ಬೀದರ್‌ | ಜನವಾಡ ಗ್ರಾಪಂ ಪಿಡಿಒ ವರ್ಗಾವಣೆಗೆ ಸದಸ್ಯರ ಆಗ್ರಹ

Date:

ಒಂಬತ್ತು ತಿಂಗಳಿಂದ ಸಾಮಾನ್ಯ ಸಭೆ ನಡೆಸದೇ ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ತೆರಿಗೆ ಹಣ ಹಾಗೂ 15ನೇ ಹಣಕಾಸು ಯೋಜನೆಯ ಲಕ್ಷಾಂತರ ರೂ. ಅವ್ಯವಹಾರ ನಡೆಸಿದ ಜನವಾಡ ಗ್ರಾಮ ಪಂಚಾಯತ್ ಪಿಡಿಒ ಸವಿತಾ ಹಿರೇಮಠ ಅವರನ್ನು ವರ್ಗಾಯಿಸುವಂತೆ ಸದಸ್ಯರು ಒತ್ತಾಯಿಸಿದ್ದಾರೆ.

ಈ ಸಂಬಂಧ ಜನವಾಡ ಗ್ರಾಮ ಪಂಚಾಯತ್ ಉಪಾಧ್ಯಕ್ಷ ತುಕರಾಮ ಜಗದಾಳೆ ಸೇರಿದಂತೆ 17 ಜನ ಸದಸ್ಯರು ಜಿಲ್ಲಾ ಪಂಚಾಯತ್‌ ಮುಖ್ಯ ನಿರ್ವಾಹಕ ಅಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

“ಬೀದರ್‌ ತಾಲೂಕಿನ ಜನವಾಡಾ ಗ್ರಾಮ ಪಂಚಾಯತ್ ಪಿಡಿಓ ಸವಿತಾ ಹಿರೇಮಠ ಅವರು 9 ತಿಂಗಳಿಂದ ಗ್ರಾಪಂ ಸಾಮಾನ್ಯ ಸಭೆ ಮಾಡಲಾರದೇ ತೆರಿಗೆ ಹಣ ಮತ್ತು 15ನೇ ಹಣಕಾಸು ಯೋಜನೆಯ ಲಕ್ಷಾಂತರ ಹಣವನ್ನು ಕುಡಿಯುವ ನೀರು, ಸ್ವಚ್ಛತೆ ಕಾಮಗಾರಿ ಹೆಸರಿನಲ್ಲಿ ಕಬಳಿಸಿದ್ದಾರೆ. ಸದಸ್ಯರ ಗಮನಕ್ಕೆ ತರಲಾರದೇ ಡಿಜಿಟಲ್‌ ಖಾತಾ ನಮೂನೆ 11-A ಅಕ್ರಮವಾಗಿ ತೆಗೆದುಕೊಟ್ಟು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“15ನೇ ಹಣಕಾಸಿನ ಕ್ರಿಯಾ ಯೋಜನೆ ಸಿದ್ಧಪಡಿಸಲು ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು ಹಲವು ಬಾರಿ ಮನವಿ ಮಾಡಿದರೂ ಕ್ಯಾರೇ ಎನ್ನದೆ ಮನಬಂದಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಮೂರು ಬಾರಿ ಗ್ರಾಪಂ ಸಭೆ ನಡೆಸಲು ನೋಟಿಸ್ ನೀಡಿದ್ದರೂ ಕುಂಟು ನೆಪ ಹೇಳಿ ರದ್ದುಪಡಿಸಿದ್ದಾರೆ. ಇದರಿಂದ ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ” ಎಂದು ದೂರಿದರು.

“ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆಸಿದ ಪಿಡಿಓ ಸವಿತಾ ಹಿರೇಮಠ ಅವರನ್ನು ಸೇವೆಯಿಂದ ವರ್ಗಾಯಿಸುವಂತೆ ಕಳೆದ ಮಾರ್ಚ್‌ 7ರಂದು ಜಿಲ್ಲಾ ಪಂಚಾಯತ್‌ ಸಿಇಒ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಗಿತ್ತು. ಆದರೆ ಯಾವುದೇ ಕ್ರಮ ಜರುಗಿಸಿಲ್ಲ. ಈಗಲಾದರೂ ಇದನ್ನು ಗಂಭೀರವಾಗಿ ಪರಿಗಣಿಸಿ ಸದರಿ ಪಿಡಿಒಗೆ ವರ್ಗಾಯಿಸಿ, ಅವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮೇ 20ರಂದು ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಧರಣಿ ಸತ್ಯಾಗ್ರಹ ನಡೆಸಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಫೀನಿಕ್ಸ್‌ನಂತೆ ಎದ್ದು ಬಂದ ಆರ್‌ಸಿಬಿ ಪ್ಲೇ-ಆಫ್‌ಗೆ: ಚೆನ್ನೈ ಸೂಪರ್ ಕಿಂಗ್ಸ್‌ ಮನೆಗೆ

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ ಸದಸ್ಯರಾದ ಸುರೇಖಾ ಸಂತೋಷ, ಶಬಾನಾ ಬೇಗಂ ಸಿರಾಜೋದ್ದಿನ್‌, ಎಂಡಿ ಲತೀಫ್‌ ಖುರೇಷಿ, ಮುಕೇಶ ದೀಲಿಪಕುಮಾರ, ಸುಮನ ಗಣಪತಿ, ರೀನಾ ವಿಜಯಕುಮಾರ, ಚಮನ್ ಸಿಂಗ ಮಹಾವೀರ, ಪ್ರೀತಿ ದಾದಾರಾವ, ಲಕ್ಷ್ಮಣ ಶಂಕರ, ರಘುನಾಥ ಶಂಕರ, ಪ್ರಭಾವತಿ ಅಶೋಕ, ರಾಧಾಬಾಯಿ ಸಂಜುಕುಮಾರ, ಲಕ್ಷ್ಮೀಬಾಯಿ ಸುಭಾಷ, ರಮೇಶ ಗಣಪತಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...