ಬೀದರ್‌ | ಕಲುಷಿತ ನೀರು ಸೇವಿಸಿ ಮಕ್ಕಳು ಸೇರಿ 18 ಮಂದಿ ಅಸ್ವಸ್ಥ; ಡಿಸಿ ಭೇಟಿ ಪರಿಶೀಲನೆ

Date:

ಕಲುಷಿತ ನೀರು ಕುಡಿದು 6 ಮಕ್ಕಳು ಸೇರಿದಂತೆ 18 ಮಂದಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಬೀದರ್‌ ಜಿಲ್ಲೆಯ ಔರಾದ್‌ ತಾಲೂಕಿನ ಎಕಂಬಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಕ್ಯಾಳ ಗ್ರಾಮದಲ್ಲಿ ನೀರಿನ ಸಮಸ್ಯೆ ‌ಉಲ್ಬಣಗೊಂಡ ಕಾರಣ ತೆರೆದ ಬಾವಿಯ ನೀರು ಸೇವಿಸಿದ್ದರಿಂದ ವಾಟರ್ ಮ್ಯಾನ್ ಸೇರಿದಂತೆ 18 ಮಂದಿ ಜನ ಅಸ್ವಸ್ಥರಾಗಿದ್ದಾರೆ.

ಅಮೃತಾ, ಸಾಕ್ಷಿ, ಜಯಶಂಕರ್, ದಿವ್ಯಾ, ಗಾಯಿತ್ರಿ ಹಾಗೂ ಕಾರ್ತಿಕ ಎಂಬ ಆರು ಮಕ್ಕಳು ಅಸ್ವಸ್ಥರಾಗಿದ್ದಾರೆ. ವಾಂತಿ ಭೇದಿ, ಹೊಟ್ಟೆ ನೋವು ಹಿನ್ನೆಲೆ ಎಲ್ಲರನ್ನು ಔರಾದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಬೀದರ್‌

ವಿಷಯ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಎಸ್ಪಿ ಚನ್ನಬಸವಣ್ಣ ಲಂಗೋಟಿ, ಜಿ.ಪಂ ಸಿಇಒ ಶಿಲ್ಪಾ ಎಂ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದರು.

ಚರಂಡಿ ಮೇಲೆ ಕುಡಿಯುವ ನೀರಿನ ಬಾವಿ ಇದ್ದು, ಕಲುಷಿತಗೊಂಡ ನೀರು ಕುಡಿದ ಕಾರಣ ಗ್ರಾಮಸ್ಥರು ಅಸ್ವಸ್ಥರಾಗಿದ್ದಾರೆ. ಇನ್ನೂ ಗ್ರಾಮದಲ್ಲಿ ಹಲವರಿಗೆ ವಾಂತಿ ಭೇದಿ ಶುರುವಾಗಿದೆ, ಗ್ರಾಮದಲ್ಲಿ ಅಂಬುಲೆನ್ಸ್ ಬಂದಿದೆ. ಅಸ್ವಸ್ಥರಾಗಿದವರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಗ್ರಾಮಸ್ಥರೊಬ್ಬರು ಈದಿನ.ಕಾಮ್ ಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರಿಮ್ಸ್‌ ನಿರ್ದೇಶಕನ ಅಮಾನತಿಗೆ ಆಗ್ರಹ; ದಸಂಸ ಧರಣಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...