ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಆಗದಂತೆ ಕ್ರಮ: ನೋಡಲ್ ಅಧಿಕಾರಿ

Date:

ರೋಣ ತಾಲೂಕಿನಲ್ಲಿ ಜನ-ಜಾನುವಾರುಗಳಿಗೆ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ನೋಡಿಕೊಳ್ಳಬೇಕು ಹಾಗೂ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ರೋಣ ತಾಲೂಕಿನ ಬರಗಾಲ ನೋಡಲ್ ಅಧಿಕಾರಿ ಮಹೇಶಕುಮಾರ್ ವಾಗೆ ಸೂಚನೆ ನೀಡಿದರು.

ರೋಣ ತಾಲೂಕು ಪಂಚಾಯತಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. “ಗ್ರಾಮೀಣ ಭಾಗದಲ್ಲಿ ಜನರಿಗೆ ಹಾಗೂ ಜಾನುವಾರುಗಳಿಗೆ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗಬಾರದು. ರೋಣ ತಾಲೂಕಿನ 22 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಯೂ ನೀರಿನ ಸಮಸ್ಯೆ ನಿಭಾಯಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು” ಎಂದರು.

“ಮುಂದಿನ ಎರಡು ಮೂರು ತಿಂಗಳ ಅವಧಿಯಲ್ಲಿ ಜನಸಾಮಾನ್ಯರಿಗೆ ಜಾನುವಾರುಗಳಿಗೆ ನೀರು, ಮೇವಿನ ಸಮಸ್ಯೆ ತಲೆದೂರಿದಲ್ಲಿ ಸಮರ್ಪಕವಾಗಿ ಅಧಿಕಾರಿಗಳು ನಿರ್ವಹಣೆ ಮಾಡಬೇಕು. ಜನಸಾಮಾನ್ಯರ ಅಹವಾಲುಗಳಿಗೆ ಸಹಾನುಭೂತಿಯಿಂದ ಸ್ಪಂದಿಸಬೇಕು ಎಂದು ತಿಳಿಸಿದರು. ಜೊತೆಗೆ ಪ್ರತಿ ಯೋಜನೆಯಲ್ಲೂ ಒಂದು ಹೆಚ್ಚುವರಿ ನೀರಿನ ಮೂಲ ಮಾಡಬೇಕಿದೆ, ನೀರಿ‌ನ ಕೊರತೆ ಆಗುವ ಸಾಧ್ಯತೆ ಇದ್ದ ಗ್ರಾಮ ಪಂಚಾಯತಿ ಅಧಿಕಾರಿಗಳು ಕೂಡಲೆ ಅದಕ್ಕೆ ಪರಿಹಾರ ಹುಡಕಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ತಹಶೀಲ್ದಾರ್ ನಾಗರಾಜ, ಕಾರ್ಯ ನಿರ್ವಾಹಕ ಅಧಿಕಾರಿ ಎಸ್ ಕೆ ಇನಾಮದಾರ ಹಾಗೂ ತಾಲೂಕ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು…

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...