ವಿರೋಧ ಪಕ್ಷಗಳ ಸಭೆ | ಬೆಂಗಳೂರಿಗೆ ಆಗಮಿಸಿದ ಪ್ರತಿಪಕ್ಷಗಳ ನಾಯಕರು

Date:

ಇಂದಿನಿಂದ ಎರಡು ದಿನಗಳ ವರೆಗೆ (ಜು.17 ಮತ್ತು 18) ನಡೆಯಲಿರುವ ವಿರೋಧ ಪಕ್ಷಗಳ ಸಭೆಗೆ ಪಾಲ್ಗೊಳ್ಳಲು ವಿರೋಧ ಪಕ್ಷಗಳ ನಾಯಕರು ಬೆಂಗಳೂರಿಗೆ ಆಗಮಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮತ್ತು ಪಕ್ಷದ ವರಿಷ್ಠರಾದ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದರು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಕೂಡ ಹೂ ಗುಚ್ಛ ನೀಡಿ ಕಾಂಗ್ರೆಸ್‌ ನಾಯಕರನ್ನು ಸ್ವಾಗತಿಸಿದರು.

ಹಾಗೆಯೇ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸ್ವಾಗತಿಸಿದರು. ಸ್ಟಾಲಿನ್ ಅವರಿಗೆ ಹೂ ಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡ ಡಿಕೆಶಿ, ಕೆಲ ಕಾಲ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಎಂ ಕೆ ಸ್ಟಾಲಿನ್

ಇನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಆಗಮಿಸಿದ್ದು, ಡಿಸಿಎಂ ಡಿಕೆ ಶಿವಕುಮಾರ್‌ ಅವರು ಹೂ ಗುಚ್ಛ ನೀಡಿ ಬರಮಾಡಿಕೊಂಡರು. 2024ರ ಲೋಕಸಭಾ ಚುನಾವಣೆಗೆ ಜಂಟಿ ಕಾರ್ಯತಂತ್ರವನ್ನು ರೂಪಿಸುವ ಸಲುವಾಗಿ ವಿರೋಧ ಪಕ್ಷಗಳು ಸೋಮವಾರದಿಂದ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಚರ್ಚಿಸಲಿವೆ.‌

ವಿರೋಧ ಪಕ್ಷಗಳ ಸಭೆ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...