ಮೇಲುಕೋಟೆ ಚೆಲುವ ನಾರಾಯಣಸ್ವಾಮಿ ದೇವಾಲಯದ ಆಸ್ತಿ ಕಬಳಿಕೆ ಆರೋಪ

Date:

ಮುಡಾ ಹಗರಣದ ನಡುವೆ ಮೈಸೂರಿನಲ್ಲಿ ಮತ್ತೊಂದು ಭೂಹಗರಣದ ಆರೋಪ ಕೇಳಿಬಂದಿದೆ. ಮೇಲುಕೋಟೆ ಚೆಲುವ ನಾರಾಯಣಸ್ವಾಮಿ ದೇಗುಲಕ್ಕೆ ಸೇರಿದ ಜಮೀನನ್ನು ಬೇರೊಬ್ಬರಿಗೆ ಅಕ್ರವಾಗಿ ಪರಭಾರೆ ಮಾಡಿಕೊಡಲು ಯತ್ನಿಸಲಾಗಿದೆ ಎಂದು ರವಿಕುಮಾರ್ ಎಂಬವರು ಆರೋಪಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಮೈಸೂರಿನ ಕೆಸರೆ ಗ್ರಾಮದಲ್ಲಿ ಸರ್ವೆ ನಂಬರ್ 396, 397, 398 ಮತ್ತು 399ರಲ್ಲಿರುವ ಒಟ್ಟು 21.5 ಎಕರೆ ಭೂಮಿಯನ್ನು ಮಂಡ್ಯದ ನುಗುವಿನಹಳ್ಳಿಯ ಗೋಸೇಗೌಡ ಕುಟುಂಬ ಚಲುವರಾಯಸ್ವಾಮಿ ದೇವಾಲಯಕ್ಕೆ ದೇಣಿಗೆ ನೀಡಿತ್ತು. ಆದರೆ, ಆ ಭೂಮಿಯನ್ನು ಮೈಸೂರು ಉಪ ವಿಭಾಗಾಧಿಕಾರಿ ರಕ್ಷಿತ್ ಅವರು ತಮ್ಮ ಸ್ನೇಹಿತರಾದ ಗುತ್ತಿಗೆದಾರ ಸತೀಶ್‌ಬಾಬು ರೆಡ್ಡಿ ಎಂಬವರಿಗೆ ಅಕ್ರಮವಾಗಿ ಕೊಡಿಸಲು ಯತ್ನಿಸಿದ್ದಾರೆ ಎಂದು ರವಿಕುಮಾರ್ ಆರೋಪಿಸಿದ್ದಾರೆ. ಈ ಅಕ್ರಮದಲ್ಲಿ ಕಂದಾಯ ಅಧಿಕಾರಿಗಳು ಕೂಡ ಶಾಮೀಲಾಗಿದ್ದಾರೆ ಎಂದು ಅವರು ದೂರಿದ್ದಾರೆ.

ಜಮೀನನ್ನು ಮರಳಿ ದೇವಾಲಯದ ಹೆಸರಿಗೆ ವರ್ಗಾಯಿಸಬೇಕು ಎಂದು ಒತ್ತಾಯಿಸಿದ್ದಾರೆ. ದೂರಿನ ಆಧಾರದ ಮೇಲೆ ಮಂಡ್ಯ ಜಿಲ್ಲಾಡಳಿತ ದಾಖಲೆ ಪರಿಶೀಲನೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...