಿನ ಮಟ್ಟು ಬೀಚ್ ನಲ್ಲಿ ಶನಿವಾರ ಸಂಭವಿಸಿದೆ.

ಮೃತನನ್ನು ಮಣಿಪಾಲದ ಕಾಲೇಜೊಂದರ ವಿದ್ಯಾರ್ಥಿ ಮಧ್ಯಪ್ರದೇಶ ಮೂಲದ ವೀರೂರುಲ್ಕರ್ ( 18) ಎಂದು ಗುರುತಿಸಲಾಗಿದೆ. ಮಣಿಪಾಲದಿಂದ ಮಟ್ಟು ಬೀಚ್ ಗೆ ತೆರಳಿದ್ದ ಆರು ಮಂದಿ ವಿದ್ಯಾರ್ಥಿಗಳು ಸಮುದ್ರಕ್ಕಿಳಿದು ಮೋಜು ಮಸ್ತಿಯಲ್ಲಿ ತೊಡಗಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಈ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದರು. ಬಳಿಕ ವಿದ್ಯಾರ್ಥಿಗಳು ಅಲ್ಲಿಂದ ಬೇರೊಂದು ಸಮುದ್ರ ದಡಕ್ಕೆ ತೆರಳಿ ಅಲ್ಲಿ ಈಜಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳೀಯರಾದ ಆರ್ಯನ್, ಪ್ರವೀಣ್ ಮತ್ತಿತರರು ರಕ್ಷಣಾ ಕಾರ್ಯ ನಡೆಸಿದ್ದರು. ಕಾಪು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...