ಚಿಂತಾಮಣಿ | 50 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಎಂ ಸಿ ಸುಧಾಕರ್ ಚಾಲನೆ

Date:

ತಾಲ್ಲೂಕು ವ್ಯಾಪ್ತಿಯ ಜನರ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ತಾಲೂಕಿನ ವಿವಿದೆಡೆ 50 ಕೋಟಿ ವೆಚ್ಚದ ರಸ್ತೆ ಅಗಲೀಕರಣ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ ಸಿ ಸುಧಾಕ‌ರ್ ತಿಳಿಸಿದರು.

ಚಿಂತಾಮಣಿ ತಾಲೂಕಿನ ಮುರುಗಮಲ್ಲ ಸೇರಿದಂತೆ ವಿವಿಧ ಗ್ರಾಮಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ತಾಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಯ ಬೀದಿಗಳಿಗೆ ಕಾಂಕ್ರಿಟ್ ರಸ್ತೆ ಹಾಗೂ ಚರಂಡಿ ಸೇರಿದಂತೆ ವಿವಿಧ ಮೂಲ ಭೂತ ಸೌಕರ್ಯಗಳನ್ನು ನಿರ್ಮಿಸಲಾಗುವುದು ಎಂದರು.

ಮುರಗಮಲ್ಲ ಗ್ರಾಮದಿಂದ ಸೀಕಲ್ ಗ್ರಾಮದವರೆಗಿನ ರಸ್ತೆಯನ್ನು 8 ಮೀಟರ್ ನಷ್ಟು ಅಗಲೀಕರಣಗೊಳಿಸಲಾಗುವುದು. ಸದ್ಯಕ್ಕೆ ಡಿವೈಡರ್ ನಿರ್ಮಾಣಕ್ಕೆ ಅನುಮತಿ ಇಲ್ಲ. 50 ಕೋಟಿ ವೆಚ್ಚದ ಕಾಮಗಾರಿಯಲ್ಲಿ ಪ್ರತಿ ಗ್ರಾಮಕ್ಕೂ 600 ಮೀಟರ್ ಉದ್ದದ ಹಾಗೂ 2 ಅಡಿ ಎತ್ತರದ ಉತ್ತಮ ಗುಣ ಮಟ್ಟದ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.
ಮುಖ್ಯಮಂತ್ರಿಗಳ ವಿಶೇಷ ಅನುದಾನ ಪಡೆದು ಮುಂದಿನ ದಿನಗಳಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಈ ಭಾಗದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಂತಾಮಣಿಯಿಂದ ಚೇಳೂರು ಸಂಪರ್ಕಿಸುವ ರಸ್ತೆಗೆ 10 ಕೋಟಿ ರೂ., ಬಾಗೇಪಲ್ಲಿ ರಸ್ತೆಗೆ 10 ಕೋಟಿ ರೂ. ಹಾಗೂ ಇರಗಪಲ್ಲಿ ರಸ್ತೆಗೆ ಅನುದಾನವನ್ನು ನೀಡುವುದಾಗಿ ಭರವಸೆ ನೀಡಿದರು. ಉಳಿದಿರುವ ಗಡಿ ಗ್ರಾಮಗಳನ್ನು ಗುರುತಿಸಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಈ ವೇಳೆ ಸ್ಥಳೀಯ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ ಇತ್ಯರ್ಥಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮದ ಪರಿಮಿತಿಯ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಯಾವುದೇ ಸಮಸ್ಯೆಗಳಾಗದೇ ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರು ಸಹಕಾರ ನೀಡಬೇಕು. ಅದರಂತೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಅನೇಕ ಕೆಲಸದ ಒತ್ತಡದಿಂದ ಎಲ್ಲ ಗ್ರಾಮಗಳಿಗೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಗ್ರಾಮಸ್ಥರು ಅರ್ಥಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಬುಕ್ಕನಹಳ್ಳಿ ಶಿವಣ್ಣ, ಕೆ ಪಿ ಸಿ ಸಿ ಸದಸ್ಯರಾದ ಕೃಷ್ಣಮೂರ್ತಿ, ನಾಗರೆಡ್ಡಿ, ಗುತ್ತಿಗೆದಾರರಾದ ಸತ್ಯನಾರಾಯಣರೆಡ್ಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹಾಜಿ ಅನ್ಸರ್ ಖಾನ್, ಸೋಮಶೇಖರ ರೆಡ್ಡಿ, ಮೌಲಾಜಿ ರಾವ್, ಮುರುಗಮಲ್ಲ ಲಕ್ಷ್ಮೀನಾರಾಯಣ್ ರೆಡ್ಡಿ, ಬಂಕ್ ಕೃಷ್ಣಮೂರ್ತಿ, ಅಮೀರ್ ಜಾನ್, ತನ್ವೀರ್, ಪ್ಯಾರಜಾನ್, ಲೋಕೊಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಗಿರೀಶ್, ಪೋಲಿಸ್ ಇಲಾಖೆ ಸಿಬ್ಬಂದಿ, ಸ್ಥಳೀಯ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಗ್ರಾಮಸ್ಥರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...